ಸಾರಾಂಶ
ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ₹4 ಕೋಟಿ ವೆಚ್ಚದಲ್ಲಿ ಮುಧೋಳ ನಗರದಲ್ಲಿ ನಿರ್ಮಿಸಿದ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯವನ್ನು ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಉದ್ಘಾಟಿಸಿದರು.
ಕನ್ನಡಪ್ರಭ ವಾರ್ತೆ ಮುಧೋಳ
ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ₹4 ಕೋಟಿ ವೆಚ್ಚದಲ್ಲಿ ಮುಧೋಳ ನಗರದಲ್ಲಿ ನಿರ್ಮಿಸಿದ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯವನ್ನು ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು, ಈ ನೂತನ ವಸತಿ ನಿಲಯ ವಿದ್ಯಾರ್ಥಿನಿಯರಿಗೆ ಗುಣಮಟ್ಟದ ಶಿಕ್ಷಣ ಮತ್ತು ವಸತಿ ಸೌಕರ್ಯ ಒದಗಿಸುವ ಗುರಿ ಹೊಂದಿದ್ದು, ಸಮಾಜದ ಶೈಕ್ಷಣಿಕ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಲಿದೆ. ಈ ಯೋಜನೆ ಸಮಾಜ ಕಲ್ಯಾಣ ಇಲಾಖೆಯ ಶೈಕ್ಷಣಿಕ ಕಾರ್ಯಕ್ರಮಗಳಿಗೆ ಹೊಸ ಆಯಾಮ ತಂದಿದ್ದು, ಮುಧೋಳದ ವಿದ್ಯಾರ್ಥಿನಿಯರಿಗೆ ಉತ್ತಮ ಭವಿಷ್ಯ ರೂಪಿಸಲು ಸಹಾಯಕವಾಗಲಿದೆ ಎಂದು ಹೇಳಿದರು.ಮುಧೋಳ ನಗರಸಭೆ ಅಧ್ಯಕ್ಷೆ ಸುನಂದಾ ತೇಲಿ, ಲೋಕಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕಿವಡಿ, ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದುಗೌಡ ಪಾಟೀಲ, ಮುಧೋಳ ನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ ರಾಘು ಮೊಕಾಶಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎಚ್.ಎಂ. ಪಾಟೀಲ ಹಾಗೂ ಇಲಾಖೆಯ ಸಿಬ್ಬಂದಿ ಮತ್ತು ವಸತಿ ಶಾಲಾ ಮಕ್ಕಳು ಇತರರು ಇದ್ದರು.