ಹಿಂದು-ಮುಸ್ಲಿಂ ಭಾವೈಕ್ಯತೆಯ ಮೊಹರಂ ಆಚರಣೆ

| Published : Jul 07 2025, 12:34 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಹಿಂದು-ಮುಸ್ಲಿಂ ಭಾವೈಕ್ಯತೆ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಕೊನೆಯ ದಿನವಾದ ಭಾನುವಾರ ಸಂಜೆ ಅಲಾಯಿ ದೇವರ ಹಾಗೂ ಡೋಲಿಗಳ ವಿಸರ್ಜನೆ ಅಂಗವಾಗಿ ಜರುಗಿದ ಮೆರವಣಿಗೆಯಲ್ಲಿ ಜನರು ಶ್ರದ್ಧಾ, ಭಕ್ತಿಯಿಂದ ಭಾಗವಹಿಸಿದರು

ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ

ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಹಿಂದು-ಮುಸ್ಲಿಂ ಭಾವೈಕ್ಯತೆ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಕೊನೆಯ ದಿನವಾದ ಭಾನುವಾರ ಸಂಜೆ ಅಲಾಯಿ ದೇವರ ಹಾಗೂ ಡೋಲಿಗಳ ವಿಸರ್ಜನೆ ಅಂಗವಾಗಿ ಜರುಗಿದ ಮೆರವಣಿಗೆಯಲ್ಲಿ ಜನರು ಶ್ರದ್ಧಾ, ಭಕ್ತಿಯಿಂದ ಭಾಗವಹಿಸಿದರು. ಪಟ್ಟಣದ ವಿವಿಧೆಡೆ ಪ್ರತಿಷ್ಠಾಪಿಸಿದ್ದ ಅಲಾಯಿ ದೇವರಿಗೆ ಭಾನುವಾರ ಸಂಜೆ ಜರುಗಿದ ವಿಸರ್ಜನಾ ಕಾರ್ಯಕ್ರಮದಲ್ಲಿ ಹಿಂದೂ-ಮುಸ್ಲಿಂ ಬಾಂಧವರು ಹಲಗೆ ನಾದಕ್ಕೆ ಹೆಜ್ಜೆ ಹಾಕಿ ಕುಣಿಯುವ ಮೂಲಕ ಮೆರವಣಿಗೆಯ ಮೆರುಗನ್ನು ಹೆಚ್ಚಿಸಿದರು. ಡೋಲಿ, ಅಲಾಯಿ ದೇವರು ಸಾಗುವ ರಸ್ತೆಯಲ್ಲಿ ಜಮಾಯಿಸಿದ್ದ ಜನರು ಉತ್ತತ್ತಿ, ಶೇಂಗಾ, ಚುರಮುರಿ ದರ್ಶನ ಪಡೆದರು.ಇಂಗಳೇಶ್ವರ ರಸ್ತೆ, ಅಗಸಿ ಒಳಗಡೆ, ಮಹಾರಾಜರ ಮಠದ ಹತ್ತಿರ, ನಾಗೂರ ರಸ್ತೆ ಸೇರಿದಂತೆ ವಿವಿಧೆಡೆ ಪ್ರತಿಷ್ಠಾಪಿಸಿದ್ದ ಡೋಲಿ ಹಾಗೂ ಅಲಾಯಿ ದೇವರಗಳು ಮೆರವಣಿಗೆ ಮೂಲಕ ಬಸವೇಶ್ವರ ವೃತ್ತದಲ್ಲಿ ಸಮಾಗಮಗೊಂಡವು. ನಂತರ ಬಸವ ತೀರ್ಥ ಬಾವಿಯಲ್ಲಿ ವಿಸರ್ಜನಾ ಕಾರ್ಯ ನಡೆಯಿತು. ಮೆರವಣಿಗೆಯಲ್ಲಿ ಅಪಾರ ಸಂಖ್ಯೆಯ ಹಿಂದು-ಮುಸ್ಲಿಂ ಬಾಂಧವರು ಭಾಗವಹಿಸಿದ್ದರು. ಮುಂಜಾಗ್ರತಾ ಕ್ರಮವಾಗಿ ಪಿಐ ಗುರುಶಾಂ ದಾಶ್ಯಾಳ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.