ಮಂಗಳೂರು: ಮಂಗಳೂರಿನ ಮುಕ್ಕದಲ್ಲಿರುವ ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಸಂಸ್ಥೆಯಲ್ಲಿ ಏ.29 ಮತ್ತು 30ರಂದು ಇನ್‌ಸ್ಟಿಟ್ಯೂಟ್ ಆಫ್ ಎಲೆಕ್ಟ್ರಿಕಲ್ ಆಂಡ್ ಎಲೆಕ್ಟ್ರಾನಿಕ್ಸ್ ಎಂಜಿನಿಯರ್ಸ್ (ಐಇಇಇ) ಬೆಂಗಳೂರು ಮತ್ತು ಮಂಗಳೂರು ವಿಭಾಗಗಳ ಸಹಭಾಗಿತ್ವದಲ್ಲಿ ‘ಹೊಸತಾಗಿ ಬೆಳೆಯುತ್ತಿರುವ ಸಮನ್ವಯ ವಿಜ್ಞಾನ ಮತ್ತು ತಂತ್ರಜ್ಞಾನಗಳ’ ಕುರಿತ ಅಂತರಾಷ್ಟ್ರೀಯ ಸಮ್ಮೇಳನ (ಐಸಿಇಎಸ್‌ಎಸ್ 2026) ಆಯೋಜಿಸಲಾಗಿದೆ ಎಂದು ಸಂಸ್ಥೆಯ ಮುಖ್ಯಸ್ಥ ಮತ್ತು ಪ್ರಾಂಶುಪಾಲ ಡಾ.ರಾಮಕೃಷ್ಣ ಎನ್.ಹೆಗಡೆ ತಿಳಿಸಿದರು.ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಂಪ್ಯೂಟರ್ ಎಂಜಿನಿಯರಿಂಗ್, ಎಲೆಕ್ಟ್ರಾನಿಕ್ ಆಂಡ್ ಕಮ್ಯುನಿಕೇಷನ್, ಮೆಕ್ಯಾನಿಕಲ್ ಎಂಜಿನಿಯರಿಂಗ್, ರೋಬೋಟಿಕ್ಸ್ ಹಾಗೂ ಮೂಲಭೂತ ವಿಜ್ಞಾನ ಸೇರಿದಂತೆ ಬಹುಶಾಖೀಯ ವಿಷಯ ವಲಯಗಳಿಗೆ ಸಂಬಂಧಿಸಿದ 509 ಸಂಶೋಧನಾ ಪ್ರಬಂಧಗಳಲ್ಲಿ ಆಯ್ಕೆ ಮಾಡಲಾದ 152 ಪ್ರಬಂಧಗಳನ್ನು ತಜ್ಞರು ಹಾಗೂ ವಿದ್ಯಾರ್ಥಿಗಳು ಪ್ರಸ್ತುತಪಡಿಸಲಿದ್ದಾರೆ. ಇದರ ಜೊತೆಗೆ ದಿಕ್ಸೂಚಿ ಭಾಷಣ, ತಜ್ಞರ ಹಾಗೂ ಪರಿಣಿತರ ಚರ್ಚೆಗಳು ಮತ್ತು ಪ್ರಾಜೆಕ್ಟ್ ಪ್ರದರ್ಶನಗಳು ನಡೆಯಲಿವೆ ಎಂದರು. 29ರಂದು ಬೆಳಗ್ಗೆ 11ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಭಾರತದ ಖ್ಯಾತ ಅಂತರಿಕ್ಷ ವಿಜ್ಞಾನಿ, ದೇಶದ ಸತ್ಯುನ್ನತ ಅಂತರಿಕ್ಷ ಸಂಸ್ಥೆ ಇಸ್ರೋ ಮಾಜಿ ಅಧ್ಯಕ್ಷ, ಪದ್ಮಶ್ರೀ ಪುರಸ್ಕೃತ ಎ.ಎಸ್.ಕಿರಣ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಕಾರ್ಯಕ್ರಮ ಉದ್ಘಾಟಿಸುವರು. ಶ್ರೀನಿವಾಸ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಎ.ಶ್ರೀನಿವಾಸ್ ರಾವ್ ಅಧ್ಯಕ್ಷತೆ ವಹಿಸುವರು. ಐಇಇಇ ಮಂಗಳೂರು ಉಪವಿಭಾಗದ ಅಧ್ಯಕ್ಷ ಡಾ.ವೇಣುಗೋಪಾಲ ಪಿ.ಎಸ್., ಶ್ರೀ ವಿಶ್ವವಿದ್ಯಾಲಯದ ವಿಶ್ವಸ್ತ ಮಂಡಳಿಯ ಸದಸ್ಯರಾದ ಎ.ವಿಜಯಲಕ್ಷ್ಮಿ ಆರ್.ರಾವ್, ಎ.ಮಿತ್ರ ಎಸ್.ರಾವ್, ಶ್ರೀನಿವಾಸ್ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಕೆ.ಸತ್ಯನಾರಾಯಣ ರೆಡ್ಡಿ, ರಿಜಿಸ್ಟ್ರಾರ್ ಅಕಾಡೆಮಿಕ್ ಡಾ.ಆದಿತ್ಯ ಕುಮಾರ್ ಮಯ್ಯ, ರಿಜಿಸ್ಟ್ರಾರ್ ಡಾ.ಅನಿಲ್ ಕುಮಾರ್, ರಿಜಿಸ್ಟ್ರಾರ್ ಮೌಲ್ಯಮಾಪನ ಡಾ.ಶ್ರೀನಿವಾಸ ಮಯ್ಯ ಡಿ., ರಿಜಿಸ್ಟ್ರಾರ್ ಡೆವಲಪ್‌ಮೆಂಟ್ ಡಾ.ಅಜಯ್ ಕುಮಾರ್, ಕಾಲೇಜಿನ ಪ್ರಾಂಶುಪಾಲ ಡಾ.ರಾಮಕೃಷ್ಣ ಎನ್.ಹೆಗಡೆ, ಸಂಚಾಲಕ ಪ್ರೊ.ಗೌರವ್ ಪ್ರಸಾದ್ ಉಪಸ್ಥಿತರಿರಲಿದ್ದಾರೆ ಎಂದರು.
ಐಸಿಇಎಸ್‌ಎಸ್‌ಟಿ 2026ರ ಸಂಚಾಲಕ ಪ್ರೊ.ಗೌರವ್ ಪ್ರಸಾದ್, ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ.ರಾಮ ನರಸಿಂಹ ಇದ್ದರು.ಮುಕ್ಕ: 29, 30ರಂದು ಅಂತಾರಾಷ್ಟ್ರೀಯ ಸಮ್ಮೇಳನ ಐಸಿಇಎಸ್‌ಎಸ್‌ಟಿ 2026
ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಸಂಸ್ಥೆಯಲ್ಲಿ ಏ.29 ಮತ್ತು 30ರಂದು ಇನ್‌ಸ್ಟಿಟ್ಯೂಟ್ ಆಫ್ ಎಲೆಕ್ಟ್ರಿಕಲ್ ಆಂಡ್ ಎಲೆಕ್ಟ್ರಾನಿಕ್ಸ್ ಎಂಜಿನಿಯರ್ಸ್ (ಐಇಇಇ) ಬೆಂಗಳೂರು ಮತ್ತು ಮಂಗಳೂರು ವಿಭಾಗಗಳ ಸಹಭಾಗಿತ್ವದಲ್ಲಿ ‘ಹೊಸತಾಗಿ ಬೆಳೆಯುತ್ತಿರುವ ಸಮನ್ವಯ ವಿಜ್ಞಾನ ಮತ್ತು ತಂತ್ರಜ್ಞಾನಗಳ’ ಕುರಿತ ಅಂತರಾಷ್ಟ್ರೀಯ ಸಮ್ಮೇಳನ (ಐಸಿಇಎಸ್‌ಎಸ್ 2026) ಆಯೋಜಿಸಲಾಗಿದೆ ಎಂದು ಸಂಸ್ಥೆಯ ಮುಖ್ಯಸ್ಥ ಮತ್ತು ಪ್ರಾಂಶುಪಾಲ ಡಾ.ರಾಮಕೃಷ್ಣ ಎನ್.ಹೆಗಡೆ ತಿಳಿಸಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.