ರಾಮನಗರ ಪ್ರಾಧಿಕಾರದ ಸಮಸ್ಯೆಗಳಿಗೆ ಮುಕ್ತಿ: ಶಾಸಕ

| Published : Mar 15 2024, 01:21 AM IST

ಸಾರಾಂಶ

ರಾಮನಗರ: ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಚೇತನ್‌ಕುಮಾರ್ ಅವರು ಅಧಿಕಾರ ಸ್ವೀಕಾರ ಮಾಡಿದರು.

ರಾಮನಗರ: ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಚೇತನ್‌ಕುಮಾರ್ ಅವರು ಅಧಿಕಾರ ಸ್ವೀಕಾರ ಮಾಡಿದರು.

ನಗರದ ಪ್ರಾಧಿಕಾರದ ಕಚೇರಿ ಆವರಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಧ್ಯಕ್ಷರಾಗಿ ಚೇತನ್‌ಕುಮಾರ್ ಅವರು ಅಧಿಕಾರ ಸ್ವೀಕರಿಸಿದರು. ಸದಸ್ಯರಾದ ಪರ್ವೇಜ್ ಪಾಷಾ, ವಿ.ಕೆ.ಶ್ರೀದೇವಿ, ಪ್ರವೀಣ್ , ಶ್ರೀನಿವಾಸ ಹಾಜರಿದ್ದರು.

ಈ ವೇಳೆ ಶಾಸಕ ಇಕ್ಬಾಲ್ ಹುಸೇನ್, ಮಾಜಿ ಶಾಸಕ ಸಿಎಂ.ಲಿಂಗಪ್ಪ, ಕೆ.ಶೇಷಾದ್ರಿ ಸೇರಿದಂತೆ ಕಾಂಗ್ರೆಸ್‌ , ಜೆಡಿಎಸ್ ಹಾಗೂ ಬಿಜೆಪಿ ಮುಖಂಡರು ಆಗಮಿಸಿ ನೂತನ ಅಧ್ಯಕ್ಷರಿಗೆ ಶುಭಾಶಯ ಕೋರಿದರು.

ಈ ವೇಳೆ ಶಾಸಕ ಇಕ್ಬಾಲ್ ಹುಸೇನ್ ಮಾತನಾಡಿ, ಕಳೆದ ಹಲವು ವರ್ಷಗಳಿಂದ ರಾಮನಗರ ಪ್ರಾಧಿಕಾರದಲ್ಲಿ ಸಾಕಷ್ಟು ಸಮಸ್ಯೆಗಳಿದ್ದು, ಅವುಗಳ ಪರಿಹಾರಕ್ಕೆ ಒಳ್ಳೆಯ ಕೆಲಸಗಾರ ಬೇಕಿತ್ತು. ನಮ್ಮ ಪಕ್ಷದ ವರಿಷ್ಠರು ಆ ಜವಾಬ್ದಾರಿಯನ್ನು ಚೇತನ್‌ಕುಮಾರ್ ಅವರಿಗೆ ನೀಡಿದ್ದಾರೆ. ಈ ಹಿಂದೆ ನಗರಸಭೆ ಅಧ್ಯಕ್ಷರಾಗಿ ಸೇವೆ ಸಲ್ಲಿದ್ದು, ಸಾಕಷ್ಟು ಅನುಭವ ಹೊಂದಿದ್ದಾರೆ. ಅವರ ನೇತೃತ್ವದಲ್ಲಿ ರಾಮನಗರ ಪ್ರಾಧಿಕಾರದ ಸಮಸ್ಯೆಗಳಿಗೆ ಮುಕ್ತಿ ಸಿಗಲಿದೆ ಎಂದು ಹೇಳಿದರು.

ಪ್ರಾಧಿಕಾರದಲ್ಲಿನ ಸಮಸ್ಯೆ ಬಗೆಹರಿಸುವ ಸಂಬಂಧ ಈಗಾಗಲೇ ಸಾಕಷ್ಟು ಸಭೆಗಳನ್ನು ನಡೆಸಲಾಗಿದೆ. ಕಳೆದ 10-15 ವರ್ಷ ಪ್ರಾಧಿಕಾರದಲ್ಲಿ ಅಧಿಕಾರ ಅನುಭವಿಸಿದವರು ಮೂರು ಬಡಾವಣೆಗಳನ್ನು ನಿರ್ಮಿಸಿದ್ದು ಬಿಟ್ಟರೆ ಬೇರೆ ಕೆಲಸ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

1837 ಜನರು ನಿವೇಶನಕ್ಕಾಗಿ ಹೋರಾಟ ಮಾಡುತ್ತಿದ್ದಾರೆ. ಈ ತನಕ ಇವರ ಆಸೆ ಈಡೇರಿಲ್ಲ. ಬಡಾವಣೆ ನಿರ್ಮಿಸಿ ಹಲವು ವರ್ಷಗಳೆ ಕಳೆಯುತ್ತಿದೆ. ಆದರೂ, ನಿವೇಶನಗಳು ಇಂದಿಗೂ ರೈತರ ಹೆಸರಿನಲ್ಲಿಯೇ ಇದ್ದು, ಪ್ರಾಧಿಕಾರದ ಹೆಸರಿಗೆ ಈ ತನಕ ವರ್ಗಾವಣೆಯಾಗಿಲ್ಲ. ಈ ಸಮಸ್ಯೆಯನ್ನು ತಿಂಗಳೊಳಗೆ ಬಗೆಹರಿಸಲಾಗುವುದು ಎಂದು ಹೇಳಿದರು.

ಪ್ರಾಧಿಕಾರದ ಬಡಾವಣೆಗಳಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರು, ವಿದ್ಯುತ್ ಸಂಪರ್ಕ ಸೇರಿದಂತೆ ಮೂಲಸೌಕರ್ಯ ಕಲ್ಪಿಸಲಾಗುವುದು. ನಿವೇಶನದಾರರ ಸಭೆ ನಡೆಸಿ ಸಮಸ್ಯೆ ಆಲಿಸುವ ಕೆಲಸ ಮಾಡುತ್ತೇವೆ. ದಲ್ಲಾಳಿಗಳ ಮಧ್ಯಸ್ಥಿಕೆ ಇಲ್ಲದೆ ನೇರವಾಗಿಯೇ ಹಕ್ಕು ಪತ್ರ ವಿತರಣೆ ಮಾಡಲಾಗುವುದು ಎಂದು ಇಕ್ಬಾಲ್ ಹುಸೇನ್ ತಿಳಿಸಿದರು.

ಕೋಟ್ ............

ನನ್ನನ್ನು ಗುರುತಿಸಿ ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರನ್ನಾಗಿ ನೇಮಕ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್, ಶಾಸಕರಾದ ಇಕ್ಬಾಲ್ ಹುಸೇನ್ , ಎಸ್ .ರವಿ, ಮಾಜಿ ಶಾಸಕರಾದ ಸಿ.ಎಂ.ಲಿಂಗಪ್ಪ, ಕೆ.ರಾಜು ಸೇರಿದಂತೆ ಪಕ್ಷದ ಹಿರಿಯ ಕಿರಿಯ ಮುಖಂಡರಿಗೆ ಅಭಿನಂದನೆ ಸಲ್ಲಿಸುತ್ತೇನೆ.

-ಎ.ಬಿ.ಚೇತನ್ ಕುಮಾರ್ , ಅಧ್ಯಕ್ಷರು, ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರ

13ಕೆಆರ್ ಎಂಎನ್ 2.ಜೆಪಿಜಿ

ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷ ಚೇತನ್‌ಕುಮಾರ್ ಅ‍ವರನ್ನು ಶಾಸಕ ಇಕ್ಬಾಲ್ ಹುಸೇನ್ ಅಭಿನಂದಿಸಿದರು.