ಮತಕ್ಷೇತ್ರದ 7 ಜಿಲ್ಲಾ ಪಂಚಾಯತಿ ಕ್ಷೇತ್ರಗಳಲ್ಲಿ ಪಕ್ಷದ ವರಿಷ್ಠರು ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ನೀಡಿದರೂ ಸ್ಪರ್ಧಿಸಲು ಸಿದ್ಧನಿದ್ದೇನೆ ಎಂದು ತಾಲೂಕಿನ ಮುಳಸಾವಳಗಿ ಜಿಲ್ಲಾ ಪಂಚಾಯತಿ ಕ್ಷೇತ್ರದ ಎನ್‌ಡಿಎ ಮೈತ್ರಿಕೂಟದ ಪ್ರಬಲ ಆಕಾಂಕ್ಷಿ, ಜಿಲ್ಲಾ ಘಟಕದ ಉಪಾಧ್ಯಕ್ಷ ರಿಯಾಜ್‌ ಯಲಗಾರ ಹೇಳಿದರು.

ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ

ಮತಕ್ಷೇತ್ರದ 7 ಜಿಲ್ಲಾ ಪಂಚಾಯತಿ ಕ್ಷೇತ್ರಗಳಲ್ಲಿ ಪಕ್ಷದ ವರಿಷ್ಠರು ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ನೀಡಿದರೂ ಸ್ಪರ್ಧಿಸಲು ಸಿದ್ಧನಿದ್ದೇನೆ ಎಂದು ತಾಲೂಕಿನ ಮುಳಸಾವಳಗಿ ಜಿಲ್ಲಾ ಪಂಚಾಯತಿ ಕ್ಷೇತ್ರದ ಎನ್‌ಡಿಎ ಮೈತ್ರಿಕೂಟದ ಪ್ರಬಲ ಆಕಾಂಕ್ಷಿ, ಜಿಲ್ಲಾ ಘಟಕದ ಉಪಾಧ್ಯಕ್ಷ ರಿಯಾಜ್‌ ಯಲಗಾರ ಹೇಳಿದರು.

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ತಾಲೂಕಿನಲ್ಲಿ ಜೆಡಿಎಸ್‌ ಪಕ್ಷ ಬೆಳೆಸಲು ಜೆಡಿಎಸ್ ಪಕ್ಷದ ತಾಲೂಕು ಘಟಕದ ಅಧ್ಯಕ್ಷರಾಗಿ ಪಕ್ಷ ಸಂಘನೆ ಮಾಡಿದ್ದೇನೆ. ದೇವರಹಿಪ್ಪರಗಿ ಪಟ್ಟಣ ಪಂಚಾಯತಿಯ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ಜಿಲ್ಲಾ ಪಂಚಾಯತಿ ಕ್ಷೇತ್ರದ ವ್ಯಾಪ್ತಿಯ ಗ್ರಾಮಗಳ, ತಾಂಡಾ, ಅಲ್ಪಸಂಖ್ಯಾತರ ಹಾಗೂ ದಲಿತರ ಕಾಲೋನಿಗಳಲ್ಲಿ ಸಿಸಿ ರಸ್ತೆ ನಿರ್ಮಾಣ, ಆರೋಗ್ಯ ಸೇವೆಗಳ ಸುಧಾರಣೆ, ಶಿಕ್ಷಣಕ್ಕೆ ಆದ್ಯತೆ ಹಾಗೂ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡುವುದೇ ನನ್ನ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.ಸರ್ವಜನರೊಂದಿಗೆ ಉತ್ತಮ ಒಡನಾಟ ಹೊಂದಿದ್ದು, ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿಯವರ ಮಾರ್ಗದರ್ಶನದಲ್ಲಿ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು, ಅವರ ಸಹಕಾರದೊಂದಿಗೆ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಆಶೀರ್ವಾದ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಯವರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಮತ್ತು ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮುಖಂಡರು, ಕಾರ್ಯಕರ್ತರು ಹಾಗೂ ಮತದಾರರ ಸಹಕಾರದೊಂದಿಗೆ ಚುನಾವಣಾ ಕಣಕ್ಕಿಳಿಯುವ ಆಶಯವಿದೆ.

-ರಿಯಾಜ್‌ ಯಲಗಾರ, ಮುಳಸಾವಳಗಿ ಜಿಲ್ಲಾ ಪಂಚಾಯತಿ ಕ್ಷೇತ್ರದ ಎನ್‌ಡಿಎ ಮೈತ್ರಿಕೂಟದ ಪ್ರಬಲ ಆಕಾಂಕ್ಷಿ.