ಮೂಲ್ಕಿ: ಮಕ್ಕಳ ಕಲಾ ಸ್ಪರ್ಧೆ ಸಂಪನ್ನ

| Published : Nov 23 2025, 03:15 AM IST

ಸಾರಾಂಶ

ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲ ಭವನ ಸಮಿತಿ, ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ಗ್ರಾಮಾಂತರ, ಶಿಕ್ಷಣ ಇಲಾಖೆ ಹಾಗೂ ತಾಲೂಕು ಬಾಲ ಭವನ ಸಮಿತಿ ವತಿಯಿಂದ ಮೂಲ್ಕಿಯ ಸರ್ಕಾರಿ ಪದವಿಪೂರ್ವ ಕಾಲೇಜು, ಪ್ರೌಢ ಶಾಲಾ ವಿಭಾಗ ಕಾರ್ನಾಡು ಮೂಲ್ಕಿ ಹಾಗೂ ಮೂಲ್ಕಿಯ ಲಯನ್ಸ್ ಕ್ಲಬ್‌, ಲಿಯೋ ಕ್ಲಬ್ ಸಹಯೋಗದಲ್ಲಿ ಮೂಲ್ಕಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಕ್ಕಳ ಕಲಾ ಸ್ಪರ್ಧೆ ನಡೆಯಿತು.

ಕನ್ನಡಪ್ರಭ ವಾರ್ತೆ ಮೂಲ್ಕಿ

ಶಿಶು ಅಭಿವೃದ್ಧಿ ಯೋಜನೆಯ ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಭಾರತಿ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಮೂಲ್ಕಿಯ ಅಧ್ಯಕ್ಷ ಹರ್ಷರಾಜ್ ಶೆಟ್ಟಿ ವಹಿಸಿದ್ದರು.

ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಪ್ರಮಾಣ ಪತ್ರದೊಂದಿಗೆ ಬಹುಮಾನ ವಿತರಣೆ ಮಾಡಲಾಯಿತು. ಪ್ರೌಢ ಶಾಲೆಯ ಸಹ ಶಿಕ್ಷಕಿ ಸುಮನಾ, ದೈಹಿಕ ಶಿಕ್ಷಣ ಶಿಕ್ಷಕಿ ಸೀತಾ ಚಂದ್ರಿಕಾ, ಮಾತೃವಂದನಾ ಯೋಜನೆಯ ಜಿಲ್ಲಾ ಸಂಯೋಜಕಿ ಕಾವ್ಯ, ಶಾಲಾ ನಾಯಕ ಮಂಜುನಾಥ್, ಶಾಲಾ ಮಕ್ಕಳು, ಕಾರ್ನಾಡು ಅಂಗನವಾಡಿ ಕಾರ್ಯಕರ್ತೆ ಮಂಜುಳಾ, ಬಾಲಭವನ ಸಹ ಸಂಯೋಜಕಿ ರೇಖಾ ಮತ್ತಿತರರು ಉಪಸ್ಥಿತರಿದ್ದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಭಾರತಿ ಸ್ವಾಗತಿಸಿದರು. ಬಾಲ ಭವನ ಸಂಯೋಜಕಿ ಧನ್ಯ ವಂದಿಸಿದರು.