ಸಾರಾಂಶ
ಎಂ ಆರ್ ಪಿ ಎಲ್ ವತಿಯಿಂದ ಎಂಡೋಸಲ್ಫಾನ್, ಎಚ್.ಐ.ವಿ, ರಕ್ತಬಲಹೀನತೆ, ಕ್ಷಯದಿಂದ ಬಳಲುವವರಿಗೆ ಹಾಗೂ ವೃದ್ದಾಶ್ರಮ ಮತ್ತಿತರ ಕಡೆಗಳಿಗೆ ಸುಮಾರು 20 ಲಕ್ಷ ರು. ಬೆಲೆಬಾಳುವ ಪೌಷ್ಟಿಕಾಂಶಯುಕ್ತ ಸಿರಿಧಾನ್ಯಗಳನ್ನು ವಿತರಿಸಲಾಯಿತು.
ಕನ್ನಡಪ್ರಭವಾರ್ತೆ ಮೂಲ್ಕಿ
ಎಂ.ಆರ್.ಪಿ.ಎಲ್ ಸಂಸ್ಥೆ ತಮ್ಮ ಸಿ.ಎಸ್.ಆರ್ ಅನುದಾನದ ಮೂಲಕ ನಿರಂತರ ಸಾಮಾಜಿಕ ಚಟುವಟಿಕೆಗಳನ್ನು ನಡೆಸುತ್ತಾ ಬಂದಿದ್ದು ಮಾದರಿ ಸಂಸ್ಥೆಯಾಗಿ ಮೂಡಿ ಬಂದಿದೆ ಎಂದು ಎಂ.ಆರ್.ಪಿ.ಎಲ್ ಸಿ.ಎಸ್.ಆರ್. ವಿಭಾಗದ ಜನರಲ್ ಮ್ಯಾನೇಜರ್ ಪ್ರಶಾಂತ್ ಬಾಳಿಗ ಹೇಳಿದರು.ಎಂ ಆರ್ ಪಿ ಎಲ್ ವತಿಯಿಂದ ಎಂಡೋಸಲ್ಫಾನ್, ಎಚ್.ಐ.ವಿ, ರಕ್ತಬಲಹೀನತೆ, ಕ್ಷಯದಿಂದ ಬಳಲುವವರಿಗೆ ಹಾಗೂ ವೃದ್ದಾಶ್ರಮ ಮತ್ತಿತರ ಕಡೆಗಳಿಗೆ ಸುಮಾರು 20 ಲಕ್ಷ ರು. ಬೆಲೆಬಾಳುವ ಪೌಷ್ಟಿಕಾಂಶಯುಕ್ತ ಸಿರಿಧಾನ್ಯಗಳನ್ನು ವಿತರಿಸಿ ಮಾತನಾಡಿ ಎಂ.ಆರ್.ಪಿ.ಎಲ್ ಸಂಸ್ಥೆ ಈ ಹಿಂದೆಯೂ, ಎಂಡೋಸಲ್ಫಾನ್ ಪೀಡಿತರಾಗಿದ್ದು ಮಲಗಿದಲ್ಲಿಯೇ ಇದ್ದ ಕುಟುಂಬಗಳಿಗೆ ದಿನಬಳಕೆಯ ವಸ್ತುಗಳನ್ನು ನೀಡಿದ್ದು, ವೃದ್ಧಾಶ್ರಮ ಮತ್ತು ಆಸ್ಪತ್ರೆಗಳಿಗೆ ಅಂಬುಲೆನ್ಸ್ ವಾಹನ ನೀಡಿ ಸಹಕಾರ ನೀಡಿದೆ. ಇದೀಗ ಅನಾರೋಗ್ಯದಿಂದ ಬಳಲುವ 1500 ಫಲಾನುಭವಿಗಳಿಗೆ ಸಿರಿಧಾನ್ಯ ನೀಡಿ ಸಹಕಾರ ನೀಡಲಾಗಿದೆ. ಫಲಾನುಭವಿಗಳು ಇದರಿಂದ ತಮ್ಮ ಆರೋಗ್ಯವನ್ನು ವೃದ್ಧಿಸಬಹುದಾಗಿದೆ. ಒಟ್ಟು 20 ಲಕ್ಷ ರು. ಬೆಲೆಬಾಳುವ 1800 ಕಿಲೋ ಸಿರಿಧಾನ್ಯ ವಿತರಿಸಲಾಗಿದ್ದು, ಹೆಚ್ಚಿನ ಕಡೆಗಳಿಗೆ ತೆರಳಿ ನೇರವಾಗಿ ಫಲಾನುಭವಿಗಳಿಗೆ ನೀಡಲಾಗಿದೆ ಎಂದರು.
ಈ ಸಂದರ್ಭ ಎಂ.ಆರ್.ಪಿ.ಎಲ್ ಅಧಿಕಾರಿ ಸ್ಟೀವನ್ ಪಿಂಟೋ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.