ಸಾರಾಂಶ
ಕನ್ನಡಪ್ರಭ ವಾರ್ತೆ ಮೂಲ್ಕಿ
ಮೂಲ್ಕಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕುಸುಮಾಧರ ಬಿ. ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.2024-25 ನೇ ಸಾಲಿನಲ್ಲಿ ನರೇಗಾ ಯೋಜನೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಹಾಗೂ ತೆರಿಗೆ ಸಂಗ್ರಹದಲ್ಲಿ ಶೇಕಡ 100 ಹಾಗೂ 90 ರಷ್ಟು ಸಾಧನೆ ಮಾಡಿರುವ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಅಭಿನಂದನೆ ಸಲ್ಲಿಸಲಾಯಿತು. 2024-25 ನೇ ಆರ್ಥಿಕ ವರ್ಷದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ವಾರ್ಷಿಕ ಶೇ.100 ರಷ್ಟು ಗುರಿ ಸಾಧಿಸಿರುವ ಕೆಮ್ರಾಲ್ ಗ್ರಾಮ ಪಂಚಾಯಿತಿ ಪ್ರಥಮ , ಶೇ.85.99 ರಷ್ಟು ಅತಿಕಾರಿಬೆಟ್ಟು ಗ್ರಾಮ ಪಂಚಾಯಿತಿ ದ್ವಿತೀಯ, 74. 35 ರಷ್ಟು ಐಕಳ ಗ್ರಾಮ ಪಂಚಾಯಿತಿ ತೃತೀಯ ಸ್ಥಾನ ಪಡೆದಿರುವ ನರೇಗಾ ಸಿಬ್ಬಂದಿಗೆ ಪ್ರಶಂಸಾ ಪತ್ರ ಹಾಗೂ ಸಿಬ್ಬಂದಿ ಭಾವಚಿತ್ರ ಹಾಗೂ ನರೇಗಾ ಸಂಕೇತವುಳ್ಳ ಮಗ್ ನೀಡಿ ಗೌರವಿಸಲಾಯಿತು.
2024-25 ಆರ್ಥಿಕ ವರ್ಷದಲ್ಲಿ ಚಾಲ್ತಿ ವರ್ಷದ ಬೇಡಿಕೆಗೆ ಶೇ.100 ರಷ್ಟು ಪೂರೈಸಿದ ಕೆಮ್ರಾಲ್, ಐಕಳ, ಅತಿಕಾರಿಬೆಟ್ಟು, ಪಡುಪಣಂಬೂರು, ಬಳ್ಕುಂಜೆ ಹಾಗೂ ಶೇಕಡಾ 90 ಕ್ಕಿಂತ ಹೆಚ್ಚು ಸಾಧನೆ ಮಾಡಿದ ಕಿಲ್ಪಾಡಿ, ಹಳೆಯಂಗಡಿ ಗ್ರಾಮ ಪಂಚಾಯಿತಿ, ತೆರಿಗೆಯನ್ನು ಸಂಗ್ರಹಿಸಿರುವ ಬಿಲ್ ಕಲೆಕ್ಟರ್ ಹಾಗೂ ಕ್ಲರ್ಕ್ ಕಮ್ ಡಾಟಾ ಎಂಟ್ರಿ ಅವರಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಲಾಯಿತು.ಚಾಲ್ತಿ ವರ್ಷದ ತೆರಿಗೆ ಸಂಗ್ರಹ ಹಾಗೂ ನರೇಗಾ ಯೋಜನೆಯಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಿರುವ ಕೆಮ್ರಾಲ್ ಗ್ರಾಮ ಪಂಚಾಯಿತಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ನರೇಗಾ ಸಿಬ್ಬಂದಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಸಹಾಯಕ ನಿರ್ದೇಶಕ ಅರುಣ್ ಪ್ರದೀಪ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.ಎಲ್ಲಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಪಂಚಾಯಿತಿ ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು, ಗ್ರಾಮ ಪಂಚಾಯಿತಿ ಸಿಬ್ಬಂದಿ, ತಾಲೂಕು ಪಂಚಾಯಿತಿ ಅಧಿಕಾರಿ ವರ್ಗ ಹಾಗೂ ಸಿಬ್ಬಂದಿ ಇದ್ದರು.