ಸಾರಾಂಶ
ಕೆಮ್ರಾಲ್ ಪಂಜದ ಗುತ್ತು ಶಾಂತ ರಾಮ ಶೆಟ್ಟಿ ಸರ್ಕಾರಿ ಪ್ರೌಢಶಾಲೆಯಲ್ಲಿ ಮೂಲ್ಕಿಯ ವಿಜಯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ 7 ದಿನದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ನಡೆಯಿತು.
ಕನ್ನಡಪ್ರಭ ವಾರ್ತೆ ಮೂಲ್ಕಿ ಸೇವೆಯ ಮೂಲಕ ಸಮಾಜದ ಅರಿವು ಮೂಡಿಸುವುದು ರಾಷ್ಟ್ರೀಯ ಸೇವಾ ಯೋಜನೆಯ ಮುಖ್ಯ ಉದ್ದೇಶವಾಗಿದ್ದು ಇದರಿಂದ ಸ್ವಯಂಸೇವಕರ ವ್ಯಕ್ತಿತ್ವ ವಿಕಸನವಾಗುತ್ತದೆ. ಸಮಾಜಸೇವೆಯ ಪ್ರಜ್ಞೆ ಜಾಗೃತಗೊಳ್ಳುತ್ತದೆ. ನಮ್ಮಲ್ಲಿರುವ ಶ್ರಮ, ವಿದ್ಯೆ, ಬುದ್ಧಿ, ಜ್ಞಾನ, ಕೌಶಲ್ಯ, ಆರ್ಥಿಕ ಸೌಲಭ್ಯ ಇತ್ಯಾದಿಗಳನ್ನು ಸಮಾಜದ, ದೇಶದ ಒಳಿತಿಗಾಗಿ ಫಲಾಪೇಕ್ಷೆ ಇಲ್ಲದೆ ಅರ್ಪಣಾ ಮನೋಭಾವದಿಂದ ನೀಡುವ ಸಹಾಯವೇ ಸೇವೆಯೆಂದು ಮಣಿಪಾಲದ ಉಡುಪಿ ಸಮೂಹ ಶಿಕ್ಷಣ ಸಂಸ್ಥೆಯ ನ ಉಪನ್ಯಾಸಕಿ ಅರ್ಪಿತಾ ಶೆಟ್ಟಿ ಕಟಪಾಡಿ ಹೇಳಿದರು.
ಕೆಮ್ರಾಲ್ ಪಂಜದ ಗುತ್ತು ಶಾಂತ ರಾಮ ಶೆಟ್ಟಿ ಸರ್ಕಾರಿ ಪ್ರೌಢಶಾಲೆಯಲ್ಲಿ ಜರುಗಿದ ಮೂಲ್ಕಿಯ ವಿಜಯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ 7 ದಿನದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಸಮಾರೋಪ ಭಾಷಣ ಮಾಡಿ ಮಾತನಾಡಿದರು.ವಿಜಯ ಕಾಲೇಜಿನ ಪ್ರಾಂಶುಪಾಲ ಪ್ರೊ ವೆಂಕಟೇಶ್ ಭಟ್ ಅಧ್ಯಕ್ಷತೆ ವಹಿಸಿದ್ದು ಉದ್ಯಮಿ ಜನಕರಾಜ್ ರಾವ್ ಅತಿಥಿಗಳಾಗಿ ಭಾಗವಹಿಸಿದ್ದರು. ಈ ಸಂದರ್ಭ ಉತ್ತಮ ಸ್ವಯಂ ಸೇವಕ ಹಾಗೂ ಸ್ವಯಂ ಸೇವಕಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ದ. ಕ ಜಿ.ಪಂ. ಮಾಜಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಪಕ್ಷಿಕೆರೆ ವಿಠೋಬಾ ಭಜನಾ ಮಂಡಳಿ ಅಧ್ಯಕ್ಷ ಕರುಣಾಕರ ಶೆಟ್ಟಿ, ಘಟಕದ ಕಾರ್ಯದರ್ಶಿ ಆದಿತ್ಯ ಹಾಗೂ ಶ್ರಾವ್ಯ ಉಪಸ್ಥಿತರಿದ್ದರು.ಸಹ ಯೋಜನಾಧಿಕಾರಿ ಶರ್ಮಿಳಾ ರಾಜೇಶ್ ಸ್ವಾಗತಿಸಿದರು. ಸ್ವಯಂ ಸೇವಕಿ ಲಾವಣ್ಯ ನಿರೂಪಿಸಿದರು. ಯೋಜನಾಧಿಕಾರಿ ಅರುಣಾ ವಂದಿಸಿದರು.