ಸಾರಾಂಶ
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮುಲ್ಕಿ ವಿಜಯ ಪದವಿ ಪೂರ್ವಕಾಲೆಜು ಶೇ.95.78 ಫಲಿತಾಂಶ ಪಡೆದಿದೆ. ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು ೪೦ ವಿದ್ಯಾರ್ಥಿಗಳಲ್ಲಿ ೩೭ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ೮ ಮಂದಿ ವಿಶಿಷ್ಟ ಶ್ರೇಣಿಯಲ್ಲಿ ಮತ್ತು೨೬ ಮಂದಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದು ಶೇ.೯೨.೫ ಫಲಿತಾಂಶ ಲಭಿಸಿದೆ.
ಕನ್ನಡಪ್ರಭ ವಾರ್ತೆ ಮೂಲ್ಕಿ
ಕಳೆದ ಮಾರ್ಚ್‌ನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮುಲ್ಕಿ ವಿಜಯ ಪದವಿ ಪೂರ್ವಕಾಲೆಜು ಶೇ.95.78 ಫಲಿತಾಂಶ ಪಡೆದಿದೆ.ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು ೪೦ ವಿದ್ಯಾರ್ಥಿಗಳಲ್ಲಿ ೩೭ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ೮ ಮಂದಿ ವಿಶಿಷ್ಟ ಶ್ರೇಣಿಯಲ್ಲಿ ಮತ್ತು೨೬ ಮಂದಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದು ಶೇ.೯೨.೫ ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು ೫೫ ವಿದ್ಯಾರ್ಥಿಗಳಲ್ಲಿ ೫೪ ವಿದ್ಯಾರ್ಥಿಗಳು ಪಾಸಾಗಿದ್ದು, ೧೪ ಮಂದಿ ವಿಶಿಷ್ಟ ಶ್ರೇಣಿಯಲ್ಲಿ, ೩೫ ಮಂದಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿ ಶೇ.೯೮.೧೮ ಫಲಿತಾಂಶ ಲಭಿಸಿದೆ. ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳಿಂದ ಒಟ್ಟು೯೫ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ೯೧ ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುತ್ತಾರೆ.
ಮೂಲ್ಕಿಯ ಗ್ರಾಮಾಂತರ ಪ್ರದೇಶದ ಕಾಲೇಜಾದ ವಿಜಯ ಕಾಲೇಜು ಎಸ್‌ಎಸ್‌ಎಲ್‌ಸಿ ಯಲ್ಲಿ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳಿಗೂ ಪಿಯುಸಿಯ ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳಿಗೆ ಪ್ರವೇಶ ನೀಡಿ ವರ್ಷವಿಡೀ ಉತ್ತಮ ತರಬೇತಿಯನ್ನು ಒದಗಿಸಿದೆ. ಕಾಲೇಜಿನ ಅಧ್ಯಾಪಕ ವೃಂದವನ್ನು ಹಾಗೂ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳನ್ನು ವಿಜಯ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ವೆಂಕಟೇಶ್ ಭಟ್, ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲೆ ಪಮೀದಾ ಬೇಗಂ, ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಸುಹಾಸ್ ಹೆಗ್ಡೆ ಅಭಿನಂದಿಸಿರುತ್ತಾರೆ.