ಮೂಲ್ಕಿ ನಗರ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಮಹತ್ವ ನೀಡುತ್ತಿದ್ದು ಪ್ರತಿಯೊಬ್ಬ ನಾಗರಿಕರು ನಮ್ಮ ಕಸ ನಮ್ಮ ಜವಾಬ್ದಾರಿ ಎಂದು ತಿಳಿದುಕೊಂಡು ಮನೆಯ ಬಾಗಿಲಿಗೆ ಬರುವ ತ್ಯಾಜ್ಯ ಸಂಗ್ರಹಣ ವಾಹನಕ್ಕೆ ಕಸ ನೀಡಬೇಕು. ಎಲ್ಲೆಂದರಲ್ಲಿ ತ್ಯಾಜ್ಯ ಬಿಸಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮೂಲ್ಕಿ ನಗರ ಪಂಚಾಯತ್ ಮುಖ್ಯಾಧಿಕಾರಿ ಮಧುಕರ್ ಹೇಳಿದರು.
ಮೂಲ್ಕಿ: ಮೂಲ್ಕಿ ನಗರ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಮಹತ್ವ ನೀಡುತ್ತಿದ್ದು ಪ್ರತಿಯೊಬ್ಬ ನಾಗರಿಕರು ನಮ್ಮ ಕಸ ನಮ್ಮ ಜವಾಬ್ದಾರಿ ಎಂದು ತಿಳಿದುಕೊಂಡು ಮನೆಯ ಬಾಗಿಲಿಗೆ ಬರುವ ತ್ಯಾಜ್ಯ ಸಂಗ್ರಹಣ ವಾಹನಕ್ಕೆ ಕಸ ನೀಡಬೇಕು. ಎಲ್ಲೆಂದರಲ್ಲಿ ತ್ಯಾಜ್ಯ ಬಿಸಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮೂಲ್ಕಿ ನಗರ ಪಂಚಾಯತ್ ಮುಖ್ಯಾಧಿಕಾರಿ ಮಧುಕರ್ ಹೇಳಿದರು.
ಮೂಲ್ಕಿ ನ.ಪಂ. ವ್ಯಾಪ್ತಿಯ ಕಾರ್ನಾಡು ದರ್ಗಾ ರಸ್ತೆಯ ಕೃಷಿ ಇಲಾಖೆಯ ಬಳಿ ಸಾರ್ವಜನಿಕರು ತ್ಯಾಜ್ಯವನ್ನು ಬಿಸಾಡಿ ದುರ್ವಾಸನೆ ಬೀರುತ್ತಿದ್ದ ಪ್ರದೇಶವನ್ನು ಮೂಲ್ಕಿ ನಗರ ಪಂಚಾಯತ್ ವತಿಯಿಂದ ಸ್ವಚ್ಛ ಹಾಗೂ ಸುಂದರಿಕರಣಗೊಳಿಸಿ, ಮಾಡಿದ ಬ್ಲಾಕ್ ಸ್ಪಾಟ್ ಬ್ಯೂಟಿಫಿಕೇಷನ್ ಅನ್ನು ಉದ್ಘಾಟಿಸಿ ಮಾತನಾಡಿದರು.ಈ ಸಂದರ್ಭ ಮೂಲ್ಕಿ ನಗರ ಪಂಚಾಯತ್ ನ ಮಾಜಿ ಸದಸ್ಯರಾದ ಪುತ್ತುಬಾವ, ಹರ್ಷರಾಜ್ ಶೆಟ್ಟಿ ಬಶೀರ್ ಕುಳಾಯಿ ಸಾಹಸ್ ಎನ್. ಜಿ. ಒ ಸಂಸ್ಥೆಯ ವಿಶಾಲ, ಸಿ. ಡಿ.ಡಿ ಸಂಸ್ಥೆಯ ಮಮತಾ, ನಗರ ಪಂಚಾಯತ್ ನ ಕಮ್ಯೂನಿಟಿ ಮೊಬಿಲೈಸರ್ ಗಳಾದ ಸುಮಂಗಳ, ಗೀತಾ ಮತ್ತು ನಗರ ಪಂಚಾಯತ್ ನ ಸಿಬ್ಬಂದಿ ಉಪಸ್ಥಿತರಿದ್ದರು.