ಗ್ರಾಮ ಮಟ್ಟದಲ್ಲಿ ಪಿಡಿಒಗಳು, ಸಿಬ್ಬಂದಿ ಹಾಗೂ ಜನಪ್ರತಿನಿಧಿಗಳು ಸಮನ್ವಯದಿಂದ ಕೆಲಸ ಮಾಡುತ್ತಿರುವುದರಿಂದ ಕರ ವಸೂಲಿ ಪ್ರಮಾಣದಲ್ಲಿ ಉತ್ತಮ ಪ್ರಗತಿ ಕಂಡುಬಂದಿದೆ.
ಡಂಬಳ: 2025- 26ನೇ ಸಾಲಿನ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಕರ ವಸೂಲಿ ಕಾರ್ಯದಲ್ಲಿ ಮುಂಡರಗಿ ತಾಲೂಕಿನ ಗ್ರಾಮ ಪಂಚಾಯಿತಿಗಳು ಉತ್ತಮ ಸಾಧನೆ ಮಾಡಿದೆ.
ಡಂಬಳ, ಪೇಠಾಆಲೂರ, ಸಿಂಗಟಾಲೂರು, ಬಿಡನಾಳ ಶೇ. 100ರಷ್ಟು ಪ್ರಗತಿ ಸಾಧಿಸಿವೆ. ಉಳಿದ ಗ್ರಾಮ ಪಂಚಾಯಿತಿಗಳು ಶೇ. 90ರಿಂದ 95ರಷ್ಟು ಪ್ರಗತಿ ಮಾಡಿವೆ. ಎಲ್ಲ ಗ್ರಾಮ ಪಂಚಾಯಿತಿಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ ಮನೆ ತೆರಿಗೆ, ನೀರು ತೆರಿಗೆ ಸೇರಿದಂತೆ ವಿವಿಧ ಕರಗಳನ್ನು ಸಮರ್ಪಕವಾಗಿ ಸಂಗ್ರಹಿಸುವಲ್ಲಿ ಶ್ರಮಿಸುತ್ತಿವೆ.ಗ್ರಾಮ ಮಟ್ಟದಲ್ಲಿ ಪಿಡಿಒಗಳು, ಸಿಬ್ಬಂದಿ ಹಾಗೂ ಜನಪ್ರತಿನಿಧಿಗಳು ಸಮನ್ವಯದಿಂದ ಕೆಲಸ ಮಾಡುತ್ತಿರುವುದರಿಂದ ಕರ ವಸೂಲಿ ಪ್ರಮಾಣದಲ್ಲಿ ಉತ್ತಮ ಪ್ರಗತಿ ಕಂಡುಬಂದಿದೆ. ಇದರ ಫಲವಾಗಿ ಮುಂಡರಗಿ ತಾಲೂಕು ಜಿಲ್ಲೆಯಲ್ಲಿ ಮೂರನೇ ಸ್ಥಾನವನ್ನು ಪಡೆದುಕೊಳ್ಳಲು ಸಾಧ್ಯವಾಗಿದೆ.
ಜಾಗೃತಿ ಕಾರ್ಯಕ್ರಮಗಳಿಗೆ ಒತ್ತು: ಗ್ರಾಮಸ್ಥರಲ್ಲಿ ತೆರಿಗೆ ಪಾವತಿ ಬಗ್ಗೆ ಜಾಗೃತಿ ಮೂಡಿಸಲು ಗ್ರಾಮ ಪಂಚಾಯಿತಿಗಳಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ತೆರಿಗೆ ಪಾವತಿಸುವುದು ಗ್ರಾಮಗಳ ಅಭಿವೃದ್ಧಿಗೆ ಅವಶ್ಯಕವಾಗಿದ್ದು, ಗ್ರಾಮಸ್ಥರು ಸಹ ಸ್ವಯಂಪ್ರೇರಿತವಾಗಿ ಕರ ಪಾವತಿಸಲು ಮುಂದಾಗುತ್ತಿದ್ದಾರೆ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಿಳಿಸಿದ್ದಾರೆ.ಅಭಿವೃದ್ಧಿಗೆ ಕರ ವಸೂಲಿ ಪ್ರಮುಖ: ಗ್ರಾಮ ಪಂಚಾಯಿತಿಗಳಲ್ಲಿ ಸಂಗ್ರಹವಾಗುವ ತೆರಿಗೆ ಹಣವನ್ನು ಗ್ರಾಮಗಳ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಬಳಸಲಾಗುತ್ತದೆ. ರಸ್ತೆ, ಕುಡಿಯುವ ನೀರು, ಸ್ವಚ್ಛತೆ, ಬೀದಿದೀಪ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಲು ಕರ ವಸೂಲಿ ಮಹತ್ವದ ಪಾತ್ರ ವಹಿಸುತ್ತದೆ. ಆದ್ದರಿಂದ ಕರ ವಸೂಲಿ ಕಾರ್ಯವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಡೆಸಲು ತಾಲೂಕು ಅಧಿಕಾರಿ ಇಒ ವಿಶ್ವನಾಥ ಹೊಸಮನಿ ಶ್ರಮಿಸುತ್ತಿದ್ದಾರೆ.
ಪ್ರಥಮ ಸ್ಥಾನ ಗುರಿ: ಮುಂದಿನ ದಿನಗಳಲ್ಲಿ ಮುಂಡರಗಿ ತಾಲೂಕಿನ ಗ್ರಾಮ ಪಂಚಾಯಿತಿಗಳು ಇನ್ನಷ್ಟು ಶ್ರಮಿಸಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಗುರಿಯನ್ನು ಹೊಂದಿವೆ. ಪಿಡಿಒಗಳು, ಸಿಬ್ಬಂದಿ ಹಾಗೂ ಜನಪ್ರತಿನಿಧಿಗಳ ಸಹಕಾರದೊಂದಿಗೆ ಕರ ವಸೂಲಿ ಪ್ರಮಾಣವನ್ನು ಹೆಚ್ಚಿಸಲು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಾಲೂಕು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಶ್ವನಾಥ ಹೊಸಮನಿ ವಿಶ್ವಾಸ ವ್ಯಕ್ತಪಡಿಸಿದರು.ಮೂಲ ಸೌಕರ್ಯ: ಗ್ರಾಮ ಪಂಚಾಯಿತಿಗಳಲ್ಲಿ ಸಂಗ್ರಹವಾಗುವ ತೆರಿಗೆ ಹಣವನ್ನು ಗ್ರಾಮಗಳ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಬಳಸಲಾಗುತ್ತದೆ. ರಸ್ತೆ, ಕುಡಿಯುವ ನೀರು, ಸ್ವಚ್ಛತೆ, ಬೀದಿದೀಪ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಲು ಕರವನ್ನು ಭರಿಸಲು ಗ್ರಾಮಸ್ಥರು ಮುಂದಾಗಬೇಕು ಎಂದು ತಾಪಂ ಇಒ ವಿಶ್ವನಾಥ ಹೊಸಮನಿ ತಿಳಿಸಿದರು.