ಪತ್ರಕರ್ತರಿಗೆ ಅನುಕೂಲವಾಗುವ ರೀತಿಯಲ್ಲಿ ಎಪಿಎಲ್ ಮತ್ತು ಬಿಪಿಎಲ್ ರೇಷನ್‌ ಕಾರ್ಡ್‌ ನೀಡಲು ನಿರ್ಧರಿಸಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.

 ಬೆಂಗಳೂರು : ಪತ್ರಕರ್ತರಿಗೆ ಅನುಕೂಲವಾಗುವ ರೀತಿಯಲ್ಲಿ ಎಪಿಎಲ್ ಮತ್ತು ಬಿಪಿಎಲ್ ರೇಷನ್‌ ಕಾರ್ಡ್‌ ನೀಡಲು ನಿರ್ಧರಿಸಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.

ಪ್ರೆಸ್ ಕ್ಲಬ್ ಆಫ್ ಬೆಂಗಳೂರು ವತಿಯಿಂದ ನಡೆದ ಸ್ವರದಿ ಮ್ಯೂಸಿಕಲ್ ರಾಕ್ಸ್ ಸಂಗೀತ ರಸ ಸಂಜೆ ಉದ್ಘಾಟಿಸಿ ಮಾತನಾಡಿದರು. ಪತ್ರಕರ್ತರ ಆರ್ಥಿಕ ಸ್ಥಿತಿಗೆ ಅನುಗುಣವಾಗಿ ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್‌ಗಳನ್ನು ನೀಡಲಾಗುವುದು. ಪ್ರೆಸ್ ಕ್ಲಬ್‌ನಲ್ಲಿಯೇ ಕ್ಯಾಂಪ್ ಮಾಡುವ ಮೂಲಕ ಅನುಕೂಲ‌ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಪತ್ರಕರ್ತರು ಪ್ರತಿ ನಿತ್ಯ ಸುದ್ದಿ ವಿಚಾರದಲ್ಲಿ ತೊಡಗಿರುವುದರಿಂದ ಕುಟುಂಬಸ್ಥರಿಗೆ ಸಮಯ ನೀಡುವುದು ತುಂಬಾ ಕಡಿಮೆ. ರಸ ಸಂಜೆ ಕಾರ್ಯಕ್ರಮದ ಮೂಲಕ ತಮ್ಮ ಒತ್ತಡ ನಿವಾರಣೆ ಮಾಡಿಕೊಳ್ಳಬಹುದು. ರಸ ಸಂಜೆ ಕಾರ್ಯಕ್ರಮ ಪ್ರತಿ ಮೂರು ತಿಂಗಳಿಗೊಮ್ಮೆ ನಡೆಯಬೇಕು ಎಂದರು.

ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎನ್.ಎ.ಹ್ಯಾರಿಸ್, ಪ್ರಸ್ ಕ್ಲಬ್ ಅಧ್ಯಕ್ಷ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಬೆಳ್ಳಿತಟ್ಟೆ ಇದ್ದರು.