ನಗರದ ಸರ್ವತೋಮುಖ ಅಭಿವೃದ್ಧಿಗೆ ನಗರಸಭೆ ಆಡಳಿತ ಬದ್ಧ

| Published : Sep 04 2024, 01:59 AM IST

ಸಾರಾಂಶ

ನಗರೋತ್ಥಾನ ನಾಲ್ಕನೇ ಹಂತದ ಯೋಜನೆ ಅಡಿ ಎರಡನೇ ವಾರ್ಡಿನಲ್ಲಿ ನಡೆಯುತ್ತಿರುವ ರಾಜಕಾಲುವೆ ಹಾಗೂ ಸಿಸಿ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿ ಮಾತನಾಡಿದ ಅವರು ಪಕ್ಷಭೇದ, ತಾರತಮ್ಯ ನೀತಿ ಮಾಡದೆ ನಗರಸಭೆಗೆ ಚುನಾಯಿತರಾಗಿರುವ ಎಲ್ಲಾ ಸದಸ್ಯರನ್ನು ಹಾಗೂ ಅಧಿಕಾರಿ ವರ್ಗದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಶಾಸಕರ ಸಲಹೆ ಸೂಚನೆಗಳಿಗೂ ಮಾನ್ಯತೆ ನೀಡುವ ಮೂಲಕ ನಗರದ ಸರ್ವತೋಮುಖ ಅಭಿವೃದ್ಧಿಯೊಂದಿಗೆ ನಗರವನ್ನು ಮಾದರಿ ನಗರವನ್ನಾಗಿ ಅಭಿವೃದ್ಧಿಪಡಿಸುವ ಸಂಕಲ್ಪ ನಗರಸಭೆ ಆಡಳಿತದ್ದಾಗಿದೆ ಎಂದು ಅಧ್ಯಕ್ಷ ಎಂ ಸಮೀವುಲ್ಲಾ ಹೇಳಿದರು.

ಕನ್ನಡಪ್ರಭ ವಾರ್ತೆ ಅರಸೀಕೆರೆ

ನಗರಸಭೆಯಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳು ವಿಳಂಬವಾಗದ ರೀತಿ ಹಾಗೂ ನಗರದ ಸರ್ವತೋಮುಖ ಅಭಿವೃದ್ಧಿಗೆ ನಗರಸಭೆ ಆಡಳಿತ ಬದ್ಧವಾಗಿದೆ ಎಂದು ಅಧ್ಯಕ್ಷ ಎಂ ಸಮೀವುಲ್ಲಾ ಹೇಳಿದರು.

ನಗರೋತ್ಥಾನ ನಾಲ್ಕನೇ ಹಂತದ ಯೋಜನೆ ಅಡಿ ಎರಡನೇ ವಾರ್ಡಿನಲ್ಲಿ ನಡೆಯುತ್ತಿರುವ ರಾಜಕಾಲುವೆ ಹಾಗೂ ಸಿಸಿ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿ ಮಾತನಾಡಿದ ಅವರು ಪಕ್ಷಭೇದ, ತಾರತಮ್ಯ ನೀತಿ ಮಾಡದೆ ನಗರಸಭೆಗೆ ಚುನಾಯಿತರಾಗಿರುವ ಎಲ್ಲಾ ಸದಸ್ಯರನ್ನು ಹಾಗೂ ಅಧಿಕಾರಿ ವರ್ಗದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಶಾಸಕರ ಸಲಹೆ ಸೂಚನೆಗಳಿಗೂ ಮಾನ್ಯತೆ ನೀಡುವ ಮೂಲಕ ನಗರದ ಸರ್ವತೋಮುಖ ಅಭಿವೃದ್ಧಿಯೊಂದಿಗೆ ನಗರವನ್ನು ಮಾದರಿ ನಗರವನ್ನಾಗಿ ಅಭಿವೃದ್ಧಿಪಡಿಸುವ ಸಂಕಲ್ಪ ನಗರಸಭೆ ಆಡಳಿತದ್ದಾಗಿದೆ ಎಂದು ಹೇಳಿದರು.

ವಾರ್ಡ್‌ವಾರು ಪರಿಯಟನೆ ಸ್ಥಳೀಯ ಸದಸ್ಯರನ್ನು ಒಳಗೊಂಡು ಮೂರುವರೆಯಲ್ಲಿದ್ದು ತಮ್ಮ ಬಡಾವಣೆಗಳಿಗೆ ನಗರಸಭೆ ಆಡಳಿತ ಬಂದಾಗ ತಮ್ಮ ಬಡಾವಣೆ ಹಾಗೂ ನಗರದ ಅಭಿವೃದ್ಧಿ ದೃಷ್ಟಿಯಿಂದ ನಗರಸಭೆ ಕೈಗೊಳ್ಳಬೇಕಾಗಿರುವ ಕೆಲಸ ಕಾರ್ಯಗಳನ್ನು ನಗರದ ಜನತೆಯ ಮುಕ್ತವಾಗಿ ನಮ್ಮೊಂದಿಗೆ ಹಂಚಿಕೊಳ್ಳಬಹುದು ಎಂದು ಇದೇ ಸಂದರ್ಭದಲ್ಲಿ ಅಧ್ಯಕ್ಷರು ಕರೆ ನೀಡಿದರು.

ಕಂತೆನಹಳ್ಳಿ ಕೆರೆ ಅಂಗಳದಲ್ಲಿ ನಗರಸಭೆ ಸಹಭಾಗಿತ್ವದಲ್ಲಿ ನಡೆಯುತ್ತಿರುವ ಈಜುಕೊಳ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಆದಷ್ಟು ಬೇಗ ಈಜು ಆಸಕ್ತರಿಗೆ ಈಜಾಡಲು ಹಾಗೂ ಈಜು ಕಲಿಯುವ ಆಸಕ್ತಿ ಇರುವ ಮಕ್ಕಳಿಗೆ ಒದಗಿಸಿಕೊಡುವ ನಿಟ್ಟಿನಲ್ಲಿ ಈಗಾಗಲೇ ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿರುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷ ಮನೋಹರ್ ಮೇಸ್ತ್ರಿ, ಎಇಇ ಸುನಿಲ್, ಆರೋಗ್ಯ ನಿರೀಕ್ಷಕ ಲಿಂಗರಾಜು, ವಾರ್ಡ್‌ನ ಸದಸ್ಯರಾದ ಕಲೆಯರಸಿ ಸುಧಾಕರ್ ಮತ್ತು ಇತರರು ಉಪಸ್ಥಿತರಿದ್ದರು.