ಸಾರಾಂಶ
ಕನ್ನಡಪ್ರಭ ವಾರ್ತೆ ಮೈಸೂರುಪರಿಸರ ಸುರಕ್ಷತೆ ಮತ್ತು ಸಾರ್ವಜನಿಕ ಆರೋಗ್ಯವನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ, ನಗರ ಪಾಲಿಕೆಯ ಆಯುಕ್ತರು ಸೋಮವಾರ ನಗರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಆಸ್ಪತ್ರೆಗಳು, ಚಿಕಿತ್ಸಾಲಯಗಳು ಮತ್ತು ಪ್ರಯೋಗಾಲಯಗಳ ಪ್ರತಿನಿಧಿಗಳೊಂದಿಗೆ ವಲಯ ಕಚೇರಿ -3 ರ ಸಭಾಂಗಣದಲ್ಲಿ ಸಭೆ ನಡೆಸಿದರು.ಜೈವಿಕ-ವೈದ್ಯಕೀಯ ತ್ಯಾಜ್ಯ ನಿರ್ವಹಣಾ ನಿಯಮಗಳು, 2016 (ಬಿಎಂಡಬ್ಲ್ಯೂ ನಿಯಮಗಳು 2016) ಪರಿಣಾಮಕಾರಿ ಅನುಷ್ಠಾನದ ಕುರಿತು ಚರ್ಚಿಸುವುದು ಸಭೆಯ ಉದ್ದೇಶವಾಗಿತ್ತು.ಸಭೆಯಲ್ಲಿ ಸ್ವಚ್ಛತಾ ಕಾರ್ಮಿಕರು ಸಾರ್ವಜನಿಕ ಆರೋಗ್ಯ ಮತ್ತು ಪರಿಸರಕ್ಕೆ ಗಮನಾರ್ಹ ಅಪಾಯವನ್ನುಂಟುಮಾಡುವ ಜೈವಿಕ-ವೈದ್ಯಕೀಯ ತ್ಯಾಜ್ಯವನ್ನು ಪ್ರತಿನಿತ್ಯ ಉತ್ಪತ್ತಿಯಾಗುವ ಘನತ್ಯಾಜ್ಯದೊಂದಿಗೆ ಮಿಶ್ರಣ ಮಾಡುತ್ತಿರುವ ನಿರಂತರ ಅಭ್ಯಾಸದ ಬಗ್ಗೆ ಆಯುಕ್ತರು ಕಳವಳ ವ್ಯಕ್ತಪಡಿಸಿದರು.ಜೈವಿಕ- ವೈದ್ಯಕೀಯ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಬೇರ್ಪಡಿಸಲು, ಸಂಗ್ರಹಿಸಲು ಮತ್ತು ವಿಲೇವಾರಿ ಮಾಡಲು ಎಲ್ಲಾ ಆರೋಗ್ಯ ಸಂಸ್ಥೆಗಳು ಬಿಎಂಡಬ್ಲ್ಯೂ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅವರು ಸೂಚಿಸಿದರು.ಇದನ್ನು ಕಟ್ಟುನಿಟ್ಟಾಗಿ ನಿರ್ವಹಿಸಲು ಸೆ. 1 ರವರೆಗೆ ಗಡುವು ನಿಗಧಿಪಡಿಸಿದರು. ಈ ನಿಗದಿತ ದಿನಾಂಕದ ನಂತರ ಮಾನದಂಡಗಳನ್ನು ಪಾಲಿಸಲು ವಿಫಲವಾದರೆ ಕಾನೂನಿನ ನಿಬಂಧನೆಗಳ ಪ್ರಕಾರ ಕಠಿಣ ದಂಡ ವಿಧಿಸಲಾಗುತ್ತದೆ ಎಂದು ಅವರು ಎಚ್ಚರಿಸಿದರು.ಮೈಸೂರು ಸ್ವಚ್ಛ ಮತ್ತು ಸುರಕ್ಷಿತ ನಗರವಾಗಿ ಉಳಿಯುವುದನ್ನು ಖಚಿತಪಡಿಸಿಕೊಳ್ಳಲು ಎಂಸಿಸಿ ಬದ್ಧವಾಗಿದೆ ಮತ್ತು ಈ ಗುರಿಯನ್ನು ಸಾಧಿಸಲು ಎಲ್ಲಾ ಪಾಲುದಾರರ ಸಹಕಾರ ಅವಶ್ಯ ಎಂದು ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ, ಇತರೆ ವೈದ್ಯಕೀಯ ಸಿಬ್ಬಂದಿ ಮತ್ತು ಸಂಸ್ಥೆಯವರು ಹಾಗೂ ನಗರ ಪಾಲಿಕೆ ಅಧಿಕಾರಿ ಸಿಬ್ಬಂದಿ ಭಾಗವಹಿಸಿದ್ದರು.