ನಗರಸಭೆ ಪೈಪ್ ಕಳವು ಪ್ರಕರಣ ಗಂಭೀರವಾಗಿ ಪರಿಗಣಿಸಲಾಗಿದೆ: ಸಚಿವ ವೈದ್ಯ

| Published : Apr 04 2025, 12:49 AM IST

ಸಾರಾಂಶ

ನಾಲ್ಕು ವಸತಿ ಗೃಹಗಳನ್ನು ಹೊಂದಿರುವ ಅಂದಾಜು ₹೮೫ ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಕಟ್ಟಡ ಹಾಗೂ ಸಾಮಾಜಿಕ ಅರಣ್ಯ ವಿಭಾಗದ ವಲಯ ಅರಣ್ಯಾಧಿಕಾರಿ ಕಚೇರಿ ಉದ್ಘಾಟಿಸಿ ಶುಭ ಕೋರಿದರು

ಶಿರಸಿ: ತಾಲೂಕಿನ ಹುತ್ಗಾರ ಗ್ರಾಪಂ ಕಚೇರಿ ಪಕ್ಕದಲ್ಲಿ ಅರಣ್ಯ ಸಿಬ್ಬಂದಿಗಾಗಿ ನೂತನವಾಗಿ ನಿರ್ಮಾಣ ಮಾಡಲಾದ ವಸತಿ ಸಮುಚ್ಚಯಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಉದ್ಘಾಟಿಸಿದರು.

ನಾಲ್ಕು ವಸತಿ ಗೃಹಗಳನ್ನು ಹೊಂದಿರುವ ಅಂದಾಜು ₹೮೫ ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಕಟ್ಟಡ ಹಾಗೂ ಸಾಮಾಜಿಕ ಅರಣ್ಯ ವಿಭಾಗದ ವಲಯ ಅರಣ್ಯಾಧಿಕಾರಿ ಕಚೇರಿ ಉದ್ಘಾಟಿಸಿ ಶುಭ ಕೋರಿದರು.

ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, ಸರ್ಕಾರದಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಒತ್ತು ನೀಡಲಾಗುತ್ತಿದೆ. ಅಗತ್ಯ ಕಾಮಗಾರಿಗಳನ್ನು ಮಾಡಲಾಗುತ್ತಿದೆ ಎಂದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಶಿರಸಿ ನಗರಸಭೆ ಪೈಪ್ ಕಳ್ಳತನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು ಆರೋಪಿಗಳು ಯಾರೇ ಇದ್ದರೂ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಕದಂಬೋತ್ಸವ ಆಚರಣೆ ದಿನಾಂಕ ಘೋಷಣೆಯಾಗಿದ್ದು, ಸಿದ್ಧತೆಗಳನ್ನು ಮಾಡುತ್ತಿದ್ದೇವೆ. ಕಳೆದ ವರ್ಷ ಬಾಕಿ ಇರುವ ಬಿಲ್‌ಗಳನ್ನು ಭರಣ ಮಾಡುತ್ತೇವೆ. ಹಣದ ಕೊರತೆಯಿಂದ ಬಾಕಿ ಇಲ್ಲ. ತಾಂತ್ರಿಕ ಕಾರಣದಿಂದ ಬಿಲ್ ಬಾಕಿ ಇರಬಹುದು. ತಕ್ಷಣ ಹಣ ಜಮಾ ಮಾಡುತ್ತೇವೆ. ಆಶ್ರಯ ಮನೆಗಳಿಗೆ ಹಣ ಬಿಡುಗಡೆಗೆ ಹಲವು ತಾಂತ್ರಿಕ ಕಾರಣಗಳಿಂದ ವಿಳಂಬವಾಗುತ್ತಿದೆ. ಇದು ಜಿಲ್ಲೆಯ ಸಮಸ್ಯೆಯಲ್ಲ. ಇಡೀ ರಾಜ್ಯದಲ್ಲಿ ಸಮಸ್ಯೆ ಇದೆ. ಈ ಬಗ್ಗೆ ಈಗಾಗಲೇ ಕ್ರಮ ಕೈಗೊಳ್ಳಲಾಗುತ್ತಿದೆ ಎಂದ ಅವರು, ಶಿರಸಿ ಕುಮಟಾ ಹೆದ್ದಾರಿ ಹೆದ್ದಾರಿ ಕಾಮಗಾರಿ ವಿಳಂಬದ ಕುರಿತಾಗಿ ಅಧಿಕಾರಿಗಳ ಸಭೆ ಕರೆದು ಕಾಮಗಾರಿಗೆ ವೇಗ ನೀಡಲು ಸೂಚಿಸುತ್ತೇವೆ. ಹೆದ್ದಾರಿ ಬಂದ್ ಮಾಡಿದರೆ ಕಾಮಗಾರಿ ಬೇಗ ಮುಗಿಯಬಹುದು ಎಂಬ ನಿರೀಕ್ಷೆಯಿಂದ ಹೆದ್ದಾರಿ ಬಂದ್ ಮಾಡಲಾಗಿತ್ತು. ಈಗಾಗಲೇ ಹೆದ್ದಾರಿಕಾಮಗಾರಿಯನ್ನು ವಿಕ್ಷಣೆ ಮಾಡಿದ್ದೇನೆ.ಕಾಮಗಾರಿಗೆ ವೇಗ ನೀಡಲು ಸೂಚಿಸುತ್ತೇವೆ ಎಂದರು.