ಸಾರಾಂಶ
ದೊಡ್ಡಬಳ್ಳಾಪುರ: ನಗರಸಭೆ ಸ್ಥಾಯಿ ಸಮಿತಿಗೆ ಜೆಡಿಎಸ್ ಹಿರಿಯ ನಗರಸಭಾ ಸದಸ್ಯ ವಿ.ಎಸ್.ರವಿಕುಮಾರ್ ಅವಿರೋಧ ಆಯ್ಕೆಯಾಗಿದ್ದಾರೆ. ಗುರುವಾರ ನಗರಸಭೆ ಸಭಾಂಗಣದಲ್ಲಿ ನಡೆದ ಪ್ರಕ್ರಿಯೆಯಲ್ಲಿ ರವಿಕುಮಾರ್ ಅವರನ್ನು ಆಯ್ಕೆ ಮಾಡಲಾಯಿತು. ಈ ಮೂಲಕ ಅವರು, ಸ್ಥಾಯಿ ಸಮಿತಿ ಅಧ್ಯಕ್ಷ ಹುದ್ದೆಗೆ 2ನೇ ಬಾರಿ ಆಯ್ಕೆಯಾದಂತಾಗಿದೆ.

ಆಯ್ಕೆಯಾದ ಬಳಿಕ ಪ್ರತಿಕ್ರಿಯಿಸಿದ ವಿ.ಎಸ್.ರವಿಕುಮಾರ್, ನಗರಸಭೆ ವ್ಯಾಪ್ತಿಯಲ್ಲಿ ರಚನಾತ್ಮಕವಾಗಿ ಕಾರ್ಯನಿರ್ವಹಿಸುವ ಮೂಲಕ ಜನರ ಆಶೋತ್ತರಗಳಿಗೆ ಸ್ಪಂದಿಸುವುದು ಅಗತ್ಯ. ಈ ನಿಟ್ಟಿನಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಳ್ಳುವ ಮೂಲಕ ಜನರಿಗೆ ಸ್ಪಂದಿಸಲಾಗುವುದು. ಸಣ್ಣ ಪುಟ್ಟ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ನಿರ್ವಹಿಸುವ ಮೂಲಕ ಮೂಲಸೌಕರ್ಯ ಅಭಿವೃದ್ದಿಗೆ ಶ್ರಮಿಸಲಾಗುವುದು. ನಗರ ನೈರ್ಮಲ್ಯ ಸುಧಾರಣೆಗೆ ಆದ್ಯತೆ ನೀಡಲಾಗುವುದು ಎಂದರು.ನೂತನ ಅಧ್ಯಕ್ಷರನ್ನು ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ, ಮುಖಂಡರಾದ ಹರೀಶ್‌ಗೌಡ, ನಗರಸಭೆ ಮಾಜಿ ಅಧ್ಯಕ್ಷ ತ.ನ.ಪ್ರಭುದೇವ್, ಉಪಾಧ್ಯಕ್ಷ ಮಲ್ಲೇಶ್, ತಾಲೂಕು ಜೆಡಿಎಸ್ ಅಧ್ಯಕ್ಷ ಲಕ್ಷ್ಮೀಪತಯ್ಯ, ವಕ್ತಾರ ಕುಂಟನಹಳ್ಳಿ ಮಂಜುನಾಥ್ ಮತ್ತಿತರರು ಅಭಿನಂದಿಸಿದರು.ಫೋಟೋ-
26ಕೆಡಿಬಿಪಿ6- ದೊಡ್ಡಬಳ್ಳಾಪುರ ನಗರಸಭೆ ಸ್ಥಾಯಿ ಸಮಿತಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ವಿ.ಎಸ್.ರವಿಕುಮಾರ್ ಅವರನ್ನು ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಅಭಿನಂದಿಸಿದರು.