ಸಾರಾಂಶ
ಕನ್ನಡಪ್ರಭ ವಾರ್ತೆ ಪಾಂಡವಪುರ
ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪೌರ ಕಾರ್ಮಿಕರು ಕೆಲಸಕ್ಕೆ ವಿರಾಮ ಘೋಷಿಸಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.ಪಟ್ಟಣದ ಪುರಸಭೆ ಆವರಣದಲ್ಲಿ ಸೇರಿದ ಪೌರಕಾರ್ಮಿಕರು ಘೋಷಣೆ ಕೂಗಿ ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸಿ ಜ್ಯೋತಿ ಸಂಜೀವಿನಿ, ಕೆಜಿಐಡಿ ಸೇರಿದಂತೆ ಸರ್ಕಾರಿ ನೌಕರರು ಪಡೆಯುವ ವಿವಿಧ ಸೌಲಭ್ಯಗಳನ್ನು ಪೌರ ಕಾರ್ಮಿಕರಿಗೂ ನೀಡಬೇಕು ಎಂದು ಆಗ್ರಹಿಸಿದರು.
ಹೊರಗುತ್ತಿಗೆಯಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ನೀರು ಸರಬರಾಜು, ಚಾಲಕರು, ಲೋಡರ್ಸ್, ಕ್ಲೀನರ್ಸ್ , ಗಾರ್ಡನರ್, ಸ್ಯಾನಿಟರಿ ಸೂಪರ್‌ವೈಸರ್, ಯುಜಿಡಿ ಸಹಾಯಕರನ್ನು ಒಳಗೊಂಡಂತೆ ಎಲ್ಲಾ ನೌಕರರನ್ನು ನೇರ ಪಾವತಿಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.ದಿನಗೂಲಿ ಕ್ಷೇಮಾಭಿವೃದ್ಧಿ, ಸಮಾನ ಕೆಲಸಕ್ಕೆ ಸಮಾನ ವೇತನ, ನೌಕರರನ್ನು ಕಾಯಂ ಮಾಡುವುದು, ಎಲ್ಲಾ ನೌಕರರಿಗೆ ಎಸ್‌ಎಫ್‌ಸಿ ಮುಕ್ತ ನಿಧಿಯಿಂದ ವೇತನ ನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಈಶ್ವರ್, ಪೌರ ಕಾರ್ಮಿಕರಾದ ಗಣೇಶ್, ಮಧು, ಶಿವರಾಜು, ನಾರಾಯಣಪ್ಪ, ಸಂತೋಷ್, ಆರೋಗ್ಯಾಧಿಕಾರಿ ಧನಲಕ್ಷ್ಮೀ, ಭಾನುಮತಿ, ಇಂದ್ರಮ್ಮ, ಡಿ.ರಂಗ, ರಮೇಶ್, ಚಂದ್ರ, ರವಿ, ಮಣಿಪ್ರಸಾದ್ ಇತರರು ಇದ್ದರು.ಇಂದು ವಿದ್ಯಾಧಾರೆ ಇಂಟರ್ ನ್ಯಾಷನಲ್ ಸ್ಕೂಲ್ ಉದ್ಘಾಟನೆ
ಹಲಗೂರು: ವಳಗೆರೆದೊಡ್ಡಿ ಗ್ರಾಮದಲ್ಲಿ ಮೇ 30ರಂದು ನೂತನ ವಿದ್ಯಾಧಾರೆ ಇಂಟರ್ ನ್ಯಾಷನಲ್ ಸ್ಕೂಲ್ ಪ್ರಾರಂಭೋತ್ಸವವನ್ನು ಹಮ್ಮಿಕೊಳ್ಳಲಾಗಿದೆ.ಸುತ್ತೂರು ಮಠದ ಶ್ರೀಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿ ಸ್ಕೂಲ್ ಉದ್ಘಾಟಿಸಲಿದ್ದಾರೆ. ತುಮಕೂರು ಸಿದ್ದಗಂಗಾ ಮಠದ ಸಿದ್ದಲಿಂಗ ಮಹಾಸ್ವಾಮಿಗಳ ಮತ್ತು ಬೆಂಗಳೂರಿನ ಕೆಂಗೇರಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ನಿಶ್ಚಲಾನಂದನಾಥ ಸ್ವಾಮೀಜಿಗಳ ದಿವ್ಯ ಸಮ್ಮುಖದಲ್ಲಿ ಕನಕಪುರ ದೇಗುಲ ಮಠದ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳ ದಿವ್ಯ ಉಪಸ್ಥಿತಿ ಮಳವಳ್ಳಿ ತಾಲೂಕಿನ ಎಲ್ಲಾ ಹರ ಗುರು ಚರಮೂರ್ತಿಗಳು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಮಾಜಿ ಸಂಸದ ಡಿ.ಕೆ.ಸುರೇಶ್, ಶ್ರೀರಂಗಪಟ್ಟಣ ಶಾಸಕ ರಮೇಶ ಬಂಡಿಸಿದ್ದೇಗೌಡ ಮತ್ತು ದಿ.ಲೀಲಾ ನಾಗರಾಜಪ್ಪನವರ ಧರ್ಮಪತ್ನಿ ನಾಗಸುಂದ್ರಮ್ಮ ಉಪಸ್ಥಿತರಿರುವರು ಎಂದು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ನಿರ್ದೇಶಕ, ವಿದ್ಯಾಧಾರೆ ಇಂಟರ್ ನ್ಯಾಷನಲ್ ಸ್ಕೂಲಿನ ಸಂಸ್ಥಾಪಕ ಅಧ್ಯಕ್ಷ ಎಚ್.ವಿ.ಅಶ್ವಿನ್ ಕುಮಾರ್ ತಿಳಿಸಿದ್ದಾರೆ.