ಕಾಂಗ್ರೆಸ್ ಮುಖಂಡರ ಸಹಕಾರದಿಂದ ಅವಿರೋಧವಾಗಿ ಆಯ್ಕೆಯಾಗಿದ್ದು, ಎಲ್ಲ ನಿರ್ದೇಶಕರು ಹಾಗೂ ಷೇರುದಾರರನ್ನು ವಿಶ್ವಾಸದೊಂದಿಗೆ ಹಿರಿಯರ ಸಹಕಾರದಿಂದ ಸಂಘವನ್ನು ಉತ್ತಮವಾಗಿ ನಡೆದುಕೊಂಡು ಹೋಗಲಾಗುವುದು.

ಕನ್ನಡಪ್ರಭ ವಾರ್ತೆ ಮಳವಳ್ಳಿ

ತಾಲೂಕಿನ ಕಂದೇಗಾಲ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಮುನೀಂದ್ರ ಅವಿರೋಧವಾಗಿ ಆಯ್ಕೆಯಾದರು.

ಹಿಂದಿನ ಅಧ್ಯಕ್ಷ ನಾಗರಾಜು ಅವರಿಂದ ರಾಜೀನಾಮೆಯಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ಸಂಘದ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಮುನೀಂದ್ರ ಮಾತ್ರ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಜಿ.ಎಂ.ರಾಮಕೃಷ್ಣ ಘೋಷಿಸಿದರು.

ನೂತನ ಅಧ್ಯಕ್ಷ ಮುನೀಂದ್ರ ಅಭಿನಂದನೆ ಸ್ವೀಕರಿಸಿ ಮಾತನಾಡಿ, ಕಾಂಗ್ರೆಸ್ ಮುಖಂಡರ ಸಹಕಾರದಿಂದ ಅವಿರೋಧವಾಗಿ ಆಯ್ಕೆಯಾಗಿದ್ದು, ಎಲ್ಲ ನಿರ್ದೇಶಕರು ಹಾಗೂ ಷೇರುದಾರರನ್ನು ವಿಶ್ವಾಸದೊಂದಿಗೆ ಹಿರಿಯರ ಸಹಕಾರದಿಂದ ಸಂಘವನ್ನು ಉತ್ತಮವಾಗಿ ನಡೆದುಕೊಂಡು ಹೋಗಲಾಗುವುದು ಎಂದರು.

ಅಧಿಕಾರಿಗಳು ಹಾಗೂ ಜನಪ್ರತಿನಿಧಿ ಗಳಮಾರ್ಗದರ್ಶನ ಹಾಗೂ ಸಲಹೆ ಪಡೆದು ಸದಸ್ಯರ ಹಾಗೂ ರೈತರಿಗೆ ಸೌಲಭ್ಯ ಒದಗಿಸಿಕೊಡುವ ನಿಟ್ಟಿನಲ್ಲಿ ಉತ್ತಮ ಕೆಲಸ ಮಾಡುತ್ತೇನೆ. ಅವಿರೋಧ ಆಯ್ಕೆಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದ ತಿಳಿಸಲಾಗುವುದು ಎಂದರು.

ನೂತನ ಅಧ್ಯಕ್ಷರನ್ನು ಅಭಿನಂದಿಸಿ ಟಿಎಪಿಸಿಎಂಎಸ್ ಅಧ್ಯಕ್ಷ ಎಂ.ಲಿಂಗರಾಜು ಮಾತನಾಡಿ, ರೈತರ ಹಾಗೂ ಸದಸ್ಯರ ಅಭಿವೃದ್ಧಿಗಾಗಿ ಸ್ಥಾಪನೆಗೊಂಡಿರುವ ಸಹಕಾರ ಸಂಘಗಳ ಪ್ರಗತಿಗೆ ಎಲ್ಲರೂ ಶ್ರಮಿಸಬೇಕಿದೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನೂತನ ಅಧ್ಯಕ್ಷರು ಕೆಲಸ ಮಾಡಲಿ ಎಂದು ಆಶಿಸಿದರು.

ಈ ವೇಳೆ ಮುಖಂಡರಾದ ಚನ್ನಿಗರಾಮು, ಮರಿಸ್ವಾಮಿ, ಸೋಮಣ್ಣ, ಸಹಕಾರ ಸಂಘದ ಉಪಾಧ್ಯಕ್ಷ ನಾಗರಾಜಮೂರ್ತಿ, ನಿರ್ದೇಶಕರಾದ ಧರ್ಮೇಂದ್ರ, ನಾಗರಾಜು, ಛಾಯಾದೇವಿ, ರಮ್ಯಶ್ರೀ, ರತ್ನಮ್ಮ ಪಾಲ್ಗೊಂಡಿದ್ದರು.ನಾಳೆಯಿಂದ ಹೋಬಳಿ ಮಟ್ಟದಲ್ಲಿ ಪ್ರಜಾಸೇವೆ ಆಂದೋಲನ ಸಭೆ

ಕೆ.ಆರ್.ಪೇಟೆ: ಸರ್ಕಾರದ ಆದೇಶದ ಮೇರೆಗೆ ತಾಲೂಕು ವ್ಯಾಪ್ತಿ ಹಾಗೂ ಹೋಬಳಿ ಮಟ್ಟದಲ್ಲಿ ಪ್ರಜಾಸೇವೆ ಆಂದೋಲನ ಸಭೆಗಳನ್ನು ಆಯೋಜಿಸಲಾಗುತ್ತಿದೆ ಎಂದು ತಹಸೀಲ್ದಾರ್ ಜಿ.ಎಸ್.ಶ್ರೇಯಸ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.‘ಬಾಗಿಲಿಗೆ ಬಂತು ಸರ್ಕಾರ- ಸೇವೆಗೆ ಇರಲಿ ಸಹಕಾರ’ ಎನ್ನುವ ಘೋಷವಾಕ್ಯದಡಿ ಪ್ರಜಾಸೇವೆ ಆಂದೋಲನ ಆಯೋಜನೆಯಾಗುತ್ತಿದೆ. ಸೆ.5ರಂದು ಬೆಳಗ್ಗೆ 10.30ಕ್ಕೆ ತಾಲೂಕಿನ ಬೂಕನಕೆರೆ ಗ್ರಾಮದಲ್ಲಿ ಹೋಬಳಿ ವ್ಯಾಪ್ತಿಯ ಪ್ರಜಾಸೇವೆ ಆಂದೋಲನ ನಡೆಯಲಿದೆ. ಸೆ.12ರಂದು ಬೆಳಗ್ಗೆ 10.30ಕ್ಕೆ ಕಿಕ್ಕೇರಿ ಕೆಪಿಎಸ್ ಶಾಲೆಯ ಆವರಣ, ಸೆ.19 ರಂದು ಪಟ್ಟಣದ ಜಯಮ್ಮ ಶಿವಲಿಂಗೇಗೌಡ ಕಲ್ಯಾಣ ಮಂಟಪದಲ್ಲಿ ಕೆ.ಆರ್.ಪೇಟೆ ಟೌನ್ ಮತ್ತು ಕಸಬಾ ಹೋಬಳಿ ವ್ಯಾಪ್ತಿ ಸೇರಿದಂತೆ ತಾಲೂಕು ಮಟ್ಟದ ಪ್ರಜಾಸೇವೆ ಆಂದೋಲನ ಸಭೆ ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಪ್ರಜಾಸೇವೆ ಆಂದೋಲನ ಸಭೆಗಳ ಅಧ್ಯಕ್ಷತೆ ವಹಿಸಲಿದ್ದು, ಕ್ಷೇತ್ರದ ಶಾಸಕರಾದ ಎಚ್.ಟಿ.ಮಂಜು ಉಪಸ್ಥಿತರಿರುವರು. ಪಿಂಚಣಿ ಸಮಸ್ಯೆ, ಪಹಣಿಗಳಲ್ಲಿನ ಸಮಸ್ಯೆ, ವಸತಿ/ನಿವೇಶನ ಸಮಸ್ಯೆ, ಗ್ಯಾರಂಟಿ ಯೋಜನೆಗಳು ಮತ್ತಿತರ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಸ್ಥಳದಲ್ಲಿಯೇ ಅರ್ಜಿ ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದು ಎಂದು ತಿಳಿಸಿದ್ದಾರೆ.