ಶಾಸಕ ಸ್ಥಾನದಿಂದ ಮುನಿರತ್ನ ವಜಾಕ್ಕೆ ಆಗ್ರಹ

| Published : Oct 23 2024, 12:35 AM IST

ಸಾರಾಂಶ

ಜಾತಿ ನಿಂದನೆ ಮತ್ತು ಮಹಿಳೆಯರ ಬಗ್ಗೆ ಅಸಭ್ಯವಾಗಿ ಮಾತನಾಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಆರ್.ಆರ್.ನಗರ ಶಾಸಕ ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ವಜಾ ಮಾಡಬೇಕು ಎಂದು ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಮಾಧ್ಯಮ ವಕ್ತಾರ ರಾವಸಾಹೇಬ ಐಹೋಳಿ ಒತ್ತಾಯಿಸಿದರು.

ಕನ್ನಡಪ್ರಭ ವಾರ್ತೆ ಕಾಗವಾಡ

ಜಾತಿ ನಿಂದನೆ ಮತ್ತು ಮಹಿಳೆಯರ ಬಗ್ಗೆ ಅಸಭ್ಯವಾಗಿ ಮಾತನಾಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಆರ್.ಆರ್.ನಗರ ಶಾಸಕ ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ವಜಾ ಮಾಡಬೇಕು ಎಂದು ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಮಾಧ್ಯಮ ವಕ್ತಾರ ರಾವಸಾಹೇಬ ಐಹೋಳಿ ಒತ್ತಾಯಿಸಿದರು.

ಪಟ್ಟಣದಲ್ಲಿ ಕಾಂಗ್ರೆಸ್ ಜನಸಂಪರ್ಕ ಕಾರ್ಯಾಲಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಂಚಕ್ಕಾಗಿ ಗುತ್ತಿಗೆದಾರರನ್ನು ಪೀಡಿಸುವ ಜೊತೆಗೆ ಮಹಿಳೆಯರು ಬಳಸುವ ವಸ್ತುಗಳಂತೆ ಮಾತಾಡುತ್ತಿದ್ದಾರೆ. ದಲಿತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದು, ಅವರ ಶಾಸಕ ಸ್ಥಾನವನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.ಗುತ್ತಿಗೆದಾರನ ಬಳಿ ಮಾತನಾಡುವಾಗ ಕೊಲೆ ಬೆದರಿಕೆ ಲಂಚದ ಬೇಡಿಕೆ ಇಡುವಾಗ ಪರಿಶಿಷ್ಟ ಸಮುದಾಯದ ಬಗ್ಗೆ ಆಡಿದ್ದಾರೆ ಎನ್ನಲಾದ ಮಾತುಗಳು ನೋವು ಹಾಗೂ ಆಕ್ರೋಶ ತರಿಸಿದೆ. ಶಾಸಕ ಮುನಿರತ್ನ ಅವರ ಈ ನಡೆಯನ್ನು ಪಕ್ಷಾತೀತವಾಗಿ ಖಂಡಿಸಬೇಕು. ಅದು ಬಿಟ್ಟು ಆತನನ್ನು ಸಮರ್ಥಿಸಿಕೊಳ್ಳುವುದು ದಲಿತ ಮತ್ತು ಮಹಿಳೆಯರಿಗೆ ಮಾಡುವ ಮಹಾದ್ರೋಹ. ಹೀಗಾಗಿ ಈ ಕೂಡಲೇ ಅವರನ್ನು ಗಡಿಪಾರು ಮಾಡದಿದ್ದರೇ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದರು.

ಗುತ್ತಿಗೆದಾರನ ಬಳಿ ಮಾತನಾಡುವಾಗ ಕೊಲೆ ಬೆದರಿಕೆ ಲಂಚದ ಬೇಡಿಕೆ ಇಡುವಾಗ ಪರಿಶಿಷ್ಟ ಸಮುದಾಯದ ಬಗ್ಗೆ ಆಡಿದ್ದಾರೆ ಎನ್ನಲಾದ ಮಾತುಗಳು ನೋವು ಹಾಗೂ ಆಕ್ರೋಶ ತರಿಸಿದೆ. ಶಾಸಕ ಮುನಿರತ್ನ ಅವರ ಈ ನಡೆಯನ್ನು ಪಕ್ಷಾತೀತವಾಗಿ ಖಂಡಿಸಬೇಕು. ಅದು ಬಿಟ್ಟು ಆತನನ್ನು ಸಮರ್ಥಿಸಿಕೊಳ್ಳುವುದು ದಲಿತ ಮತ್ತು ಮಹಿಳೆಯರಿಗೆ ಮಾಡುವ ಮಹಾದ್ರೋಹ.

-ರಾವಸಾಹೇಬ ಐಹೋಳಿ,

ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಮಾಧ್ಯಮ ವಕ್ತಾರ.