ಕಾರ್ಕಳ: ಕಾರ್ಕಳದಲ್ಲಿ 2027 ರಲ್ಲಿ ನಡೆಯಲಿರುವ ಐತಿಹಾಸಿಕ ಮಹಾಮಸ್ತಕಾಭಿಷೇಕಕ್ಕೆ ರಾಜ್ಯ ಸರ್ಕಾರವು ಮೊದಲ ಹಂತದಲ್ಲಿ 1.59 ಕೋಟಿ ರುಪಾಯಿಗಳ ಅನುದಾನವನ್ನು ಬಿಡುಗಡೆಗೊಳಿಸಿದ್ದು ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರು ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಫೆ. 25ರಂದು ಕಾರ್ಕಳಕ್ಕೆ ಆಗಮಿಸಿದ್ದು ಈ ಸಂದರ್ಭ ಮಹಾಮಸ್ತಕಾಭಿಷೇಕದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಬಿಡುಗಡೆಗೊಳಿಸುವಂತೆ ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರು ಮಾಜಿ ಮುಖ್ಯಮಂತ್ರಿಗಳಾದ ಡಾ. ಎಮ್. ವೀರಪ್ಪ ಮೊಯಿಲಿ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಪತ್ರವನ್ನು ನೀಡಿದ್ದರು.
ಈ ಸಂದರ್ಭದಲ್ಲಿ ಸೂಕ್ತವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅನುದಾನ ನೀಡುವ ಭರವಸೆಯನ್ನು ನೀಡಿದ್ದರು, ಅದರಂತೆ ಕೇವಲ ಒಂದು ತಿಂಗಳ ಅವಧಿಯಲ್ಲಿ ಅಲ್ಪ ಸಂಖ್ಯಾತ ಇಲಾಖೆಯ ಮೂಲಕ 1.59 ಕೋಟಿ ರು. ಅನುದಾನವನ್ನು ಮೊದಲ ಹಂತದಲ್ಲಿ ಬಿಡುಗಡೆಗೊಳಿಸಿದ್ದಾರೆ.ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರು. ಅನುದಾನ: ಸರ್ಕಾರಕ್ಕೆ ಕೃತಜ್ಞತೆ
ಕಾರ್ಕಳದಲ್ಲಿ 2027 ರಲ್ಲಿ ನಡೆಯಲಿರುವ ಐತಿಹಾಸಿಕ ಮಹಾಮಸ್ತಕಾಭಿಷೇಕಕ್ಕೆ ರಾಜ್ಯ ಸರ್ಕಾರವು ಮೊದಲ ಹಂತದಲ್ಲಿ 1.59 ಕೋಟಿ ರುಪಾಯಿಗಳ ಅನುದಾನವನ್ನು ಬಿಡುಗಡೆಗೊಳಿಸಿದ್ದು ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರು ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.