ಮುನಿಯಾಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕ ಕ್ರೀಡಾಕೂಟ

| Published : Mar 01 2025, 01:02 AM IST

ಸಾರಾಂಶ

ಮುನಿಯಾಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2024-2025 ನೇ ಸಾಲಿನ ಕಾಲೇಜು ಕ್ರೀಟಾಕೂಟ ಫೆ. 24 ರಂದು ಕಾಲೇಜು ಮೈದಾನದಲ್ಲಿ ಜರುಗಿತು. ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಬೇಬಿ. ಕೆ. ಶೆಟ್ಟಿ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಕಾರ್ಕಳ

ಮುನಿಯಾಲು ಸರ್ಕಾರಿ ಪ್ರಧಮ ದರ್ಜೆ ಕಾಲೇಜಿನ 2024-2025 ನೇ ಸಾಲಿನ ಕಾಲೇಜು ಕ್ರೀಟಾಕೂಟ ಫೆ. 24 ರಂದು ಕಾಲೇಜು ಮೈದಾನದಲ್ಲಿ ಜರುಗಿತು. ಕ್ರೀಡಾಕೂಟ ಉದ್ಘಾಟಿಸಿದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಬೇಬಿ. ಕೆ. ಶೆಟ್ಟಿ ಮಾತನಾಡಿ, ಕ್ರೀಡೆ ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಕಾರಣವಾಗುವುದು. ಜೊತೆಗೆ ಆರೋಗ್ಯವಂತ ಸಮಾಜದ ನಿರ್ಮಾಣಕ್ಕೂ ಸಹಕಾರಿಯಾಗಿದೆ ಎಂದರು.

ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿ ಯಶಸ್ಸು ಗಳಿಸುವ ಮೂಲಕ ವಿಶ್ವವಿದ್ಯಾನಿಲಯ, ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾಪಟುವಾಗಿ ಬೆಳೆಯಲು ಸಾಧ್ಯವಾ. ಆದುದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯೂ ಸ್ಪರ್ಧೆಗಳಲ್ಲಿ ಭಾಗವಹಿಸಿ ಕ್ರೀಡಾ ಸ್ಫೂರ್ತಿ ಮೆರೆಯಬೇಕು. ಈ ಮೂಲಕ ಕಾಲೇಜಿಗೆ ಕೀರ್ತಿ ತರುವಂತವರಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ಪ್ರೊ.ಸುಧಾಕರ ಕೆ.ಜಿ. ಮಾತನಾಡಿ,

ವಿದ್ಯಾರ್ಥಿಗಳಿಗೆ ಕ್ರೀಡೆ ಜೀವನದ ಅವಿಭಾಜ್ಯ ಅಂಗವಾಗಬೇಕು. ಕ್ರೀಡೆ ಅವರ ಶೈಕ್ಷಣಿಕ ಪ್ರಗತಿಗೆ ಪೂರಕವಾಗುವಂತಾಗಬೇಕು ಎಂದರು.

ಪಥಸಂಚಲನೆಗೆ ಮುನಿಯಾಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ

ವಿದ್ಯಾರ್ಥಿಗಳು ಬ್ಯಾಂಡ್ ಸೆಟ್ ನೀಡಿ ಸಹಕರಿಸಿದರು.

ಜೂನಿಯರ್ ರಾಷ್ಟ್ರೀಯ ಕಬಡ್ಡಿ ಮತ್ತು ಕುಸ್ತಿ ಕ್ರೀಡಾಪಟು

ಸಾಕ್ಷಿ ಶೆಟ್ಟಿ ಹಾಗೂ ಜೂನಿಯರ್ ರಾಷ್ಟ್ರೀಯ ಚೆಸ್ ಕ್ರೀಡಾಪಟು ಪ್ರಣೀತ್ ಜಿ.

ಶೆಟ್ಟಿಗಾರ್ ಅವರನ್ನು ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿಗಳಾದ ಪ್ರೊ.ವಿಶ್ವೇಶ್ವರ ಎನ್. ಗಾಂವ್ಕರ್ ಹಾಗೂ

ಎಲ್ಲಾ ಬೋಧಕ, ಬೋಧಕೇತರ ವೃಂದದವರು ಹಾಜರಿದ್ದರು.

ತೀರ್ಪುಗಾರರಾಗಿ ಕಾಲೇಜಿನ ಹಳೆ ವಿದ್ಯಾರ್ಥಿಗಳಾದ ಸುಶಾಂತ್ ಹಾಗೂ ಅರ್ಚನಾ ಸಹಕರಿಸಿದರು.

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಕುತುಬುದ್ದೀನ್ ವಾಗಣಗೇರ ಸ್ವಾಗತಿಸಿದರು. ಹಾಗೂ ಪಥಸಂಚಲನ ನಿರ್ವಹಿಸಿದರು. ಕ್ರೀಡಾ ಸಂಚಾಲಕ ಡಾ.ಮಂಜುನಾಥ ಆಚಾರಿ ನಿರೂಪಿಸಿದರು.