ಸಾರಾಂಶ
ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹಾಗೂ ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಮುನಿಯಾಲು ಗ್ರಾಮದಲ್ಲಿ ೨೦೨೩-೨೪ನೇ ಸಾಲಿನ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಲಾಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹಾಗೂ ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಮುನಿಯಾಲು ಗ್ರಾಮದಲ್ಲಿ ೨೦೨೩-೨೪ನೇ ಸಾಲಿನ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಲಾಯಿತು.ವರಂಗ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂತೋಷ ಕುಮಾರ್ ಉದ್ಘಾಟಿಸಿ, ಎನ್‌ಎಸ್‌ಎಸ್ ಯುವ ಪೀಳಿಗೆಯು ಗ್ರಾಮಗಳ ಅಭಿವೃದ್ಧಿಯಲ್ಲಿ ಪಾಲ್ಗೊಳ್ಳಲು ಸಹಕರಿಯಾಗಿದೆ ಎಂದು ತಿಳಿಸಿದರು.
ಕಾರ್ಯರ್ಯಕ್ರಮದ ಅಧ್ಯಕ್ಷತೆ ವಹಿಸಿದ ವೈಕುಂಠ ಬಾಳಿಗಾ ಕಾನೂನು ಕಾಲೇಜಿನ ಪ್ರಾಂಶುಪಾಲ ಪ್ರೊ. ರಘುನಾಥ್ ಕೆ.ಎಸ್., ಎನ್.ಎಸ್.ಎಸ್. ವಿದ್ಯಾರ್ಥಿಗಳು ಕೇವಲ ಶ್ರಮದಾನವಲ್ಲದೇ ಇತರೆ ಎಲ್ಲ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಈ ವಾರ್ಷಿಕ ವಿಶೇಷ ಶಿಬಿರ ಸಹಕಾರಿಯಾಗಿದೆ ಎಂದರು.ಕಾರ್ಯಕ್ರಮದಲ್ಲಿ ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ನಿರ್ದೇಶಕಿ ಪ್ರೊ. ನಿರ್ಮಲಾ ಕುಮಾರಿ ಕೆ., ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲೆ ಬೇಬಿ ಕೆ. ಶೆಟ್ಟಿ, ಮುನಿಯಾಲು ಗ್ರಾಮದ ಉದ್ಯಮಿ ಗೋಪಿನಾಥ್ ಭಟ್ ಹಾಗೂ ವೈಕುಂಠ ಬಾಳಿಗಾ ಕಾನೂನು ಕಾಲೇಜಿನ ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷರಾದ ಕಿರಣ್ ವಿನುತಾ ಹರೀಶ್ ಉಪಸ್ಥಿತರಿದ್ದರು.
ಎನ್.ಎಸ್.ಎಸ್. ಸಂಯೋಜನಾಧಿಕಾರಿ ಡಾ.ಸಿ.ಬಿ. ನವೀನ್ ಚಂದ್ರ ಕಾರ್ಯಕ್ರಮ ಸಂಯೋಜಿಸಿ ಸ್ವಾಗತಿಸಿದರು. ಎನ್‌ಎಸ್‌ಎಸ್ ವಿದ್ಯಾರ್ಥಿ ಕಾರ್ಯದರ್ಶಿಗಳಾದ ಭರತ್ ನಿರೂಪಿಸಿದರು. ಸುಮಾ ವಂದಿಸಿದರು.