ಸಾರಾಂಶ
ಕನ್ನಡಪ್ರಭ ವಾರ್ತೆ ಚಾಮರಾಜನಗರಬಡವರ ಪರ ಕೆಲಸ ಮಾಡದ ಶಾಸಕರು ಎಂದು ಎ.ಆರ್.ಕೃಷ್ಣಮೂರ್ತಿ ವಿರುದ್ಧ ಮಾಯಸಂದ್ರ ಮುನಿಯಪ್ಪ ನೀಡಿರುವ ಹೇಳಿಕೆ ಸತ್ಯಕ್ಕೆ ದೂರವಾದದ್ದು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ಚಂದ್ರು ಹೇಳಿದರು.ಪತ್ರಿಕಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಳ್ಳೇಗಾಲದಲ್ಲಿ ಸಮಾನ ಮನಸ್ಕರ ವೇದಿಕೆ ಹಮ್ಮಿಕೊಂತಿಡಿದ್ದ ಚಿಂತನ ಸಭೆಯ ಕಾರ್ಯಕ್ರಮವೊಂದರಲ್ಲಿ ಮಾಯಸಂದ್ರ ಮುನಿಯಪ್ಪ ತಮ್ಮ ಹಿಂಬಾಲಕರ ಪ್ರಚೋದನೆಯಿಂದ ತಪ್ಪುಗ್ರಹಿಕೆ ಮಾಡಿಕೊಂಡು ಶಾಸಕ ಎ.ಆರ್.ಕೃಷ್ಣಮೂರ್ತಿ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿದ್ದಾರೆ ಇದು ಖಂಡನೀಯ ಎಂದರು. ಕೃಷ್ಣಮೂರ್ತಿ ಬಡವರ ಪರ ಕೆಲಸ ಮಾಡುತ್ತಿದ್ದಾರೆ. ಶಾಸಕರಾದ ನಂತರ ಬೆಂಗಳೂರಿಗೆ ಹೋದಾಗ ಹೊರತುಪಡಿಸಿ ಪ್ರತಿದಿನ ಕ್ಷೇತ್ರದಲ್ಲಿ ಸಂಚರಿಸಿ ಜನಸಂಪರ್ಕ ಸಭೆ ನಡೆಸಿ ಕಷ್ಟ ಸುಖಗಳಿಗೆ ಸ್ಪಂದಿಸುತ್ತಿದ್ದಾರೆ. ಸದನದ ಒಳಗಡೆಂಯೂ ಕ್ಷೇತ್ರದ ಅಭಿವೃದ್ಧಿ ಪರ ಶಾಸಕರು ಮಾತನಾಡುತ್ತಾರೆ ಎಂದರು.
ಸ್ವಾತಂತ್ರ‍್ಯ ಬಂದು ೭೫ ವರ್ಷ ಕಳೆದರೂ ಕೂಡ ಬಿಳಿಗಿರಿ ರಂಗನಬೆಟ್ಟದ ಪುರಾಣಿ ಪೋಡಿಗೆ ವಿದ್ಯುತ್ ಸೌಲಭ್ಯ ಇರಲಿಲ್ಲ. 10 ಕೋಟಿ ಅನುದಾನ ತಂದು ವಿದ್ಯುತ್ ಸೌಲಭ್ಯ ಕಲ್ಪಿಸಿದ್ದಾರೆ. ಅಲ್ಲದೇ ಯಳಂದೂರಿನಲ್ಲಿ 100 ಹಾಸಿಗೆಯುಳ್ಳ ಆಸ್ಪತ್ರೆ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಕ್ಷೇತ್ರವನ್ನು ಶೈಕ್ಷಣಿಕವಾಗಿ ಮುಂದೆ ತರುವ ನಿಟ್ಟಿನಲ್ಲಿ 3 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಮಂಜೂರು ಮಾಡಿಸಿದ್ದಾರೆ ಎಂದು ಹೇಳಿದರು.ಸಂತೆಮರಹಳ್ಳಿಯಲ್ಲಿರುವ ಆರ್ಚರಿ ಶಾಲೆಗೆ ಒಳಾಂಗಣ ಕ್ರೀಡಾಂಗಣ ನಿರ್ಮಾಣ, ಉಪ್ಪಾರ ಜನಾಂಗದ ಹಲವು ಗ್ರಾಮಗಳಲ್ಲಿ ಸಿಸಿ ರಸ್ತೆ, ಚರಂಡಿ ನಿರ್ಮಾಣ, ಗೂಳಿಪುರ, ಗೌಡಹಳ್ಳಿ ಗ್ರಾಮಗಳಲ್ಲಿ ಪಶು ಆಸ್ಪತ್ರೆ ನಿರ್ಮಾಣ, ಯಳಂದೂರು ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ, ಬಿಳಿಗಿರಿರಂಗನಬೆಟ್ಟದ ಅಭಿವೃದ್ಧಿ ಸೇರಿದಂತೆ ಇತರೆ ಅಭಿವೃದ್ಧಿ ಕಾರ್ಯಗಳಿಗೆ ಕ್ರಮವಹಿಸಿದ್ದಾರೆ. ಶಾಸಕರ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ತಿಳಿಯದ ಮಾಯಸಂದ್ರ ಮುನಿಯಪ್ಪ ಅವರು ತಮ್ಮ ಆಪ್ತ ಸಹಾಯಕರ ಮೊಬೈಲ್ ನಂಬರ್ ಕೊಟ್ಟರೆ ಶಾಸಕರ ಪ್ರತಿದಿನದ ಕಾರ್ಯವೈಖರಿ ಕುರಿತು ತಿಳಿಸಲಾಗುವುದ ಎಂದರು.ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರ ವಿರುದ್ಧ ಮಾಡಿರುವ ಆರೋಪಗಳು ಸತ್ಯಕ್ಕೆ ದೂರವಾಗಿದೆ, ಜಿಲ್ಲೆಯಲ್ಲಿ ಸಚಿವ ಸಂಪುಟದ ಸಭೆ ನಡೆಸಲು ಉಸ್ತುವಾರಿ ಸಚಿವರು, ಸಂಸದರು, ಶಾಸಕರು ಕಾರಣರಾಗಿದ್ದಾರೆ, ಪ್ರಬುದ್ಧ ರಾಜಕಾರಣಿಯಾಗಿರುವ ಮಾಯಸಂದ್ರ ಮುನಿಯಪ್ಪ ಈ ರೀತಿ ಹೇಳಿಕೆ ನೀಡವುದು ಸರಿಯಲ್ಲ ಎಂದರು. ಸಂಸದರು ಬಿಳಿಗಿರಿ ರಂಗನಬೆಟ್ಟ ರಸ್ತೆ ಅಭಿವೃದ್ದಿಗೆ ಕೇಂದ್ರದ ಅನುದಾನದಲ್ಲಿ 20 ಕೋಟಿ ನೀಡಿದ್ದಾರೆ, ರೈಲ್ವೆ ಯೋಜನೆಗೆ ಬೆಂಬಿಡದೇ ಬರಿತ್ತಿದ್ದಾರೆ ಎಂದು ಕೇಂದ್ರ ಸಚಿವ ಸೋಮಣ್ಣ ಅವರೇ ಹೇಳಿದ್ದಾರೆ, ಕ್ಷೇತ್ರದ ಅಭಿವೃದ್ದಿಗೆ ಶ್ರಮಿಸುತ್ತಿದ್ದಾರೆ, ಮಾಯಸಂದ್ರ ಮುನಿಯಪ್ಪ ಮುಂದಿನ ಚುನಾವಣೆಯಲ್ಲಿ ಕೊಳ್ಳೇಗಾಲ ಮೀಸಲು ಕ್ಷೇತ್ರಕ್ಕೆ ಬರುವ ಹುನ್ನಾರ ಮಾಡಿಕೊಂಡು ಈ ರೀತಿಯ ಹೇಳಿಕೆ ನೀಡುತ್ತಿರಬಹುದು ಎಂದು ಕುಟುಕಿದರು.
ಪತ್ರಿಕಾಗೋಷ್ಟಿಯಲ್ಲಿ ಚುಡಾ ಅಧ್ಯಕ್ಷ ಮಹಮ್ಮದ್ ಅಸ್ಟರ್, ಚಾ.ನಗರ ನಗರಸಭಾ ನಾಮ ನಿರ್ದೇಶಿತ ಸದಸ್ಯ ಸ್ವಾಮಿ, ಕೊಳ್ಳೇಗಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್, ಮುಖಂಡರಾದ ಆರ್.ಮಹದೇವ್, ಕಂದಹಳ್ಳಿ ನಂಜುಂಡಸ್ವಾಮಿ, ರವಿ ಇದ್ದರು.