ಕೆರೆಯಂಗಳದಲ್ಲಿ ವ್ಯಕ್ತಿಯೋರ್ವನ ಕೊಲೆ

| Published : Oct 09 2025, 02:00 AM IST

ಸಾರಾಂಶ

ಕೊಲೆಯಾದ ವ್ಯಕ್ತಿ ಚಿರಂಜೀವಿ (25) ಈತ ಕೆಂಗೇರಿ ಹೋಬಳಿ ಹೆಮ್ಮಿಗೆಪುರ ಗ್ರಾಮದವನಾಗಿದ್ದು, ಈ ಹಿಂದೆ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲೆ ಪ್ರಕರಣದಲ್ಲಿ ಬಂಧನದಲ್ಲಿದ್ದನು.

ಕನಕಪುರ: ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಭದ್ರೇಗೌಡನ ದೊಡ್ಡಿ ಕೆರೆಯಂಗಳದಲ್ಲಿ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ದಾರುಣ ಘಟನೆ ನಡೆದಿದೆ.

ಕೊಲೆಯಾದ ವ್ಯಕ್ತಿ ಚಿರಂಜೀವಿ (25) ಈತ ಕೆಂಗೇರಿ ಹೋಬಳಿ ಹೆಮ್ಮಿಗೆಪುರ ಗ್ರಾಮದವನಾಗಿದ್ದು, ಈ ಹಿಂದೆ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲೆ ಪ್ರಕರಣದಲ್ಲಿ ಬಂಧನದಲ್ಲಿದ್ದು, ಜಾಮೀನಿನ ಮೇಲೆ ಬಿಡುಗಡೆಯಾಗಿ ಸ್ವಗ್ರಾಮ ತೊರೆದು ಪಿಚ್ಚನಕೆರೆ ಗ್ರಾಮದ ತನ್ನ ಹೆಂಡತಿ ತವರು ಮನೆಯಲ್ಲಿ ವಾಸಮಾಡಿಕೊಂಡು ಜೀವನ ಸಾಗಿಸುತ್ತಿದ್ದ, ಅ.07 ರ ಮಧ್ಯರಾತ್ರಿ ಸಮಯದಲ್ಲಿ ಯಾರೋ ದುಷ್ಕರ್ಮಿಗಳು ಈತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಕಳೆದ ಒಂದು ವಾರದ ಹಿಂದೆ ಭದ್ರೇಗೌಡನದೊಡ್ಡಿ ಗ್ರಾಮದ ಬಳಿ ಕುಡಿದು ಸ್ನೇಹಿತರೊಂದಿಗೆ ಗಲಾಟೆ ಮಾಡಿಕೊಂಡಿದ್ದು ಕೊಲೆಗೆ ಇದೇ ಕಾರಣ ಇರಬಹುದೆಂದು ಶಂಕಿಸಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್, ಅಪರ ಪೊಲೀಸ್ ಅಧೀಕ್ಷಕರಾದ ರಾಮಚಂದ್ರಪ್ಪ, ರಾಜೇಂದ್ರ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಕನಕಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಗ್ರಾಮಾಂತರ ವೃತ್ತ ನಿರೀಕ್ಷಕ ಎಸ್, ವಿಕಾಸ್ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಕೆ ಕೆ ಪಿ ಸುದ್ದಿ 03: