ಸಾರಾಂಶ
ಆಸ್ತಿ ವಿಚಾರವಾಗಿ ವ್ಯಕ್ತಿಯೊಬ್ಬರನ್ನು ಹಿಂಬದಿಯಿಂದ ಗುಂಡು ಹಾರಿಸಿ ಕೊಲೆ ಮಾಡಿರುವ ಘಟನೆ ಅಭ್ಯತ್ ಮಂಗಲ ಗ್ರಾಮದಲ್ಲಿ ನಡೆದಿದೆ.
ಕನ್ನಡಪ್ರಭ ವಾರ್ತೆ ಚೆಟ್ಟಳ್ಳಿ
ಆಸ್ತಿ ವಿಚಾರವಾಗಿ ವ್ಯಕ್ತಿಯೊಬ್ಬರನ್ನು ಹಿಂಬದಿಯಿಂದ ಗುಂಡು ಹಾರಿಸಿ ಕೊಲೆ ಮಾಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಚೆಟ್ಟಳ್ಳಿ ಸಮೀಪದ ಅಭ್ಯತ್ ಮಂಗಲ ಗ್ರಾಮದಲ್ಲಿ ಮಂಗಳವಾರ ನಡೆದಿದೆ.ಕೊಳಂಬೆ ವಿನು ಬೆಳ್ಯಪ್ಪ(53) ಮೃತ ದುರ್ದೈವಿ. ನಂಜರಾಯಪಟ್ಟಣದಲ್ಲಿ ವಾಸವಾಗಿದ್ದ ಬೆಳೆಗಾರ ಕೊಳಂಬೆ ವಿನು, ಅಭ್ಯತ್ ಮಂಗಲದಲ್ಲಿ ಹೊಂದಿರುವ ತೋಟದ ಗೋದಾಮಿನಲ್ಲಿ ಪೈಪುಗಳ ಪರಿಶೀಲನೆಗೆ ತೆರಳಿದ ಸಂದರ್ಭ ಅಪರಿಚಿತರು ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ.
ಗುಂಡಿನ ಸದ್ದು ಕೇಳಿ ಕಾರ್ಮಿಕರು ಸ್ಥಳಕ್ಕಾಗಮಿಸಿದ ಸಂದರ್ಭ ಕೊಳಂಬೆ ವಿನು ರಕ್ತದ ಮಡುವಿನಲ್ಲಿ ಬಿದ್ದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕೃತ್ಯಕ್ಕೆ ಆಸ್ತಿ ವೈಷಮ್ಯ ಕಾರಣ ಎಂದು ಹೇಳಲಾಗುತ್ತಿದ್ದು, ಪೊಲೀಸ್ ತನಿಖೆಯಿಂದ ನಿಜಾಂಶ ಹೊರ ಬರಬೇಕಿದೆ.
-------------------------ಅರ್ಜಿ ಆಹ್ವಾನ
ಮಡಿಕೇರಿ : ಪೊನ್ನಂಪೇಟೆಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ವತಿಯಿಂದ 2025-26ನೇ ಶೈಕ್ಷಣಿಕ ವರ್ಷದಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಎಲೆಕ್ಟ್ರಾನಿಕ್ ಮೆಕಾನಿಕ್ ಮತ್ತು ಕಂಪ್ಯೂಟರ್ ಆಪರೇಟರ್ ಹಾಗೂ ಪ್ರೋಗ್ರಾಮಿಂಗ್ ಅಸಿಸ್ಟೆಂಟ್ ವೃತ್ತಿಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ಈ ಸಂಬಂಧ ಹತ್ತಿರದ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿಯೇ ಖುದ್ದಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಪ್ರಾಚಾರ್ಯರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಪೊನ್ನಂಪೇಟೆ ಇವರನ್ನು ಕೆಲಸದ ವೇಳೆಯಲ್ಲಿ ಅಥವಾ ದೂ.ಸಂ. 08274-200221 ಮತ್ತು 9036796935, 9880234243, 9945635160 ಹಾಗೂ 8971358220 ನ್ನು ಸಂಪರ್ಕಿಸಬಹುದು ಎಂದು ಪೊನ್ನಂಪೇಟೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾರ್ಚಾಯರು ತಿಳಿಸಿದ್ದಾರೆ.