ಸಾರಾಂಶ
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿ ರಾಮೇಶ್ವರ ಗ್ರಾಮದ ಸಮೀಪದ ಡಾಬಾದಲ್ಲಿ ಫೋಟೋ ಶೂಟ್ ವಿಚಾರವಾಗಿ ನಾಲ್ಕು ದಿನಗಳ ಹಿಂದೆ ನಡೆದಿದ್ದ ಕಚೇರಿಪಾಳ್ಯ ನಿವಾಸಿ ಸೂರ್ಯ ಹತ್ಯೆ ಪ್ರಕರಣದ ಮೊದಲ ಆರೋಪಿ ದಿಲೀಪ್ ಗುರುವಾರ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯಕ್ಕೆ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿ ರಾಮೇಶ್ವರ ಗ್ರಾಮದ ಸಮೀಪದ ಡಾಬಾದಲ್ಲಿ ಫೋಟೋ ಶೂಟ್ ವಿಚಾರವಾಗಿ ನಾಲ್ಕು ದಿನಗಳ ಹಿಂದೆ ನಡೆದಿದ್ದ ಕಚೇರಿಪಾಳ್ಯ ನಿವಾಸಿ ಸೂರ್ಯ ಹತ್ಯೆ ಪ್ರಕರಣದ ಮೊದಲ ಆರೋಪಿ ದಿಲೀಪ್ ಗುರುವಾರ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯಕ್ಕೆ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದೇ ಪುಕರಣದಲ್ಲಿ ತಲೆಮರೆಸಿಕೊಂಡಿರುವ ಇನ್ನೂ ಮೂವರು ಆರೋಪಿಗಳ ಬಂಧನಕ್ಕಾಗಿ ಪೊಲೀಸರ ತಂಡ ತೀವ್ರ ಕಾರ್ಯಾಚರಣೆ ನಡೆಸುತ್ತಿದ್ದು, ಶೀಘ್ರದಲ್ಲೇ ಎಲ್ಲರನ್ನು ಬಂಧಿಸಲಾಗುವುದು ಎಂದಿದ್ದಾರೆ. ನ್ಯಾಯಾಲಯಕ್ಕೆ ಶರಣಾಗಿರುವ ದಿಲೀಪ್ ನನ್ನು ಹೆಚ್ಚಿನ ವಿಚಾರಣೆಗಾಗಿ 5 ದಿನಗಳ ಕಾಲ ಪೊಲೀಸ್ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.