ಸಾರಾಂಶ
ಮುರುಘಾ ಮಠದ ಆಡಳಿತಾಧಿಕಾರಿಯಾಗಿ ಶಿವಯೋಗಿ ಕಳಸದ ಅವರನ್ನು ನೇಮಿಸಲಾಗಿದೆ.
ಚಿತ್ರದುರ್ಗ: ಬಸವ ಕೇಂದ್ರ ಮುರುಘಾ ಮಠದ ಆಡಳಿತಾಧಿಕಾರಿಯಾಗಿ ನಿವೃತ್ತ ಐಎಎಸ್ ಅಧಿಕಾರಿ ಶಿವಯೋಗಿ ಕಳಸದ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರ ಮೇಲೆ ಫೋಕ್ಸೋ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಮಠದ ದೈನಂದಿನ ಚಟುವಟಿಕೆ ಹಾಗೂ ವಿದ್ಯಾ ಸಂಸ್ಥೆಯ ಆಡಳಿತ ನಿರ್ವಹಣೆಗೆ ಆಡಳಿತಾಧಿಕಾರಿ ನೇಮಕ ಮಾಡುವಂತೆ ಮಾಜಿ ಸಚಿವ ಎಚ್. ಏಕಾಂತಯ್ಯ ಅವರು ಸುಪ್ರಿಂಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂಕೋರ್ಟ್ ಈ ಸಂಬಂಧ ಮೂರು ದಿನಗಳ ಒಳಗಾಗಿ ಆಡಳಿತಾಧಿಕಾರಿಗಳ ನೇಮಕ ಮಾಡುವಂತೆ ನಿರ್ದೇಶನ ನೀಡಿತ್ತು. ಶಿವಯೋಗಿ ಕಳಸದ ಅವರು ಈ ಮೊದಲು ಬೆಂಗಳೂರು ಪ್ರಾದೇಶಿಕ ಆಯುಕ್ತರಾಗಿ ಕಾರ್ಯ ನಿರ್ವಹಿಸಿದ್ದರು ಅಲ್ಲದೆ ಕೆಎಸ್‌ಆರ್‌ಟಿಸಿ ಎಂಡಿ ಆಗಿದ್ದರು.
ಪೋಟೋ, 1ಎಚ್‌ಎಸ್‌ಡಿ3 : ಶಿವಯೋಗಿ ಕಳಸದ .