ಸಾರಾಂಶ
ಮಸ್ಕಿ ನಾಲ ಜಲಾಶಯ ತುಂಬಿರುವುದರಿಂದ ಹೆಚ್ಚುವರಿ ನೀರನ್ನು ಹಳ್ಳಕ್ಕೆ ಬಿಟ್ಟಿರುವುದು.
ಕನ್ನಡಪ್ರಭ ವಾರ್ತೆ ಮಸ್ಕಿ
ಮಾರಲದಿನ್ನಿ ಸಮೀಪದ ಮಸ್ಕಿ ನಾಲ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಭಾನುವಾರ ಬೆಳಗ್ಗೆ ಯಿಂದಲೇ ಮಸ್ಕಿಯ ಹಿರೇ ಹಳ್ಳಕ್ಕೆ ಜಲಾಶಯದಿಂದ ನೀರು ಬಿಡಲಾಗಿದ್ದು, ಹಳ್ಳದ ದಡದಮೇಲಿರುವ ಗ್ರಾಮಗಳ ಜನರು ಎಚ್ಚರಿಕೆಯಿಂದ ಇರಬೇಕು ಎಂದು ತಾಲೂಕು ಆಡಳಿತ ಮನವಿ ಮಾಡಿದೆ.ಕಳೆದ ಒಂದು ವಾರದಿಂದ ನಿರಂತರವಾಗಿ ಕುಷ್ಟಗಿ ಹಾಗೂ ಗಜೇಂದ್ರಗಡ ಭಾಗದಲ್ಲಿ ಮೆಲ್ಭಾಗದಲ್ಲಿ ಮಳೆಯಾಗುತ್ತಿರುವುದರಿಂದ ಮಸ್ಕಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. 29 ಅಡಿ (0.5 ಟಿಎಂಸಿ) ನೀರು ಸಂಗ್ರಹ ಸಾಮರ್ಥ್ಯದ ಜಲಾಶಯಕ್ಕೆ ನಾಗಲಾಪುರ ಹಳ್ಳದಿಂದ ಜಲಾಶಯಕ್ಕೆ ಹರಿದು ಬರುವ ಹೆಚ್ಚಿನ ನೀರನ್ನು ಹಳ್ಳಕ್ಕೆ ಬಿಡಲಾಗಿದೆ ಎಂದು ಜಲಾಶಯದ ಎಂಜಿನಿಯರ್ ದಾವೂದ್ ತಿಳಿಸಿದ್ದಾರೆ.
ಜಲಾಶಯ ಭರ್ತಿಯಾಗುತ್ತಿರುವ ಹಿನ್ನೆಲೆ ವಿಪತ್ತು ನಿರ್ವಹಣಾ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಸೂಚನೆಯಂತೆ ಜಲ ಸಂಪನ್ಮೂಲ ಇಲಾಖೆ ಪ್ರಕಟಣೆ ಹೊರಡಿಸಿದ್ದಾರೆ.ಮಸ್ಕಿ ನಾಲ ಜಲಾಶಯ ವ್ಯಾಪ್ತಿಯ ಎಡ ಹಾಗೂ ಬಲದಂಡೆ ಜಲಾಶಯ ತುಂಬಿರುವುದರಿಂದ ಹರ್ಷ ವ್ಯಕ್ತಪಡಿಸಿದ್ದು ಈ ಬಾರಿ ಬೆಳೆಗಳಿಗೆ ಸಂಪೂರ್ಣ ನೀರು ಸಿಗಲಿದೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
;Resize=(128,128))
;Resize=(128,128))
;Resize=(128,128))
;Resize=(128,128))