ಚುನಾವಣೆ ವೇಳೆ ಬೆಳ್ಳೂರು ಸೇರಿದಂತೆ ತಾಲೂಕಿನ ಮುಸ್ಲಿಂ ಬಾಂಧವರು ನನ್ನ ಕೈಹಿಡಿದಿದ್ದಾರೆ. ವಿಧಾನಸಭಾ ಕ್ಷೇತ್ರದ ಉಳಿದೆಲ್ಲಾ ಹೋಬಳಿಗಳಿಗಿಂತ ಬೆಳ್ಳೂರು ಹೋಬಳಿಯ ಎಲ್ಲ ವರ್ಗದ ಜನರು ಹೆಚ್ಚು ಬೆಂಬಲ ಕೊಡುತ್ತಿದ್ದಾರೆ. ಹಾಗಾಗಿ ನಿಮ್ಮ ನಿರೀಕ್ಷೆಗೂ ಮೀರಿ ಹೆಚ್ಚು ಅಭಿವೃದ್ಧಿ ಕೆಲಸ ಮಾಡಲಾಗುತ್ತಿದೆ.

ಕನ್ನಡಪ್ರಭ ವಾರ್ತೆ ನಾಗಮಂಗಲ

ರಾಜಕಾರಣ ಏನೇ ಇರಲಿ ಅವಕಾಶ ಸಿಕ್ಕಾಗ ಶಾಶ್ವತವಾಗಿ ಉಳಿಯುವ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮಾಡಬೇಕೆಂಬುದೇ ನನ್ನ ಮುಖ್ಯ ಉದ್ದೇಶ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ತಾಲೂಕಿನ ಬೆಳ್ಳೂರು ಮತ್ತು ದೇವಿಹಳ್ಳಿ ಗೇಟ್ ಬಳಿ ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ 14 ಕೋಟಿ ರು. ವೆಚ್ಚದ ವಿದ್ಯಾರ್ಥಿ ನಿಲಯ ಹಾಗೂ ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿಗೆ ಶುಕ್ರವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಕಳೆದ ಮೂರೂವರೆ ವರ್ಷದಲ್ಲಿ ನಾಗಮಂಗಲ ಪಟ್ಟಣ ಹಾಗೂ ಬೆಳ್ಳೂರಿನ ಅಲ್ಪಸಂಖ್ಯಾತ ಸಮುದಾಯ ಜನರ ಅನುಕೂಲಕ್ಕಾಗಿ 15 ರಿಂದ 20 ಕೋಟಿ ರು. ವೆಚ್ಚದಲ್ಲಿ ರಸ್ತೆ, ಚರಂಡಿ, ಶಾಲೆ, ಹಾಸ್ಟೆಲ್ ಸೇರಿದಂತೆ ಮೂಲ ಸೌಕರ್ಯ ಮತ್ತು ಅಭಿವೃದ್ಧಿ ಕೆಲಸ ಮಾಡಲಾಗಿದೆ ಎಂದರು.

ಚುನಾವಣೆ ವೇಳೆ ಬೆಳ್ಳೂರು ಸೇರಿದಂತೆ ತಾಲೂಕಿನ ಮುಸ್ಲಿಂ ಬಾಂಧವರು ನನ್ನ ಕೈಹಿಡಿದಿದ್ದಾರೆ. ವಿಧಾನಸಭಾ ಕ್ಷೇತ್ರದ ಉಳಿದೆಲ್ಲಾ ಹೋಬಳಿಗಳಿಗಿಂತ ಬೆಳ್ಳೂರು ಹೋಬಳಿಯ ಎಲ್ಲ ವರ್ಗದ ಜನರು ಹೆಚ್ಚು ಬೆಂಬಲ ಕೊಡುತ್ತಿದ್ದಾರೆ. ಹಾಗಾಗಿ ನಿಮ್ಮ ನಿರೀಕ್ಷೆಗೂ ಮೀರಿ ಹೆಚ್ಚು ಅಭಿವೃದ್ಧಿ ಕೆಲಸ ಮಾಡಲಾಗುತ್ತಿದೆ ಎಂದರು.

ಇದೇ ವೇಳೆ ಬೆಳ್ಳೂರು ಪಟ್ಟಣದಲ್ಲಿ 4 ಕೋಟಿ ರು. ವೆಚ್ಚದ ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯ, 5 ಕೋಟಿ ರು. ವೆಚ್ಚದ ಮೌಲಾನ ಆಜಾದ್ ಶಾಲಾ ಕಟ್ಟಡ, ದೇವಿಹಳ್ಳಿ ಗೇಟ್‌ಬಳಿ 5 ಕೋಟಿ ರು.ವೆಚ್ಚದ ಬಿಸಿಎಂ ಹಾಸ್ಟೆಲ್ ಕಟ್ಟಡ ನಿರ್ಮಾಣ ಮತ್ತು ಹೆರಗನಹಳ್ಳಿ ಗ್ರಾಮದಲ್ಲಿ 3 ಕೋಟಿ ರು.ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಚಿವರು ಭೂಮಿ ಪೂಜೆ ನೆರವೇರಿಸಿದರು.

ಈ ವೇಳೆ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮುಡ್ಲೀಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜೆ.ರಾಜೇಶ್, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಮಧುಶ್ರೀ, ಮುಖಂಡರಾದ ವೆಂಕಟೇಶ್, ನರೇಶ್, ಶಿವಣ್ಣ, ಪುಟ್ಟಸ್ವಾಮಿ, ಪಾಪಣ್ಣ, ಮಹಮ್ಮದ್ ಯಾಸೀನ್ ಸೇರಿದಂತೆ ಹಲವರು ಇದ್ದರು.ಟಿಎಪಿಸಿಎಂಎಸ್ ಚುನಾವಣೆ: ಮೈತ್ರಿ ಅಭ್ಯರ್ಥಿಗಳನ್ನು ಗೆಲ್ಲಿಸಲು ನಾಯಕರ ಕಸರತ್ತು

ಮದ್ದೂರು:ತಾಲೂಕು ವ್ಯವಸಾಯೋತ್ಪನ್ನ ಸಹಕಾರ ಸಂಘದ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಲು ಮೈತ್ರಿ ಪಕ್ಷಗಳ ನಾಯಕರು ಭಾರೀ ಕಸರತ್ತು ನಡೆಸಿದ್ದಾರೆ.

ಸೆ.27ರಂದು ನಡೆಯಲಿರುವ ಸಂಘದ ನಿರ್ದೇಶಕರ ಸ್ಥಾನಗಳ ಚುನಾವಣೆಗೆ ಮೈತ್ರಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಲು ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಹಾಗೂ ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿ ನೇತೃತ್ವದಲ್ಲಿ ರಾಜಕೀಯ ರಣತಂತ್ರ ನಡೆಸಲಾಗುತ್ತಿದೆ.ಪ್ರತಿ ಹಳ್ಳಿ ಹಳ್ಳಿಗೆ ಹೋಗಿ ಪ್ರಚಾರ ಮಾಡುತ್ತಿದ್ದಾರೆ. ಇತ್ತ ತಳ ಮಟ್ಟದಿಂದ ಅಧಿಕಾರ ಹಿಡಿಯಲು ಬಿಜೆಪಿ ನಿರ್ಧಾರ ಮಾಡಿದ್ದು, ಜೆಡಿಎಸ್ ಜೊತೆ ಸೇರಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗಳನ್ನು ಗೆಲ್ಲಿಸಿ ಪಕ್ಷವನ್ನು ಬಲಪಡಿಸಲು ಎಸ್.ಪಿ.ಸ್ವಾಮಿ ಮುಂದಾಗಿದ್ದಾರೆ.

ಈಗಾಗಲೇ ಚುನಾವಣಾ ಪ್ರಚಾರಕ್ಕೆ ಡಿ.ಸಿ.ತಮ್ಮಣ್ಣ ಚಾಲನೆ ನೀಡಿ ಮಾತನಾಡಿ, ಮತದಾರರು ಎದುರಾಳಿ ಪಕ್ಷದವರು ನೀಡುವ ಯಾವುದೇ ರೀತಿಯ ಆಮಿಷಗಳಿಗೆ ಒಳಗಾಗದೇ ಎನ್‌ಡಿಎ ಮೈತ್ರಿ ಕೂಟದ ಅಭ್ಯಥಿಗಳನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಕೋರಿದರು.ಸಹಕಾರ ಸಂಘಗಳು ರೈತ ಪರ ನಿರಂತರವಾಗಿ ಕೆಲಸ ಮಾಡುತ್ತಿವೆ. ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದರೆ ರೈತರಿಗೆ ಅನುಕೂಲವಾಗಲಿದೆ. ಹೀಗಾಗಿ ಜೆಡಿಎಸ್ ಬಿಜೆಪಿ ಮೈತ್ರಿ ಕೂಟದ ಬೆಂಬಲಿತ ಅಭ್ಯರ್ಥಿಗಳನ್ನು ಬೆಂಬಲಿಬೇಕು ಎಂದು ಕರೆ ನೀಡಿದರು.

ಮುಂದಿನ ದಿನಗಳಲ್ಲಿ ಜಿಲ್ಲಾ ಪಂಚಾಯ್ತಿ, ತಾಪಂ, ಗ್ರಾಪಂ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ನಡೆಯಲಿವೆ. ಹೀಗಾಗಿ ಎರಡು ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಒಟ್ಟಾಗಿ ಮೈತ್ರಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಪಣತೊಟ್ಟು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ತಿಳಿಸಿದರು.