ಸಾರಾಂಶ
ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನದ ವಿರೋಧವಾಗಿ ಕೇಂದ್ರ ಸರ್ಕಾರ ವಕ್ಫ್ ಕಾಯ್ದೆಗೆ ತಿದ್ದುಪಡಿ ಮಾಡಿದೆ. ಸಂವಿಧಾನದಲ್ಲಿ ಯಾವುದೇ ಒಂದು ಸಮುದಾಯವನ್ನು ಗುರಿಯಾಗಿಸಬಾರದು.
ಕನ್ನಡಪ್ರಭ ವಾರ್ತೆ ಮಳವಳ್ಳಿ
ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಅಖಿಲ ಭಾರತ ಮುಸ್ಲಿಂ ವೈಯುಕ್ತಿಕ ಕಾನೂನು ಮಂಡಳಿ ಸದಸ್ಯರು ಪಟ್ಟಣದಲ್ಲಿ ಮೌನ ಪ್ರತಿಭಟನೆ ನಡೆಸಿದರು.ಪಟ್ಟಣದ ಅನಂತ್ ರಾಂ ವೃತ್ತದ ಬಳಿ ಸೇರಿದ ಸಾವಿರಾರು ಮುಸ್ಲಿಂ ಸಮುದಾಯವರು ಮಾನವ ಸರಪಳಿ ನಿರ್ಮಿಸಿದ ಮುಸ್ಲಿಂ ಕೂಡಲೇ ವಕ್ಫ್ ಕಾಯ್ದೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಮುಖಂಡ ಮೆಹಬೂಬ್ ಪಾಷಾ ಮಾತನಾಡಿ, ನಾವೆಲ್ಲರೂ ಭಾರತೀಯರು. ಇಲ್ಲೇ ಹುಟ್ಟಿ ಬೆಳೆದ್ದೇವೆ. ನಮ್ಮ ಸಂವಿಧಾನದ ಹಕ್ಕನ್ನು ಕಿತ್ತು ಕೊಳ್ಳಬಾರದು. ಕೇಂದ್ರ ಸರ್ಕಾರ ವಕ್ಫ್ ಕಾಯ್ದೆಗೆ ತಿದ್ದುಪಡಿ ಮಾಡುವುದರ ಮೂಲಕ ಮುಸ್ಲಿಂ ಸಮುದಾಯಕ್ಕೆ ನ್ಯಾಯ ಕೊಡಿಸಲು ಎಲ್ಲರೂ ಕೈಜೋಡಿಸಬೇಕೆಂದು ಮನವಿ ಮಾಡಿದರು.ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನದ ವಿರೋಧವಾಗಿ ಕೇಂದ್ರ ಸರ್ಕಾರ ವಕ್ಫ್ ಕಾಯ್ದೆಗೆ ತಿದ್ದುಪಡಿ ಮಾಡಿದೆ. ಸಂವಿಧಾನದಲ್ಲಿ ಯಾವುದೇ ಒಂದು ಸಮುದಾಯವನ್ನು ಗುರಿಯಾಗಿಸಬಾರದು ಎಂದು ಆಗ್ರಹಿಸಿದರು.
ಮುಖಂಡ ಮಹಮದ್ ಜಬೀಉಲ್ಲಾ ಮಾತನಾಡಿ, ವಕ್ಫ್ ಕಾಯ್ದೆ ತಿದ್ದುಪಡಿ ಮೂಲಕ ಮುಸ್ಲಿಮರ ಹಕ್ಕು ಕಸಿದುಕೊಳ್ಳುವ ಕೆಲಸ ನಡೆಯುತ್ತಿದೆ. ನಮ್ಮ ಹಕ್ಕು ನಮಗೆ ಬೇಕು. ಕೂಡಲೇ ವಕ್ಫ್ ಕಾಯ್ದೆ ತಿದ್ದುಪಡಿಯನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.ದೇಶದಲ್ಲಿ ಮುಸ್ಲಿಂ ಮತ್ತು ಎಲ್ಲರೂ ಜತೆಯಾಗಿ ಜೀವನ ನಡೆಸುತ್ತಿದ್ದೇವೆ. ನಮ್ಮ ಹೋರಾಟಕ್ಕೆ ಎಲ್ಲರೂ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.
ಪ್ರತಿಭಟನೆಯಲ್ಲಿ ಪುರಸಭೆ ಸದಸ್ಯ ನೂರುಲ್ಲಾ ಮುಖಂಡರಾದ ನಜೀಮ್ ಷರೀಷ್, ಬಸೀರ್ ಮಹಮದ್, ಶಫಿ, ಹತಹುಲ್ಲಾ ಷರಿಷ್, ಬಾಬು, ಮುನೀರ್ ಪಾಷಾ, ಮುನ್ನಾ ಪಾಲ್ಗೊಂಡಿದ್ದರು.