ಸಾರಾಂಶ
ಮನವಿ ಸಲ್ಲಿಸಿದರೂ ಸಂಬಂಧಿಸಿದವರು ಕ್ರಮ ತೆಗೆದುಕೊಂಡಿಲ್ಲ ಏಕೆ?: ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಶ್ನೆ
ಕನ್ನಡಪ್ರಭ ವಾರ್ತೆ ಶಿರಸಿಮುಂಡಗೋಡ ವಿವಾಹ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಖ್ವಾಜಾ ಬಂದೇನವಾಜ್ (ಮುಕೇಳೆಪ್ಪ) ಹಿಂದೂ ಯುವತಿ ಜತೆ ಸುಳ್ಳು ದಾಖಲೆ ಸೃಷ್ಟಿಸಿ ಲವ್ ಜಿಹಾದ್ ಮೂಲಕ ಮದುವೆಯಾಗಿದ್ದಾನೆ. ಆತನನ್ನು ಬಂಧಿಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಶಿಕ್ಷೆಯಾಗಬೇಕೆಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಆಗ್ರಹಿಸಿದರು.
ಗುರುವಾರ ನಗರದ ನೆಮ್ಮದಿ ಕುಟೀರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಯೂಟ್ಯೂಬರ್ ಸುಳ್ಳು ದಾಖಲೆ ನೀಡಿ ಮದುವೆಯಾಗಿ ಒಂದು ತಿಂಗಳಾದರೂ ಯಾಕೆ ಕ್ರಮ ತೆಗೆದುಕೊಂಡಿಲ್ಲ? ಎಂದು ಪ್ರಶ್ನಿಸಿದರು.ಬಾಡಿಗೆ ಮನೆಯಲ್ಲಿ ಇದ್ದೇನೆ. ಕಲ್ಯಾಣ ಮಂಟಪದಲ್ಲಿ ಮದುವೆ ಆಗಿದ್ದೇನೆ ಎಂದು ಹೇಳಿದ್ದಾನೆ. ಅಲ್ಲಿ ಮದುವೆಯೇ ಆಗಿಲ್ಲ. ಬಾಡಿಗೆ ಮನೆಯಲ್ಲಿಯೂ ವಾಸವಾಗಿಲ್ಲ. ಇದನ್ನು ವಿರೋಧಿಸಿ ಪ್ರತಿಭಟಿಸಿ, ತಪ್ಪಿತಸ್ಥರಿಗೆ ಶಿಕ್ಷೆಯಾಗೇಬೇಕು ಎಂದು ಮನವಿ ಸಲ್ಲಿಸಿದರೂ ಸಂಬಂಧಿಸಿದವರು ಕ್ರಮ ತೆಗೆದುಕೊಂಡಿಲ್ಲ. ಅಫಿಡವಿಟ್‌ನಲ್ಲಿ ಎಲ್ಲ ಸುಳ್ಳು ದಾಖಲೆಗಳು ಇವೆ ಎಂದರು.
ನ್ಯಾಯಾಲಯದಿಂದ ಅನ್ಯಾಯ:ನ್ಯಾಯಾಲಯದ ಮೇಲೆ ಬಹಳ ಗೌರವವಿದ್ದು, ಕಾಡಸಿದ್ದೇಶ್ವರ ಸ್ವಾಮೀಜಿಯವರಿಗೆ ವಿಜಯಪುರ ಜಿಲ್ಲೆ ಪ್ರವೇಶ ನಿರ್ಬಂಧಿಸಿರುವುದನ್ನು ಕೆಳ ನ್ಯಾಯಾಲಯದ ತೀರ್ಪು ಎತ್ತಿಹಿಡಿದಿರುವುದು ಸರಿಯಲ್ಲ. ಸಂವಿಧಾನ, ಕಾನೂನಿನ ಅಡಿಯಲ್ಲಿ ನ್ಯಾಯಾಲಯಗಳು ಕೆಲಸ ಮಾಡಬೇಕು. ಸಾವಿರಾರು ರೈತರ ಬದುಕು ರೂಪಿಸಿದ ಶ್ರೀಗಳಿಗೆ ನ್ಯಾಯಾಲಯ ದೊಡ್ಡ ಅನ್ಯಾಯ ಮಾಡಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಶ್ರೀರಾಮ ಸೇನೆಯ ಪ್ರಮುಖರಾದ ಬಸವರಾಜ ಗೌಡರ, ಮಂಜು ಕಾಟ್ಕರ್ ಮತ್ತಿತರರು ಇದ್ದರು.ಆರ್‌ಎಸ್‌ಎಸ್‌ನಲ್ಲಿ ಜಾತಿ ಇಲ್ಲ:
ಸಚಿವ ಪ್ರಿಯಾಂಕ್ ಖರ್ಗೆಯವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕುರಿತು ಸೊಕ್ಕು, ಪ್ರತಿಷ್ಠೆಯಿಂದ ಮಾಡುತ್ತಿರುವುದು ತಪ್ಪು. ಆರ್‌ಎಸ್‌ಎಸ್‌ನಲ್ಲಿ ಜಾತಿ ಇಲ್ಲ. ಶ್ರೇಷ್ಠ ಸ್ವಯಂ ಸೇವಕ ಸಂಘವಾಗಿದ್ದು, ಹಿಂದುತ್ವದ ಪರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಪ್ರಮೋದ ಮುತಾಲಿಕ್ ಆರೋಪಿಸಿದರು.;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))