ಮುತ್ತಾರ್ಮುಡಿ: ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ವಾರ್ಷಿಕ ಶಿಬಿರ

| Published : Sep 30 2025, 12:02 AM IST

ಸಾರಾಂಶ

2025- 26ನೇ ಸಾಲಿನ ವಿಶೇಷ ವಾರ್ಷಿಕ ಶಿಬಿರ ಮುತ್ತಾರ್ಮುಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಮೂರ್ನಾಡು ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ 2025- 26 ನೇ ಸಾಲಿನ ವಿಶೇಷ ವಾರ್ಷಿಕ ಶಿಬಿರ ಮುತ್ತಾರ್ಮುಡಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಮೂರ್ನಾಡು ವಿದ್ಯಾ ಸಂಸ್ಥೆಯ ಅಧ್ಯಕ್ಷ ಡಾ. ಚೌರಿರ ಜಗತ್ ತಿಮ್ಮಯ್ಯ ಅಧ್ಯಕ್ಷತೆ ವಹಿಸಿದ್ದರು.

ಮುತ್ತಾರ್ಮುಡಿ ಗ್ರಾಮದ ದವಸ ಭಂಡಾರದ ಅಧ್ಯಕ್ಷರಾದ ಪಾರೆಮಜಲು ನಂದಕುಮಾರ, ವಿದ್ಯಾರ್ಥಿಗಳು ರಾಷ್ಟ್ರೀಯ ಸೇವಾ ಯೋಜನೆಯ ಮೂಲಕ ತಮ್ಮನ್ನು ತಾವು ಎಲ್ಲಾ ಚಟುವಟಿಕೆಗಳಲ್ಲಿ, ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದರು.

ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿ ಸದಸ್ಯರಾದ ಕೃಷ್ಣಪ್ಪ, ವಿದ್ಯಾರ್ಥಿಗಳು ಸೇವಾ ಮನೋಭಾವನೆ ಬೆಳೆಸಿಕೊಳ್ಳಲು ಈ ರೀತಿಯ ಶಿಬಿರಗಳು ಉತ್ತಮ ಅವಕಾಶ ನೀಡುತ್ತದೆ ಎಂದರು.

ಮೂರ್ನಾಡು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ದೇವಕಿ ಪ್ರಾಸ್ತಾವಿಕ ಮಾತನಾಡಿದರು.

ಶಿಬಿರದ ಧ್ವಜಾರೋಹಣವನ್ನು ಮೂರ್ನಾಡು ವಿದ್ಯಾ ಸಂಸ್ಥೆಯ ನಿರ್ದೇಶಕರಾದ ಮುಂಡಂಡ ನಂದ ಚಂಗಪ್ಪ ನೆರವೇರಿಸಿದರು. ಶಿಬಿರಾರ್ಥಿಗಳು ರಾಷ್ಟ್ರೀಯ ಸೇವಾ ಯೋಜನಾ ಗೀತೆಯನ್ನು ಹಾಡಿದರು. ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿಯ ಸದಸ್ಯರಾದ ಪಾರೆ ಮಜಲು ರಿತಾಸುದರ್ಶನ್ ಜ್ಯೋತಿ ಬೆಳಗಿಸುವುದರ ಮೂಲಕ ಶಿಬಿರವನ್ನು ಉದ್ಘಾಟಿಸಿದರು. ಮೂರ್ನಾಡು ವಿದ್ಯಾ ಸಂಸ್ಥೆಯ ಉಪಾಧ್ಯಕ್ಷರಾದ ನಂದೇಟಿರ ರಾಜ ಮಾದಪ್ಪನವರು, ಮೂರ್ನಾಡು ವಿದ್ಯಾ ಸಂಸ್ಥೆಯ ನಿರ್ದೇಶಕರಾದ ಕೆರೆ ಮನೆ ರಾಮಮೂರ್ತಿ, ಮುತ್ತಾರ್ಮುಡಿ ಗ್ರಾಮದ ಭಗವತಿ ಯುವಕ ಸಂಘದ ಅಧ್ಯಕ್ಷರಾದ ಪಾಡಿಚೆಟ್ಟಿರ ಎನ್ ಬಿಪಿನ್ ಮುತ್ತಣ್ಣ ಇದ್ದರು. ಕಾರ್ಯಕ್ರಮ ಅಧಿಕಾರಿಗಳಾದ ದಮಯಂತಿ ಸ್ವಾಗತಿಸಿದರು. ಉಪನ್ಯಾಸಕಿ ರೋಹಿಣಿ ನಿರೂಪಿಸಿ ಕುಮುದಾವಂದಿಸಿದರು.