ನಿರುದ್ಯೋಗ ನಿವಾರಿಸುವುದು ನನ್ನ ಮೊದಲ ಆದ್ಯತೆ: ಪಿ.ಎಂ.ನರೇಂದ್ರಸ್ವಾಮಿ

| Published : Sep 08 2025, 01:00 AM IST

ನಿರುದ್ಯೋಗ ನಿವಾರಿಸುವುದು ನನ್ನ ಮೊದಲ ಆದ್ಯತೆ: ಪಿ.ಎಂ.ನರೇಂದ್ರಸ್ವಾಮಿ
Share this Article
  • FB
  • TW
  • Linkdin
  • Email

ಸಾರಾಂಶ

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದು ಹಾಗೂ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸಿ ನಿರುದ್ಯೋಗವನ್ನು ನಿವಾರಿಸುವುದು ನನ್ನ ಮೊದಲ ಆದ್ಯತೆಯಾಗಿದೆ. ಮಳವಳ್ಳಿ ತಾಲೂಕಿನಲ್ಲಿ ಕಾರ್ಖಾನೆ ಆರಂಭಿಸುತ್ತಿರುವುದು ಸುಮಾರು 2 ಸಾವಿರಕ್ಕೂ ಹೆಚ್ಚು ಗ್ರಾಮೀಣ ಯುವಕ ಯುವತಿಯರಿಗೆ ಅನುಕೂಲವಾಗಲಿದೆ.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದು ಹಾಗೂ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸಿ ನಿರುದ್ಯೋಗವನ್ನು ನಿವಾರಿಸುವುದು ನನ್ನ ಮೊದಲ ಆದ್ಯತೆಯಾಗಿದೆ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಪಿ.ಎಂ ನರೇಂದ್ರಸ್ವಾಮಿ ತಿಳಿಸಿದರು.

ತಾಲೂಕಿನ ಉಪ್ಪನಹಳ್ಳಿಯಲ್ಲಿ ಶಾಯಿ ಎಕ್ಸ್ಪೋಟ್೯ ಪ್ರೈವೇಟ್ ಲಿಮಿಟೆಡ್ ವತಿಯಿಂದ ನೂತನ ಗಾಮೆಂಟ್ಸ್ ಕಾರ್ಖಾನೆ ನಿರ್ಮಾಣದ ಕಾಮಗಾರಿಗೆ ಗುದ್ದಲಿ ಪೂಜೆ ನೆರೆವೇರಿಸಿ ಮಾತನಾಡಿ, ತಾಲೂಕಿನಲ್ಲಿ ಕಾರ್ಖಾನೆ ಆರಂಭಿಸುತ್ತಿರುವುದು ಸುಮಾರು 2 ಸಾವಿರಕ್ಕೂ ಹೆಚ್ಚು ಗ್ರಾಮೀಣ ಯುವಕ ಯುವತಿಯರಿಗೆ ಅನುಕೂಲವಾಗಲಿದೆ ಎಂದರು.

ನನ್ನ ಅಧಿಕಾರದ ಜವಾಬ್ದಾರಿಯಲ್ಲಿ ಎಲ್ಲಾ ಸರ್ಕಾರಿ ಶಾಲೆಗಳಿಗೆ ಮೂಲ ಸೌಲಭ್ಯ ಕಲ್ಪಿಸುವ ಜೊತೆಗೆ ಡಿಜಿಟಲ್ ಶಿಕ್ಷಣ ನೀಡಲು ಆಗತ್ಯ ಕ್ರಮ ಕೈಗೊಳ್ಳಲಾಗಿದೆ. ತಾಲೂಕಿನ ತಿಗಡಹಳ್ಳಿ ಹಾಗೂ ಗುಂಡಾಪುರ ಗ್ರಾಮದ ಶಾಲೆಗಳಿಗೆ ಸಿಎಸ್‌ಆರ್ ಅನುದಾನದಲ್ಲಿ ಒಟ್ಟು 89 ಲಕ್ಷ ರು ವೆಚ್ಚದಲ್ಲಿ ಹೆಚ್ಚುವರಿ ಕಟ್ಟಡಗಳ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ ಎಂದರು.

ಕ್ಲಷ್ಟರ್ ಮಟ್ಟದಲ್ಲಿ ಮಲ್ಪಿಮೀಡಿಯಾ ಸ್ಥಾಪನೆಗೂ ಕೆಲವೇ ದಿನಗಳಲ್ಲಿ ಚಾಲನೆ ನೀಡಲಾಗುವುದು. ನಿರುದ್ಯೋಗ ನಿವಾರಣೆಗೆ ಹಲವು ಕಾರ್ಖಾನೆಗಳನ್ನು ತರಬೇಕೆಂಬುವುದು ನನ್ನ ಆಶಯವಾಗಿದೆ ಎಂದರು.

ಶಾಯಿ ಎಕ್ಸ್ಪೋಟ್೯ ಪ್ರೈವೇಟ್ ಲಿಮಿಟೆಡ್ ವ್ಯವಸ್ಥಾಪಕ ಶುಭದೇವ ರಾಜೇಆರಸ್ ಮಾತನಾಡಿ, ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ಕಲ್ಪಿಸುವ ಹಿನ್ನೆಲೆಯಲ್ಲಿ ಬೆಂಗಳೂರಿನ ಹೊರವಲಯದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಗಾಮೆಂಟ್ಸ್ ಕಾರ್ಖಾನೆ ಆರಂಭಿಸಲಾಗುತ್ತಿದೆ. ತಾಲೂಕಿನ ಉಪ್ಪನಹಳ್ಳಿಯಲ್ಲಿ 2 ಸಾವಿರ ಜನರಿಗೆ ಉದ್ಯೋಶ ಕಲ್ಪಿಸುವ ಆಶಯದಿಂದ ಸುಮಾರು 200 ಕೋಟಿ ವೆಚ್ಚದಲ್ಲಿ ಕಾರ್ಖಾನೆ ಆರಂಭಿಸಲು ಚಿಂತನೆ ನಡೆಸಲಾಗಿದೆ. ಯುವಕ ಯುವತಿಯರು ಸದ್ಬಳಕೆ ಮಾಡಿಕೊಳ್ಳಬೇಕೆಂದು ಕೋರಿದರು.

ಈ ವೇಳೆ ಕಾರ್ಖಾನೆ ವ್ಯವಸ್ಥಾಪಕ ಮರಿಗೌಡ, ಜಿಲ್ಲಾ ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಚಿಕ್ಕಲಿಂಗಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೊಡ್ಡಯ್ಯ, ಮಾಜಿ ಅಧ್ಯಕ್ಷ ದೇವರಾಜು, ಮನ್ಮುಲ್ ನಿರ್ದೇಶಕ ಆರ್ ಎನ್ ವಿಶ್ವಾಸ್ ಸೇರಿದಂತೆ ಹಲವಾರು ಇದ್ದರು.