ಸಾರಾಂಶ
ಬಡವರ, ಹಿಂದುಳಿದವರ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿಗೆ ಉದ್ಯೋಗ ಅಲ್ಲದೆ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಮುಂತಾದ ಇನ್ನಷ್ಟು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದು ಜಿಲ್ಲೆಯನ್ನು ಸಮಗ್ರ ಅಭಿವೃದ್ಧಿಯತ್ತ ಕೊಂಡೊಯ್ಯುವುದು ನನ್ನ ಗುರಿಯಾಗಿದೆ.
ದೇವನಹಳ್ಳಿ: ತಾಲೂಕಿನ ವಿಜಯಪುರ ಹೋಬಳಿ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಸುಮಾರು3.63 ಕೋಟಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸಚಿವರು ಮಾತನಾಡಿ, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗಿದೆ. ಬಡವರ, ಹಿಂದುಳಿದವರ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿಗೆ ಉದ್ಯೋಗ ಅಲ್ಲದೆ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಮುಂತಾದ ಇನ್ನಷ್ಟು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದು ಜಿಲ್ಲೆಯನ್ನು ಸಮಗ್ರ ಅಭಿವೃದ್ಧಿಯತ್ತ ಕೊಂಡೊಯ್ಯುವುದು ನನ್ನ ಗುರಿಯಾಗಿದೆ ಎಂದರು.ವಿಜಯಪುರ ಹೋಬಳಿಯ ವೆಂಕಟಗಿರಿಕೋಟೆ ಗ್ರಾಮ ವ್ಯಾಪ್ತಿಯಲ್ಲಿ 111 ಲಕ್ಷಗಳ ಬಿಜ್ಜವಾರ ಗ್ರಾ.ಪಂ. 64 ಲಕ್ಷ ರು. ಕೋರಮಂಗಲ ಗ್ರಾ. ಪಂ. 54 ಲಕ್ಷ ರು., ಮಂಡಿಬೆಲೆ ಗ್ರಾ. ಪಂ. 77 ಲಕ್ಷ ಸೇರಿ ಒಟ್ಟು 3.63 ಕೋಟಿ ರು.ಗಳ ವಿವಿಧ ರಸ್ತೆ, ಚರಂಡಿ ಅಲ್ಲದೆ ಹೈಮಾಸ್ಟ್ ದೀಪಗಳ ಅಳವಡಿಸುವ ಕಾಮಗಾರಿಗಳಿಗೆ ಸಚಿವರು ಪೂಜೆ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಬಯಪ ಅಧ್ಯಕ್ಷ ಶಾಂತಕುಮಾರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಬಿ. ರಾಜಣ್ಣ, ತಾಲೂಕು ಅಧ್ಯಕ್ಷ ಸಿ, ಜಗನ್ನಾಥ್‌ಮ ಜಗನ್ನಾಥ್ , ತಹಸೀಲ್ದಾರ್ ಬಾಲಕೃಷ್ಣ, ತಾಲೂಕು ಪಂ. ಇಒ ಶ್ರೀನಾಥ ಗೌಡ ಹಾಗೂ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು ಉಪಾಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು.