ಹಿರಿಯೂರು ತಾಲೂಕಿನ ಜನರು ನಮ್ಮ ಕುಟುಂಬಕ್ಕೆ ಪ್ರೀತಿ ವಿಶ್ವಾಸಕ್ಕೆ ನಾವೆಂದೂ ಚಿರಋಣಿಗಳಾಗಿದ್ದು ತಾಲೂಕಿನ ಅಭಿವೃದ್ಧಿ ಬಗ್ಗೆ ನಮ್ಮ ತಂದೆ ಕಂಡಿದ್ದ ಕನಸುಗಳನ್ನು ಸಾಕಾರಗೊಳಿಸುವುದೇ ನನ್ನ ಗುರಿಯಾಗಿದೆ ಎಂದು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸುಹಾಸ್ ಸುಧಾಕರ್ ಹೇಳಿದರು.

ಕನ್ನಡಪ್ರಭ ವಾರ್ತೆ ಹಿರಿಯೂರು

ತಾಲೂಕಿನ ಜನರು ನಮ್ಮ ಕುಟುಂಬಕ್ಕೆ ಪ್ರೀತಿ ವಿಶ್ವಾಸಕ್ಕೆ ನಾವೆಂದೂ ಚಿರಋಣಿಗಳಾಗಿದ್ದು ತಾಲೂಕಿನ ಅಭಿವೃದ್ಧಿ ಬಗ್ಗೆ ನಮ್ಮ ತಂದೆ ಕಂಡಿದ್ದ ಕನಸುಗಳನ್ನು ಸಾಕಾರಗೊಳಿಸುವುದೇ ನನ್ನ ಗುರಿಯಾಗಿದೆ ಎಂದು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸುಹಾಸ್ ಸುಧಾಕರ್ ಹೇಳಿದರು.

ತಾಲೂಕಿನ ಪಿಡಿ ಕೋಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಜೊತೆಗೆ ಶನಿವಾರ ಸಭೆ ನಡೆಸಿ ಅವರು ಮಾತನಾಡಿದರು.

ತಾಲೂಕಿನ ತುಂಬಾ ಪಕ್ಷದ ಮುಖಂಡರು, ಕಾರ್ಯಕರ್ತರ ಭೇಟಿ ಮಾಡುತ್ತಿದ್ದು ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸುವ ಕಾರ್ಯ ಮಾಡಲಾಗುತ್ತಿದೆ. ಕ್ಷೇತ್ರದ ಜನರ ಪ್ರೀತಿಗೆ ನಾವು ಸದಾ ಅಭಾರಿಗಳಾಗಿದ್ದು ಬರಲಿರುವ ದಿನಗಳಲ್ಲಿ ನಿಮ್ಮ ಸೇವೆ ಮಾಡುವ ಅವಕಾಶ ಮಾಡಿಕೊಡಿ.ಕಾರ್ಯಕರ್ತರು ಯಾವುದೇ ಕಾರಣಕ್ಕೂ ಧೃತಿಗೆಡದೆ ಪಕ್ಷವನ್ನು ಬೂತ್ ಮಟ್ಟದಿಂದ ಬಲಪಡಿಸುವತ್ತ ಗಮನ ಹರಿಸಬೇಕು. ಈಗಾಗಲೇ ನನ್ನ ಗಮನಕ್ಕೆ ಬಂದಿರುವ ಸಮಸ್ಯೆಗಳು, ಸಾರ್ವಜನಿಕರ ಅಗತ್ಯಗಳ ಈಡೇರಿಕೆಗೆ ಪ್ರಾಮಾಣಿಕವಾಗಿ ಶ್ರಮಿಸಲಿದ್ದೇನೆ. ಮುಖಂಡರ,ಕಾರ್ಯಕರ್ತರಸಲಹೆ ಸೂಚನೆಗಳನ್ನು ಪಡೆದು ಮುಂದಿನ ದಿನಗಳಲ್ಲಿ ಸಂಘಟನಾತ್ಮಕವಾಗಿ ತಾಲೂಕಿನಲ್ಲಿ ಪಕ್ಷವನ್ನು ಬಲಪಡಿಸಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗೆಲುವು ತರಲು ಎಲ್ಲರೂ ಒಗ್ಗೂಡಿ ದುಡಿಯೋಣ ಎಂದರು.

ಈ ಸಂದರ್ಭದಲ್ಲಿ ಪಿಡಿ ಕೋಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.

ಚಿತ್ರ 1 ಉಪ ಚುನಾವಣೆ ಕಾಂಗ್ರೆಸ್ ಟಿಕೆಟ್ ಆಕಾoಕ್ಷಿ ಸುಹಾಸ್ ಸುಧಾಕರ್ ಶನಿವಾರ ಪಿಡಿ ಕೋಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಸಿದರು.