ಕ್ಷೇತ್ರದಲ್ಲಿ ಶಿಕ್ಷಣ, ಆರೋಗ್ಯಕ್ಕೆ ನನ್ನ ಆದ್ಯತೆ: ಶಾಸಕ ಬಸವರಾಜು ಶಿವಗಂಗಾ

| Published : Feb 11 2024, 01:48 AM IST

ಕ್ಷೇತ್ರದಲ್ಲಿ ಶಿಕ್ಷಣ, ಆರೋಗ್ಯಕ್ಕೆ ನನ್ನ ಆದ್ಯತೆ: ಶಾಸಕ ಬಸವರಾಜು ಶಿವಗಂಗಾ
Share this Article
  • FB
  • TW
  • Linkdin
  • Email

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ಸಾಲಿನಲ್ಲಿ ಉರ್ದು ಶಾಲೆಗಳು ಅವನತಿಯ ಸಂದರ್ಭದಲ್ಲಿ ರಾಜ್ಯದಲ್ಲಿ 150 ಮೌಲಾನ ಶಾಲೆಗಳ ಆರಂಭಿಸಿ ಶೇ.75ರಷ್ಟು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮೀಸಲಿರುವ ಶಾಲೆಗಳ ತೆರೆದಿದ್ದರು. ನನ್ನ ಆಡಳಿತಾವಧಿಯಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಅನುದಾನ ತಂದು ಮೊದಲ ಆದ್ಯತೆ ನೀಡುತ್ತೇನೆ.

ಕನ್ನಡಪ್ರಭ ವಾರ್ತೆ ಚನ್ನಗಿರಿ

ಸರ್ಕಾರಿ ಶಾಲೆಗಳಲ್ಲಿ ಉತ್ತಮ ತರಬೇತಿ ಹೊಂದಿದ ಸಂಪನ್ಮೂಲ ಶಿಕ್ಷಕರಿದ್ದು, ಈ ಶಿಕ್ಷಕರಿಂದ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರೆಯುತ್ತದೆ ಈ ಬಗ್ಗೆ ಪೋಷಕರು ಅರಿತು ತಮ್ಮ ಮಕ್ಕಳ ಸರ್ಕಾರಿ ಶಾಲೆಗೆ ಸೇರಿಸಿದರೆ ಸರ್ಕಾರದ ಯೋಜನೆಗಳು ಸಾರ್ಥಕವಾಗಲಿದೆ ಎಂದು ಶಾಸಕ ಬಸವರಾಜು ವಿ.ಶಿವಗಂಗಾ ಹೇಳಿದರು.

ತಾಲೂಕಿನ ಸಂತೆಬೆನ್ನೂರು ಗ್ರಾಮದ ಸರ್ಕಾರಿ ಮೌಲಾನ ಆಂಗ್ಲ ಮಾಧ್ಯಮ ಮಾದರಿ ಶಾಲೆಯಲ್ಲಿ ಶನಿವಾರ ಏರ್ಪಡಿಸಿದ್ದ ಶಾಲಾ ವಾರ್ಷಿಕೋತ್ಸವ ಸಮಾರಂಭದ ಉದ್ಘಾಟನೆ ನೆರವೇರಿಸಿ ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ಸಾಲಿನಲ್ಲಿ ಉರ್ದು ಶಾಲೆಗಳು ಅವನತಿಯ ಸಂದರ್ಭದಲ್ಲಿ ರಾಜ್ಯದಲ್ಲಿ 150 ಮೌಲಾನ ಶಾಲೆಗಳ ಆರಂಭಿಸಿ ಶೇ.75ರಷ್ಟು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮೀಸಲಿರುವ ಶಾಲೆಗಳ ತೆರೆದಿದ್ದರು. ನನ್ನ ಆಡಳಿತಾವಧಿಯಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಅನುದಾನ ತಂದು ಮೊದಲ ಆದ್ಯತೆ ನೀಡುತ್ತೇನೆ ಎಂದರು.

ಕಾಂಗ್ರೆಸ್‌ ಸರ್ಕಾರದಿಂದ ರೈತರಿಗೆ ಅನುಕೂಲವಾಗುವಂತೆ ಕೆರೆಗಳಿಗೆ ನೀರು ತುಂಬಿಸುವುದು, ವಿದ್ಯುತ್ ಗೆ ತೊಂದರೆಯಾಗದಂತೆ ಗುಣಮಟ್ಟದ ವಿದ್ಯುತ್ ಪೂರೈಕೆ, ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡುವುದಾಗಿ ತಿಳಿಸಿದರು. ಎಸ್ಸೆಸ್ಸೆಲ್ಸಿಯಲ್ಲಿ ಅತಿ ಹೆಚ್ಚು ಅಂಕಗಳ ಪಡೆದ ವಿದ್ಯಾರ್ಥಿಗಳ ಸಮಾರಂಭದಲ್ಲಿ ಗೌರವಿಸಲಾಯಿತು.

ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ ಮಠದ್, ಗ್ರಾಪಂ ಅಧ್ಯಕ್ಷೆ ಭಾಗ್ಯಾ, ಉಪಾಧ್ಯಕ್ಷೆ ಶೃತಿ, ಮುಖ್ಯ ಶಿಕ್ಷಕ ವಿಶ್ವನಾಥ್, ಎಪಿಎಂಸಿ ಮಾಜಿ ಅಧ್ಯಕ್ಷ ಎಂ.ಸಿದ್ದಪ್ಪ, ಪ್ರಮುಖರಾದ ಕೆ.ಬಸವರಾಜ್, ಇಜಾಜ್, ಅಹಮದ್, ರಹಮತ್ ಉಲ್ಲಾ, ರಾಜು, ಗಿರೀಶ್, ವಲಿ ಅಹಮದ್, ಮಹಬೂಬ್ ಆಲಿ, ನದೀಮ್ ಉಪಸ್ಥಿತರಿದ್ದರು.