ಕ್ಷೇತ್ರದ ಜನತೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದೇ ನನ್ನ ಆದ್ಯತೆ: ಸುಬ್ಬಾರೆಡ್ಡಿ

| Published : Dec 26 2024, 01:05 AM IST

ಕ್ಷೇತ್ರದ ಜನತೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದೇ ನನ್ನ ಆದ್ಯತೆ: ಸುಬ್ಬಾರೆಡ್ಡಿ
Share this Article
  • FB
  • TW
  • Linkdin
  • Email

ಸಾರಾಂಶ

ಉಳಿದ ರಸ್ತೆಗಳ ಅಭಿವೃದ್ಧಿ ಕೆಲಸವನ್ನು ಅತೀ ಶೀಘ್ರದಲ್ಲಿಯೇ ಪೂರ್ಣಗೊಳಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಪಟ್ಟಣದಲ್ಲಿ ನಿವೇಶನ ಮತ್ತು ಸೂರು ಇಲ್ಲದೆ ಹಲವಾರು ವರ್ಷಗಳಿಂದ ಜೀವನ ನಡೆಸುತ್ತಿರುವ ಬಡವರಿಗೆ ನಿವೇಶನ ಮತ್ತು ಮನೆ ಒದಗಿಸುವುದು ನನ್ನ ಕರ್ತವ್ಯವಾಗಿದೆ. ಈಗಾಗಲೇ 1 ಸಾವಿರಕ್ಕೂ ಹೆಚ್ಚು ಅರ್ಜಿಗಳನ್ನು ಸಲ್ಲಿಸಿದ್ದಾರೆ.

ಬಾಗೇಪಲ್ಲಿ: ಶುದ್ಧ ಕುಡಿಯುವ ನೀರು, ರಸ್ತೆ, ಚರಂಡಿ, ಬೀದಿ ದೀಪ ಸೇರಿದಂತೆ ವಿವಿಧ ಮೂಲಭೂತ ಸೌಲಭ್ಯಗಳನ್ನು ಜನತೆಗೆ ಒದಗಿಸುವುದೇ ನನ್ನ ಮುಖ್ಯ ಗುರಿ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಿಳಿಸಿದರು.

ಪಟ್ಟಣದ ಹೊರವಲಯದ ಕೊಡಿಕೊಂಡ ರಸ್ತೆಯಲ್ಲಿರುವ ಆಶ್ರಯ (ಸಂಪಂಗಿ) ಬಡಾವಣೆಯಲ್ಲಿ 25 ಲಕ್ಷ ರು.ಗಳ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ಹಾಗೂ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಮಾತನಾಡಿ, ತಾಲೂಕಿನ ಗ್ರಾಮೀಣ ಪ್ರದೇಶಗಳ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವ ಮೂಲಕ ಈಗಾಗಲೇ ಬಹುತೇಕ ಗ್ರಾಮೀಣ ಪ್ರದೇಶಗಳ ರಸ್ತೆಗಳ ಅಭಿವೃದ್ಧಿಪಡಿಸಲಾಗಿದೆ.

ಉಳಿದ ರಸ್ತೆಗಳ ಅಭಿವೃದ್ಧಿ ಕೆಲಸವನ್ನು ಅತೀ ಶೀಘ್ರದಲ್ಲಿಯೇ ಪೂರ್ಣಗೊಳಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಪಟ್ಟಣದಲ್ಲಿ ನಿವೇಶನ ಮತ್ತು ಸೂರು ಇಲ್ಲದೆ ಹಲವಾರು ವರ್ಷಗಳಿಂದ ಜೀವನ ನಡೆಸುತ್ತಿರುವ ಬಡವರಿಗೆ ನಿವೇಶನ ಮತ್ತು ಮನೆ ಒದಗಿಸುವುದು ನನ್ನ ಕರ್ತವ್ಯವಾಗಿದೆ. ಈಗಾಗಲೇ 1 ಸಾವಿರಕ್ಕೂ ಹೆಚ್ಚು ಅರ್ಜಿಗಳನ್ನು ಸಲ್ಲಿಸಿದ್ದಾರೆ. ಶೀಘ್ರದಲ್ಲಿಯೇ ಜಮೀನು ಗುರುತಿಸಿ ಅರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡುವುದಾಗಿ ತಿಳಿಸಿದರು.

ಪುರಸಭೆ ಸದಸ್ಯರಾದ ಶ್ರೀನಿವಾಸರೆಡ್ಡಿ, ಎ.ನಂಜುಂಡಪ್ಪ, ಶಭಾನಾ, ಪುರಸಭೆ ಮಾಜಿ ಸದಸ್ಯರಾದ ಮಹಮ್ಮದ್ ನೂರುಲ್ಲಾ, ಮಹಮ್ಮದ್ ಆರೀಫ್, ಜಬೀವುಲ್ಲಾ, ಘಂಟಂವಾರಿಪಲ್ಲಿ ಗ್ರಾಪಂ ಅಧ್ಯಕ್ಷ ನವೀನ್ ಕುಮಾರ್ ಸೇರಿದಂತೆ ಮುಖಂಡರು ಇದ್ದರು.