ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ: ತುಂಗಭದ್ರಾ ನದಿಗೆ ನೀರು ಬಿಡುಗಡೆ

| Published : Feb 02 2025, 01:03 AM IST

ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ: ತುಂಗಭದ್ರಾ ನದಿಗೆ ನೀರು ಬಿಡುಗಡೆ
Share this Article
  • FB
  • TW
  • Linkdin
  • Email

ಸಾರಾಂಶ

ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ವಾರ್ಷಿಕ ಕಾರ್ಣಿಕೋತ್ಸವ ಫೆ.14ರಂದು ನಡೆಯಲಿದೆ. ಜಾತ್ರೆಯಲ್ಲಿ ಲಕ್ಷಾಂತರ ಭಕ್ತರು ಭಾಗವಹಿಸುತ್ತಿದ್ದು, ಜನರಿಗೆ ಅನುಕೂಲ ಕಲ್ಪಿಸಲು ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಫೆ.5ರಿಂದ 11ರವರೆಗೆ ಒಟ್ಟು 5800 ಕ್ಯುಸೆಕ್‌ ನೀರು ಹರಿಸಲಾಗುವುದು.

ದಾವಣಗೆರೆ: ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ವಾರ್ಷಿಕ ಕಾರ್ಣಿಕೋತ್ಸವ ಫೆ.14ರಂದು ನಡೆಯಲಿದೆ. ಜಾತ್ರೆಯಲ್ಲಿ ಲಕ್ಷಾಂತರ ಭಕ್ತರು ಭಾಗವಹಿಸುತ್ತಿದ್ದು, ಜನರಿಗೆ ಅನುಕೂಲ ಕಲ್ಪಿಸಲು ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಫೆ.5ರಿಂದ 11ರವರೆಗೆ ಒಟ್ಟು 5800 ಕ್ಯುಸೆಕ್‌ ನೀರು ಹರಿಸಲಾಗುವುದು.

ಈ ಅವಧಿಯಲ್ಲಿ ನದಿಯಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆ ಸಂಬಂಧಿಸಿದ ಕೆಲಸ ಮಾಡುವುದು, ನದಿ ದಂಡೆಯಲ್ಲಿ ಪಂಪ್‌ಸೆಟ್ ಅಳವಡಿಸುವುದು ಮತ್ತು ಅನಧಿಕೃತವಾಗಿ ನೀರೆತ್ತುವುದನ್ನು ನಿಷೇಧಿಸಲಾಗಿದೆ ಎಂದು ಕ.ನೀ.ನಿ.ನಿ., ಭದ್ರಾ ಯೋಜನಾ ವೃತ್ತ ಅಧೀಕ್ಷಕ ಅಭಿಯಂತರ ಹಾಗೂ ಭದ್ರಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಆರ್.ರವಿಚಂದ್ರ ತಿಳಿಸಿದ್ದಾರೆ.

- - -