ಸಾರಾಂಶ
ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಮೈಷುಗರ್ ಪ್ರೌಢ ಶಾಲೆಯ ಅಮೃತ ಮಹೋತ್ಸವ ಸಮಾರಂಭ ಡಿ.೨೮ರಂದು ಬೆಳಗ್ಗೆ ೯ ಗಂಟೆಗೆ ಮೈಷುಗರ್ ಪೂರ್ವ ಪ್ರಾಥಮಿಕ ಶಾಲಾ ಪ್ರಾಂಗಣದಲ್ಲಿ ನಡೆಯಲಿದೆ ಎಂದು ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಹೇಳಿದರು.ದಿವ್ಯ ಸಾನ್ನಿಧ್ಯವನ್ನು ಆದಿಚುಂಚನಚಗಿರಿ ಮಠದ ಪೀಠಾಧ್ಯಕ್ಷ ಶ್ರೀನಿರ್ಮಲಾನಂದನಾಥ ಸ್ವಾಮೀಜಿ, ಮಠದ ಕಾರ್ಯದರ್ಶಿ ಪುರುಷೋತ್ತಮಾನಂದನಾಥ ಸ್ವಾಮೀಜಿ ವಹಿಸುವರು. ಉದ್ಘಾಟನೆಯನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನೆರವೇರಿಸಲಿದ್ದು, ಸಾಹಿತಿ ಪ್ರೊ.ಎಂ.ಕೃಷ್ಣೇಗೌಡ ಆಶಯ ಭಾಷಣ ಮಾಡುವರು. ವಿಧಾನ ಪರಿಷತ್ತಿನ ಮಾಜಿ ಶಾಸಕ ಕೆ.ಟಿ. ಶ್ರೀಕಂಠೇಗೌಡ ಅಮೃತಧಾರೆ ಸಂಚಿಕೆ ಬಿಡುಗಡೆ ಮಾಡುವರು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ನಿವೃತ್ತ ನ್ಯಾಯಮೂರ್ತಿ ಎ.ಜೆ.ಸದಾಶಿವ, ಹಿರಿಯ ನ್ಯಾಯಾಧೀಶ ಎಚ್.ಕೆ.ಉಮೇಶ್, ಪದ್ಮಶ್ರೀ ಪುರಸ್ಕೃತ ಡಾ.ಕೆ.ಎಸ್. ರಾಜಣ್ಣ, ವೈದ್ಯ ಡಾ.ಎಂ.ಮಾದಯ್ಯ, ನಿವೃತ್ತ ಮುಖ್ಯಶಿಕ್ಷಕರಾದ ಎಂ.ಎಸ್.ಮನ್ನಾರ್ ಕೃಷ್ಣರಾವ್, ಚಿಕ್ಕಲಿಂಗಯ್ಯ, ಕೃಷಿ ವಿಜ್ಞಾನಿ ಪ್ರೊ.ಗುಬ್ಬಯ್ಯ, ಬಿಪಿಸಿಎಲ್‌ನ ಪಿ.ಎಸ್.ರವಿ, ಕೆಎಎಸ್ ಅಧಿಕಾರಿಗಳಾದ ಸಿ.ರಾಜು, ಎಂ.ಕೆ.ನಾಗೇಶ್ ಅವರನ್ನು ಸನ್ಮಾನಿಸಲಾಗುವುದು ಎಂದರು.ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಶಾಸಕ ಎಚ್.ಟಿ.ಮಂಜು, ವಿಧಾನ ಪರಿಷತ್ ಶಾಸಕ ಕೆ.ವಿವೇಕಾನಂದ, ನಗರಸಭೆ ಅಧ್ಯಕ್ಷ ಪ್ರಕಾಶ್, ಉಪಾಧ್ಯಕ್ಷ ಎಂ.ಪಿ.ಅರುಣ್‌ಕುಮಾರ್, ಮೈಷುಗರ್ ವ್ಯವಸ್ಥಾಪಕ ನಿರ್ದೇಶಕಿ ಬಿ.ಎನ್.ವೀಣಾ ಭಾಗವಹಿಸುವರು ಎಂದು ವಿವರಿಸಿದರು.
ಮಧ್ಯಾಹ್ನ ೨ ರಿಂದ ೩ ಗಂಟೆಯವರೆಗೆ ಹಿರಿಯ ವಿದ್ಯಾರ್ಥಿ ಸಂಘದ ಸರ್ವ ಸದಸ್ಯರ ಸಭೆ. ೩ ರಿಂದ ೪ರವರೆಗೆ ಶೈಕ್ಷಣಿಕ ವಿಚಾರಗೋಷ್ಠಿ ಅಧ್ಯಕ್ಷತೆಯನ್ನು ವಿಶ್ರಾಂತ ಪ್ರಾಂಶುಪಾಲ ಪ್ರೊ.ಎಸ್.ಬಿ.ಶಂಕರಗೌಡ ವಹಿಸುವರು. ವಿಚಾರ ಮಂಡನೆಯನ್ನು ನಿವೃತ್ತ ಮುಖ್ಯಶಿಕ್ಷಕ ಡಾ.ಎಂ.ಎಸ್.ಮನ್ನಾರ್ ಕೃಷ್ಣರಾವ್, ವೈದ್ಯ ಡಾ.ಎಂ.ಮಾದಯ್ಯ, ಶಿಕ್ಷಣ ತಜ್ಞ ಎನ್.ಎನ್.ಪ್ರಹ್ಲಾದ್, ವಿಶ್ರಾಂತ ಪ್ರಾಂಶುಪಾಲ ಡಾ.ಕೆಂಪಯ್ಯ ಮಾಡಲಿದ್ದಾರೆ ಎಂದರು.ಸಂಜೆ ೪ ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಸಚಿವ ಎನ್.ಚಲುವರಾಯಸ್ವಾಮಿ ಸಮಾರೋಪ ಭಾಷಣ ಮಾಡುವರು. ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಅಧ್ಯಕ್ಷತೆ ವಹಿಸುವರು. ಶಾಸಕ ಪಿ.ರವಿಕುಮಾರ್ ಗಣಿಗ ಬಹುಮಾನ ವಿತರಿಸಿದರು. ಮುಖ್ಯ ಅತಿಥಿಗಳಾಗಿ ವಿಧಾನಸಭೆ, ವಿಧಾನಪರಿಷತ್ತಿನ ಶಾಸಕರು, ಡಿಸಿಸ ಬ್ಯಾಂಕ್ ಅಧ್ಯಕ್ಷ ಕೆ.ಸಿ.ಜೋಗಿಗೌಡ, ಮಾಜಿ ಶಾಸಕ ಎಂ.ಶ್ರೀನಿವಾಸ್ ಇತರರು ಭಾಗವಹಿಸುವರು.
ಕೊನೆಯಲ್ಲಿ ಖ್ಯಾತ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ತಂಡದವರಿಂದ ಸುಗಮ ಸಂಗೀತ ಗಾಯನ, ಶಾಲಾ ಮಕ್ಕಳಿಂದ ವಿವಿಧ ಮನರಂಜನಾ ಕಾರ್ಯಕ್ರಮಗಳು ನಡೆಯಲಿವೆ ಎಂದು ವಿವರಿಸಿದರು.ಗೋಷ್ಠಿಯಲ್ಲಿ ಟಿ.ರಮೇಶ್, ಸತ್ಯನಾರಾಯಣ ದೇವ್, ವಿಶಾಲಾಕ್ಷಿ, ಬಿ.ಟಿ.ಜಯರಾಂ, ಸತ್ಯನಾರಾಯಣ ಇದ್ದರು.