ಜನವರಿಗೆ ಮೈಸೂರು ಫೆಸ್ಟ್ ಆಯೋಜನೆ: ಎಂ ಕೆ ಸವಿತಾ

| Published : Nov 16 2024, 12:33 AM IST

ಸಾರಾಂಶ

ಮೈಸೂರು ಪ್ರವಾಸೋದ್ಯಮ ನಗರವಾಗಿದ್ದು ಪ್ರವಾಸೋಧ್ಯಮ ಅಭಿವೃದ್ಧಿಗೆ ವಿಫುಲ ಅವಕಾಶವಿದೆ. ಇದರಿಂದ ನಗರದ ವ್ಯಾಪಾರಿಗಳಿಗೆ ಉತ್ತಮ ವ್ಯಾಪಾರ ಆಗುತ್ತದೆ. ಪ್ರವಾಸಿ ತಾಣಗಳ ಅಭಿವೃದ್ಧಿಯಿಂದ ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗುತ್ತಿದೆ. ಜಿಲ್ಲೆಗೆ ದೇಶ ವಿದೇಶಗಳಿಂದ ಪ್ರವಾಸಿಗರು ಭೇಟಿ ನೀಡುತ್ತಾರೆ. ಪ್ರವಾಸಿಗರ ಹೆಚ್ಚು ಭೇಟಿಯಿಂದ ಹೋಟೆಲ್, ರೆಸ್ಟೋರೆಂಟ್ ಉದ್ಯಮ ಅಭಿವೃದ್ಧಿ ಹೊಂದುತ್ತದೆ.

ಕನ್ನಡಪ್ರಭ ವಾರ್ತೆ ಮೈಸೂರು

ಮೈಸೂರು ಪ್ರವಾಸಿ ಜಿಲ್ಲೆಯಾಗಿದ್ದು, ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಕೈಗಾರಿಕೋದ್ಯಮಿಗಳು, ಹೂಡಿಕೆದಾರರು ಕೈಜೋಡಿಸಿ ಸಹಕರಿಸಿ ಎಂದು ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕಿ ಎಂ.ಕೆ. ಸವಿತಾ ತಿಳಿಸಿದರು.

ನಗರದ ಮಯೂರ ಹೋಟೆಲ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ನೇರ ಪಾಲದಾರರೊಂದಿಗೆ ಸಭೆಯಲ್ಲಿ ಮಾತನಾಡಿದ ಅವರು, ಮೈಸೂರು ಪ್ರವಾಸೋದ್ಯಮ ನಗರವಾಗಿದ್ದು ಪ್ರವಾಸೋಧ್ಯಮ ಅಭಿವೃದ್ಧಿಗೆ ವಿಫುಲ ಅವಕಾಶವಿದೆ. ಇದರಿಂದ ನಗರದ ವ್ಯಾಪಾರಿಗಳಿಗೆ ಉತ್ತಮ ವ್ಯಾಪಾರ ಆಗುತ್ತದೆ. ಪ್ರವಾಸಿ ತಾಣಗಳ ಅಭಿವೃದ್ಧಿಯಿಂದ ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗುತ್ತಿದೆ. ಜಿಲ್ಲೆಗೆ ದೇಶ ವಿದೇಶಗಳಿಂದ ಪ್ರವಾಸಿಗರು ಭೇಟಿ ನೀಡುತ್ತಾರೆ. ಪ್ರವಾಸಿಗರ ಹೆಚ್ಚು ಭೇಟಿಯಿಂದ ಹೋಟೆಲ್, ರೆಸ್ಟೋರೆಂಟ್ ಉದ್ಯಮ ಅಭಿವೃದ್ಧಿ ಹೊಂದುತ್ತದೆ ಎಂದು ತಿಳಿಸಿದರು.

2025ರ ಜನವರಿಗೆ ಮೈಸೂರು ಫೆಸ್ಟ್ ಮಾಡುವ ಯೋಜನೆ ಇದ್ದು, ಇದನ್ನು ದೊಡ್ಡ ಮಟ್ಟದಲ್ಲಿ ಆಯೋಜಿಸುವ ಕುರಿತು ಚಿಂತಿಸಲಾಗುತ್ತಿದೆ. ಇದರಲ್ಲಿ ಚಿತ್ರ ಸಂತೆ, ಪುಡ್ ಪೇಸ್ಟ್ ಆಯೋಜಿಸಲಾಗುವುದು. ಮೈಸೂರು ಫೆಸ್ಟ್ ಗೆ ಹೊರ ಜಿಲ್ಲೆ ಹೊರ ರಾಜ್ಯಗಳ ಜನರನ್ನು ಆಕರ್ಷಿಸುವ ರೀತಿ ಮಾಡುವ ಯೋಜನೆ ರೂಪಿಸಲಾಗುವುದು. ಮನರಂಜನೆ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಮೈಸೂರು ಸುಗಂಧ ಕಾರ್ಯಕ್ರಮ ಅದ್ಭುತವಾಗಿ ಯಶಸ್ವಿಯಾಗಿ 3 ದಿನಗಳ ಕಾಲ ನಡೆಯಿತು. ಪದ್ಮಶ್ರೀ, ಪದ್ಮಭೂಷಣ ಪ್ರಶಸ್ತಿ ವಿಜೇತ ಸಂಗೀತ ವಿದ್ವಾಂಸರು ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಕರ್ನಾಟಕ ಮ್ಯೂಸಿಕ್ ನ ದಾಸ ಸಾಹಿತ್ಯ, ಪುರಂದರ ದಾಸ, ಕನಕದಾಸರ ಕೀರ್ತನೆಗಳ ಸಂಗೀತ ಕಾರ್ಯಕ್ರಮಗಳು ಅದ್ಭುತವಾಗಿ ಮೂಡಿಬಂದಿತು ಎಂದು ಸಂತಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಹಾಗೂ ಮೈಸೂರು ಫೆಸ್ಟ್ ಕಾರ್ಯಕ್ರಮಕ್ಕೆ ಸಹಕರಿಸಿದ ನೇರ ಪಾಲುದಾರರಿಗೆ ಧನ್ಯವಾದ ತಿಳಿಸಿ ಸನ್ಮಾನಿಸಲಾಯಿತು.

ಸಭೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಟಿ.ಕೆ. ಹರೀಶ್, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಪ್ರಭುಸ್ವಾಮಿ, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ. ನಾರಾಯಣ ಗೌಡ, ಸ್ಕಾಲ್ಇಂಟರ್ನ್ಯಾಷನಲ್ಮೈಸೂರು ವಿಭಾಗದ ಅಧ್ಯಕ್ಷ ಜಯಕುಮಾರ್, ಮೈಸೂರು ಸಂಘ ಸಂಸ್ಧೆಗಳ ಒಕ್ಕೂಟದ ಅಧ್ಯಕ್ಷ ಬಿ.ಎಸ್. ಪ್ರಶಾಂತ್ , ವಾಣಿಜ್ಯ ಹಾಗೂ ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಕೆ.ಬಿ. ಲಿಂಗರಾಜು, ಹೋಟೆಲ್ ಜೇಡ್ ಗಾರ್ಡ್ ನ್ ಭರತ್ ಗೌಡ, ಪೈ ವಿಸ್ತಾ ಹೋಟೇಲ್ ಮಹೇಶ್ ಕುಮಾರ್, ಫೈನ್ ಆರ್ಟ್ಸ್ ನ ಅಶೋಕ್ ಮೊದಲಾದವರು ಇದ್ದರು.