ಸಾರಾಂಶ
ಮಹಿಳೆಯರ ರಕ್ಷಣೆಗಾಗಿ ಹಲವು ಕಾನೂನು ರಚಿಸಲಾಗಿದೆ. ಆಸ್ತಿಯಲ್ಲೂ ಸಮಪಾಲು ಕಲ್ಪಿಸಲಾಗಿದೆ. ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ನೀಡಲಾಗಿದೆ. ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆ ಸೇವೆ ಸಲ್ಲಿಸುತ್ತಿದ್ದು, ದೇಶದ ರಾಷ್ಟ್ರಪತಿ, ಪ್ರಧಾನಿ ಹುದ್ದೆಗಳು ಸೇರಿದಂತೆ ಹಲವು ಉನ್ನತ ಹುದ್ದೆಗಳನ್ನು ಮಹಿಳೆಯರು ಅಲಂಕರಿಸಿದ್ದಾರೆ
ಕನ್ನಡಪ್ರಭ ವಾರ್ತೆ ಮೈಸೂರು
ಹಲವಾರು ಕಾನೂನುಗಳ ಮೂಲಕ ನಮ್ಮ ದೇಶದಲ್ಲಿ ಮಹಿಳೆಯರಿಗೆ ಸಮಾನ ಹಕ್ಕು, ಸಮಾನ ಅವಕಾಶಗಳನ್ನು ಕಲ್ಪಿಸಲಾಗಿದೆ ಎಂದು ಜೆಎಸ್ಎಸ್ ಕಾನೂನು ಕಾಲೇಜಿನ ಪ್ರಾಂಶುಪಾಲ ಡಾ.ಎಸ್. ನಟರಾಜು ತಿಳಿಸಿದರು.ಮೈಸೂರಿನ ಕುವೆಂಪುನಗರದಲ್ಲಿರುವ ಜೆಎಸ್ಎಸ್ ಕಾನೂನು ಕಾಲೇಜಿನಲ್ಲಿ ಮಂಗಳವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಮಹಿಳಾ ಉದ್ಯೋಗಿಗಳಿಗೆ ಹೆರಿಗೆ ರಜೆ ಸೇರಿದಂತೆ ಹಲವಾರು ಸೌಲಭ್ಯ ಕಲ್ಪಿಸಲಾಗಿದೆ ಎಂದರು.
ಮಹಿಳೆಯರ ರಕ್ಷಣೆಗಾಗಿ ಹಲವು ಕಾನೂನು ರಚಿಸಲಾಗಿದೆ. ಆಸ್ತಿಯಲ್ಲೂ ಸಮಪಾಲು ಕಲ್ಪಿಸಲಾಗಿದೆ. ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ನೀಡಲಾಗಿದೆ. ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆ ಸೇವೆ ಸಲ್ಲಿಸುತ್ತಿದ್ದು, ದೇಶದ ರಾಷ್ಟ್ರಪತಿ, ಪ್ರಧಾನಿ ಹುದ್ದೆಗಳು ಸೇರಿದಂತೆ ಹಲವು ಉನ್ನತ ಹುದ್ದೆಗಳನ್ನು ಮಹಿಳೆಯರು ಅಲಂಕರಿಸಿದ್ದಾರೆ ಎಂದು ಅವರು ಹೇಳಿದರು.ಜೆಎಸ್ಎಸ್ ಕಾನೂನು ಕಾಲೇಜು ಸಹಾಯಕ ಪ್ರಾಧ್ಯಾಪಕಿ ಡಾ.ಎನ್. ವಾಣಿಶ್ರೀ ಮಾತನಾಡಿ, ಸಮಾಜದಲ್ಲಿ ಪುರುಷರು ಮತ್ತು ಮಹಿಳೆಯರು ಸರಿ ಸಮಾನರು. ಲಿಂಗಸಮಾನತೆ ಅಗತ್ಯ. ಮಹಿಳೆಯರಿಗೆ ಸಮಾಜದಲ್ಲಿ ಗೌರವ ನೀಡಬೇಕು ಎಂದು ಹೇಳಿದರು.
ಇದೇ ವೇಳೆ ಎಚ್.ಡಿ. ಕೋಟೆ ತಾಲೂಕು ಡಿ.ಬಿ. ಕುಪ್ಪೆ ಗ್ರಾಮದ ಆಶಾ ಕಾರ್ಯಕರ್ತೆ ಸುಶೀಲಾ ಕೋಟೆ ಗೋಳೂರು ಹಾಡಿ ಅವರನ್ನು ಸನ್ಮಾನಿಸಲಾಯಿತು. ಸಂಯೋಜಕಿ ಕೆ.ಎಸ್. ಪೂರ್ಣಿಮ ಇದ್ದರು.