ಕನ್ನಡ ಭಾಷೆ ಉಳಿಸಲು ಎಲ್ಲರೂ ಕೈಜೋಡಿಸೋಣ: ರಮೇಶ್ ಬಂಡಿಸಿದ್ದೇಗೌಡ ಕರೆಕನ್ನಡ ಭಾಷೆಯ ಮೇಲೆ ಅಭಿಮಾನ ಇದ್ದರೂ, ಕನ್ನಡವನ್ನು ಮರೆಯುತ್ತಿದ್ದೇವೆ. ದಿನನಿತ್ಯದ ಕೆಲಸಗಳಲ್ಲಿ ಕನ್ನಡ ಬಳಕೆಗೆ ಹಿಂದೇಟು ಹಾಕುತ್ತಿದ್ದೇವೆ. ಹೊರಗಿನ ಪ್ರಪಂಚದ ಜ್ಞಾನವನ್ನು ಬೆಳೆಸಿಕೊಳ್ಳಲು ನಾವು ಬೇರೆ ಭಾಷೆಗಳನ್ನು ಕಲಿಯಬೇಕು. ಆದರೆ, ನಮ್ಮ ಮಾತೃ ಭಾಷೆ ಮರೆಯಬಾರದು. ಮಾತೃಭಾಷೆ ಮರೆತರೆ ನಮಗೆ ಜನ್ಮ ನೀಡಿದ ತಾಯಿಯನ್ನು ಮರೆತಂತೆ.