ಸಾರಾಂಶ
ಸಾರಿಗೆ ಇಲಾಖೆಯಿಂದ ಮೈಸೂರಿನ ಬನ್ನಿ ಮಂಟಪದಲ್ಲಿ ₹120 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಬಸ್ಸು ನಿಲ್ದಾಣ ನಿರ್ಮಾಣ ಮಾಡಲು ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ಬೆಂಗಳೂರು : ಸಾರಿಗೆ ಇಲಾಖೆಯಿಂದ ಮೈಸೂರಿನ ಬನ್ನಿ ಮಂಟಪದಲ್ಲಿ ₹120 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಬಸ್ಸು ನಿಲ್ದಾಣ ನಿರ್ಮಾಣ ಮಾಡಲು ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ಪ್ರವಾಸಿಗರು ಲಕ್ಷಾಂತರ ಸಂಖ್ಯೆಯಲ್ಲಿ ಮೈಸೂರಿಗೆ ಆಗಮಿಸುತ್ತಾರೆ. ನಿತ್ಯ 5 ಸಾವಿರಕ್ಕೂ ಹೆಚ್ಚು ಬಸ್ಸು ಸಂಚರಿಸುತ್ತಿವೆ. ಈಗಿರುವ ಬಸ್ಸು ನಿಲ್ದಾಣದ ಸಾಮರ್ಥ್ಯ ಸಾಕಾಗುತ್ತಿಲ್ಲ. ಹೀಗಾಗಿ ಅತ್ಯಾಧುನಿಕ ಬಸ್ಸು ನಿಲ್ದಾಣ ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಎಚ್.ಕೆ. ಪಾಟೀಲ್ ತಿಳಿಸಿದರು.
ಸಂಪುಟದ ಇತರೆ ತೀರ್ಮಾನಗಳು:
-ಕೆಐಎಡಿಬಿ ಭೂಸ್ವಾಧೀನ ವೆಚ್ಚಗಳಿಗೆ ಅನುವಾಗುವಂತೆ ಸಾಲ ಪಡೆಯುವ ಮಿತಿಯನ್ನು 500 ಕೋಟಿ ರು.ಗಳಿಂದ 5,000 ಕೋಟಿ ರು.ಗೆ ಹೆಚ್ಚಳ.
-ದಾವಣಗೆರೆ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಶೇ.90 ರಷ್ಟು ರಿಯಾಯಿತಿ ದರದಲ್ಲಿ 591.63 ಚ.ಮೀ. ನಿವೇಶನ ಮಂಜೂರು.
-ಚಿಂತಾಮಣಿಯ ತಾಲೂಕಿನ ವಡಗನಹಳ್ಳಿಯಲ್ಲಿ 149.75 ಕೋಟಿ ರು. ವೆಚ್ಚದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಕಾಲೇಜು ಕಟ್ಟಡ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ.
-ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಭಾಘದ ಸರ್ಕಾರಿ ವಸತಿ ನಿಲಯಗಳಿಗೆ 56.92 ಕೋಟಿ ರು. ವೆಚ್ಚದಲ್ಲಿ ಬೆಡ್‌ಶೀಟ್, ಸೊಳ್ಳೆ ಪರದೆ ಸೇರಿ ಇತರೆ ಅಗತ್ಯ ವಸ್ತುಗಳ ಖರೀದಿ.
-ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ, ಬಿಳಿ ಜೋಳ ಖರೀದಿಗೆ 10.88 ಕೋಟಿ ರು. ವೆಚ್ಚದಲ್ಲಿ 15 ಲಕ್ಷ ಸೆಣಬಿನ ಗೋಣಿ ಚೀಲ ಖರೀದಿ.