‘ಈ ಬಾರಿಯ ಗಣೇಶೋತ್ಸವ ವೇಳೆ ಮಸೀದಿ ಮುಂದೆ ಪಟಾಕಿ ಹೊಡೆದರೆ ಗ್ರಹಚಾರ ಬಿಡಿಸ್ತೇನೆ. ಅಲ್ಲಿ ನಾವು ಭದ್ರತೆ ಹಾಕಿರ್ತಿವಿ. ನೀವು ಮೆರವಣಿಗೆ ಮಾಡುವ ರೂಟ್ ಕೊಟ್ಟು ಗಣಪತಿ ಕೂರಿಸಬೇಕು’ ಎಂದು ಗಣೇಶ ಹಬ್ಬ ಮಾಡುವ ಯುವಕರಿಗೆ ಮೈಸೂರು ಜಿಲ್ಲೆ ಟಿ.ನರಸೀಪುರ ಠಾಣೆಯ ಇನ್‌ಸ್ಪೆಕ್ಟರ್ ಧನಂಜಯ ಖಡಕ್ ವಾರ್ನಿಂಗ್
ಮೈಸೂರು : ‘ಈ ಬಾರಿಯ ಗಣೇಶೋತ್ಸವ ವೇಳೆ ಮಸೀದಿ ಮುಂದೆ ಪಟಾಕಿ ಹೊಡೆದರೆ ಗ್ರಹಚಾರ ಬಿಡಿಸ್ತೇನೆ. ಅಲ್ಲಿ ನಾವು ಭದ್ರತೆ ಹಾಕಿರ್ತಿವಿ. ನೀವು ಮೆರವಣಿಗೆ ಮಾಡುವ ರೂಟ್ ಕೊಟ್ಟು ಗಣಪತಿ ಕೂರಿಸಬೇಕು’ ಎಂದು ಗಣೇಶ ಹಬ್ಬ ಮಾಡುವ ಯುವಕರಿಗೆ ಮೈಸೂರು ಜಿಲ್ಲೆ ಟಿ.ನರಸೀಪುರ ಠಾಣೆಯ ಇನ್‌ಸ್ಪೆಕ್ಟರ್ ಧನಂಜಯ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಶಾಂತಿ ಸಭೆ ನಡೆಸಿರುವ ಇನ್‌ಸ್ಪೆಕ್ಟರ್
ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಹಿಂದೂ ಯುವಕರನ್ನು ಗುಂಪು ಸೇರಿಸಿಕೊಂಡು ಶಾಂತಿ ಸಭೆ ನಡೆಸಿರುವ ಇನ್‌ಸ್ಪೆಕ್ಟರ್ ಧನಂಜಯ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ.
ಮಸೀದಿ ಮುಂದೆಯೇ ಗಣೇಶನ ಮೆರವಣಿಗೆ ಹೋಗಬೇಕು ಎನ್ನುವ ಹಾಗಿಲ್ಲ. ಟಿ.ನರಸೀಪುರ ಲಿಂಕ್ ರಸ್ತೆಯಲ್ಲಿ ಮೆರವಣಿಗೆ ಹೋಗಬಾರದು. ನಾವು ಹಾಕಿಕೊಡುವ ಮಾರ್ಗದಲ್ಲೇ ಹೋಗಬೇಕು. ಮಸೀದಿ ಮುಂದೆ ಮೆರವಣಿಗೆ ಹೋಗುವಂತಿಲ್ಲ. ನನ್ನ ಗಮನಕ್ಕೆ ಬಂದ್ರೆ ಹೇಳಲ್ಲ, ಮಾಡಿ ತೋರಿಸ್ತೀನಿ ಎಂದು ಇನ್‌ಸ್ಪೆಕ್ಟರ್ ಧನಂಜಯ ಎಚ್ಚರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದಕ್ಕೆ ಬಿಜೆಪಿ, ಹಿಂದೂಪರ ಸಂಘಟನೆಗಳ ಕಾರ್ಯಕರ್ತರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವಾರು ಮಂದಿ ಈ ಹೇಳಿಕೆಯನ್ನು ಖಂಡಿಸಿದ್ದಾರೆ.