ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕಾಗಿ ಮೊದಲ ತಂಡದ ದಸರಾ ಗಜಪಡೆಯು ಆ.26 ರಂದು ಕಾಡಿನಿಂದ ನಾಡಿಗೆ ಆಗಮಿಸಲಿವೆ. ಗಜಪಡೆಯ ವಾಸ್ತವ್ಯಕ್ಕೆ ಮೈಸೂರು ಅರಮನೆ ಆವರಣದಲ್ಲಿ ತಾತ್ಕಾಲಿಕ ಶೆಡ್‌ಗಳ ನಿರ್ಮಾಣ ಕಾರ್ಯವು ಪ್ರಗತಿಯಲ್ಲಿದೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕಾಗಿ ಮೊದಲ ತಂಡದ ದಸರಾ ಗಜಪಡೆಯು ಆ.26 ರಂದು ಕಾಡಿನಿಂದ ನಾಡಿಗೆ ಆಗಮಿಸಲಿವೆ. ಗಜಪಡೆಯ ವಾಸ್ತವ್ಯಕ್ಕೆ ಮೈಸೂರು ಅರಮನೆ ಆವರಣದಲ್ಲಿ ತಾತ್ಕಾಲಿಕ ಶೆಡ್‌ಗಳ ನಿರ್ಮಾಣ ಕಾರ್ಯವು ಪ್ರಗತಿಯಲ್ಲಿದ್ದು, ಆ.28ಕ್ಕೆ ಅರಮನೆ ಆವರಣಕ್ಕೆ ದಸರಾ ಗಜಪಡೆ ಪ್ರವೇಶಿಸಲಿವೆ.

ದಸರಾ ಜಂಬೂಸವಾರಿ ಮೆರವಣಿಗೆ

ದಸರಾ ಜಂಬೂಸವಾರಿ ಮೆರವಣಿಗೆ ಮುಗಿಯುವವರೆಗೂ ಅರಮನೆ ಆವರಣದಲ್ಲಿ ವಾಸ್ತವ್ಯ ಹೂಡಲಿರುವ ಗಜಪಡೆ ಜೊತೆಗೆ ಮಾವುತರು, ಕಾವಾಡಿಗಳ ಕುಟುಂಬ ಸದಸ್ಯರು ಕೂಡ ವಾಸ್ತವ್ಯ ಹೂಡಲು ತಾತ್ಕಾಲಿಕ ಶೆಡ್‌ಗಳನ್ನು ನಿರ್ಮಿಸಲಾಗುತ್ತಿದೆ.

ಮೊದಲ ತಂಡದಲ್ಲಿ 9 ಆನೆಗಳು

ಮೊದಲ ತಂಡದಲ್ಲಿ 9 ಆನೆಗಳು ಬರಲಿದ್ದು, ಎರಡನೇ ಹಂತದಲ್ಲಿ 3 ಆನೆಗಳು ಮೈಸೂರಿಗೆ ಆಗಮಿಸಲಿದೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕು ವೀರನಹೊಸಹಳ್ಳಿಯಲ್ಲಿ ಆ.26ರಂದು ದಸರಾ ಗಜಪಯಣ ಆರಂಭವಾಗಲಿದೆ. ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ, ರಾಮಲಿಂಗಾ ರೆಡ್ಡಿ, ಶಿವರಾಜ ತಂಗಡಗಿ ಪಾಲ್ಗೊಳ್ಳಲಿದ್ದಾರೆ.