ನಗರದ ವಸ್ತು ಪ್ರದರ್ಶನ ಆವರಣದಲ್ಲಿ ಕೇಂದ್ರ ಸರ್ಕಾರ ನಿರ್ಮಿಸಲು ಉದ್ದೇಶಿಸಿದ್ದ ಏಕತಾ ಮಹಲ್‌ ವಿಚಾರದಲ್ಲಿ ಸಂಸದ ಯದುವೀರ್‌ ಒಡೆಯರ್‌ ಹಾಗೂ ರಾಜ ವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ವೈರುಧ್ಯದ ನಡೆ ಪ್ರದರ್ಶಿಸಿದ್ದಾರೆ.

 ಮೈಸೂರು : ನಗರದ ವಸ್ತು ಪ್ರದರ್ಶನ ಆವರಣದಲ್ಲಿ ಕೇಂದ್ರ ಸರ್ಕಾರ ನಿರ್ಮಿಸಲು ಉದ್ದೇಶಿಸಿದ್ದ ಏಕತಾ ಮಹಲ್‌ ವಿಚಾರದಲ್ಲಿ ಸಂಸದ ಯದುವೀರ್‌ ಒಡೆಯರ್‌ ಹಾಗೂ ರಾಜ ವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ವೈರುಧ್ಯದ ನಡೆ ಪ್ರದರ್ಶಿಸಿದ್ದಾರೆ.

ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶ

 ಜಿಲ್ಲೆಯ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸಲು ಉದ್ದೇಶಿಸಿದ್ದ ಏಕತಾ ಮಹಲ್ (ಯೂನಿಟಿ ಮಾಲ್) ಕಾಮಗಾರಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಜಾಗ ತಮಗೆ ಸೇರಿದೆಂದು ಹೈಕೋರ್ಟ್‌ನಲ್ಲಿ ತಡೆಯಾಜ್ಞೆ

 ಪ್ರಮೋದಾದೇವಿ ಒಡೆಯರ್ ಈ ಜಾಗ ತಮಗೆ ಸೇರಿದೆಂದು ಹೈಕೋರ್ಟ್‌ನಲ್ಲಿ ತಡೆಯಾಜ್ಞೆ ತಂದಿದ್ದಾರೆ. ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ 2 ವಾರದೊಳಗೆ ಉತ್ತರ ನೀಡುವಂತೆ ನ್ಯಾಯಾಲಯ ಸೂಚಿಸಿದೆ. 

ಕೇಂದ್ರ ಪುರಸ್ಕೃತ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಧನಾ ಸಮಾವೇಶದ ವೇಳೆ ಚಾಲನೆ ನೀಡಿದ್ದರು. ಜು.28ರಂದು ಸಂಸದ ಯದುವೀರ್‌ ಒಡೆಯರ್‌, ಶಾಸಕ ಟಿ.ಎಸ್‌.ಶ್ರೀವತ್ಸ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದರು. ಕಾಮಗಾರಿಯನ್ನು ಗುಣಮಟ್ಟದಿಂದ ನಡೆಸುವಂತೆ ಸೂಚಿಸಿದ್ದರು.