ಸಾರಾಂಶ
ದಸರಾ ಹಬ್ಬದ ಅಂಗವಾಗಿ ಹೊರರಾಜ್ಯಗಳಿಂದ ಮೈಸೂರಿಗೆ ಬರುವ ಪ್ರವಾಸಿ ವಾಹನಗಳಿಗೆ ಅ. 4ರಿಂದ 12ರವರೆಗೆ ಪ್ರವೇಶ ತೆರಿಗೆ ವಿನಾಯಿತಿ ನೀಡಿ ಸಾರಿಗೆ ಇಲಾಖೆ ಆದೇಶಿಸಿದೆ.
ಬೆಂಗಳೂರು : ದಸರಾ ಹಬ್ಬದ ಅಂಗವಾಗಿ ಹೊರರಾಜ್ಯಗಳಿಂದ ಮೈಸೂರಿಗೆ ಬರುವ ಪ್ರವಾಸಿ ವಾಹನಗಳಿಗೆ ಅ. 4ರಿಂದ 12ರವರೆಗೆ ಪ್ರವೇಶ ತೆರಿಗೆ ವಿನಾಯಿತಿ ನೀಡಿ ಸಾರಿಗೆ ಇಲಾಖೆ ಆದೇಶಿಸಿದೆ.
ಯಾವುದೇ ಹಳದಿ ಬೋರ್ಡ್ ವಾಹನಗಳು ರಾಜ್ಯ ಪ್ರವೇಶಿಸಲು ಪ್ರವೇಶ ತೆರಿಗೆ ಪಾವತಿಸುವುದು ಕಡ್ಡಾಯವಾಗಿದೆ. ಆದರೆ, ದಸರಾ ಹಬ್ಬದ ಸಂದರ್ಭದಲ್ಲಿ ಮೈಸೂರಿಗೆ ಪ್ರವಾಸಕ್ಕೆಂದು ಬರುವ ಹೊರ ರಾಜ್ಯದ ಹಳದಿ ಬೋರ್ಡ್ ವಾಹನಗಳಿಗೆ ಪ್ರವೇಶ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಲಾಗಿದೆ. ಅಲ್ಲದೆ, ರಾಜ್ಯ ಪ್ರವೇಶಕ್ಕೂ ಮುನ್ನ ಗಡಿ ಭಾಗದಲ್ಲಿ ವಿಶೇಷ ರಹದಾರಿ ಪಡೆಯಬೇಕಿದೆ.
ಮೈಸೂರು ನಗರ ಮತ್ತು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಜಲಾಶಯ ವೀಕ್ಷಿಸಲು ಬರುವ ಪ್ರವಾಸಿ ವಾಹನಗಳಿಗೆ ಮಾತ್ರ ಅನ್ವಯವಾಗಲಿದೆ ಎಂದು ಸಾರಿಗೆ ಇಲಾಖೆ ಆದೇಶದಲ್ಲಿ ತಿಳಿಸಿದೆ.