ಗ್ರಾಮೀಣ ಪ್ರದೇಶದ ಮಕ್ಕಳು ಕೀಳರಿಮೆ ಬಿಟ್ಟು, ಛಲದಿಂದ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಬೇಕು: ವೈ.ಕೆ. ಪುಟ್ಟಸೋಮೇಗೌಡನಗರ, ಪಟ್ಟಣ ಪ್ರದೇಶಗಳಲ್ಲಿ ಕಾನ್ವೆಂಟ್‌ಗಳಲ್ಲಿ ಓದಿದ ಮಕ್ಕಳ ಜೊತೆ ಗ್ರಾಮೀಣ ಪ್ರದೇಶದ ಮಕ್ಕಳು ಸ್ಪರ್ಧಿಸಲು ಸಾಧ್ಯವಿಲ್ಲ. ಅವರಿಗೆ ತರಬೇತಿ ನೀಡಬೇಕು ಎಂಬ ಉದ್ದೇಶದಿಂದ ಟ್ರಸ್ಟ್ ಅನ್ನು ಆರಂಭಿಸಲಾಗಿದೆ. ಆದ್ದರಿಂದ ಗ್ರಾಮೀಣ ವಿದ್ಯಾರ್ಥಿಗಳು ಸವಾಲನ್ನು ಗಟ್ಟಿತನದಿಂದ ಎದುರಿಸಬೇಕು. ವೈದ್ಯರು, ಎಂಜಿನಿಯರುಗಳು ಮಾತ್ರವಲ್ಲದೇ ಐಎಎಸ್, ಐಪಿಎಸ್ ಮೊದಲಾದ ಪರೀಕ್ಷೆಗಳನ್ನು ಪಾಸು ಮಾಡಬೇಕು.