ಕ್ಷಯ ರೋಗ ಮುಕ್ತ ಜಿಲ್ಲೆ ಮಾಡಲು ಎಲ್ಲರೂ ಕೈಜೋಡಿಸಿ: ಕೆ.ಎಂ.ಗಾಯತ್ರಿ ಕರೆನಿಕ್ಷಯ ಪೋರ್ಟಲ್‌ನಲ್ಲಿ ಕ್ಷಯ ರೋಗಿಗಳನ್ನು ಅಡಾಪ್ಟ್ ಮಾಡಿಕೊಳ್ಳಲು ಅವಕಾಶ ಇದೆ. ಈ ರೋಗಿಗಳ ಔಷಧಿಗಳನ್ನು ನೀಡಲು ಕಡಿಮೆ ಮೊತ್ತದ ಹಣವನ್ನು ಒದಗಿಸಬಹುದು. ಯಾರು ಬೇಕಾದರೂ ಅಡಾಪ್ಟ್ ಮಾಡಿಕೊಳ್ಳಬಹುದು. ಮೊದಲು ನಾವು ಕ್ಷಯ ರೋಗಿಗಳನ್ನು ಪತ್ತೆ ಹಚ್ಚಬೇಕು. ಇದು ಒಬ್ಬರಿಂದ ಒಬ್ಬರಿಗೆ ಹರಡುವ ಕಾಯಿಲೆ ಆಗಿರುವುದರಿಂದ ಇದಕ್ಕೆ ಚಿಕಿತ್ಸೆ ನೀಡಿ, ಹರಡದಂತೆ ನೋಡಿಕೊಳ್ಳ್ಳಬೇಕು.